IPL 2023: ಚಿದಂಬರಂ ಮೈದಾನದ ಆಸನಗಳಿಗೆ ಹಳದಿ ಬಣ್ಣ ಬಳಿದ ಎಂಎಸ್‌ ಧೋನಿ

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ಮಾರ್ಚ್ 31ರಂದು ಅದ್ದೂರಿಯಾಗಿ ಚಾಲನೆ ಸಿಗಲಿದೆ. ಎಲ್ಲಾ 10 ತಂಡಗಳು ಈಗಾಗಲೇ ಭರ್ಜರಿಯಾಗಿ ಅಭ್ಯಾಸ ಮಾಡುತ್ತಿವೆ. ಅಭಿಮಾನಿಗಳು ಈ ಬಾರಿ ತವರಿನಲ್ಲಿ ತಮ್ಮ ತಂಡಕ್ಕೆ ಬೆಂಬಲ ನೀಡಲು ಸಜ್ಜಾಗಿದ್ದಾರೆ.

ತಂಡಗಳು ಮಾತ್ರವಲ್ಲದೆ ದೇಶದ 12 ಕ್ರೀಡಾಂಗಣಗಳು ಐಪಿಎಲ್ ಪಂದ್ಯಗಳಿಗೆ ಆತಿಥ್ಯ ವಹಿಸಲು ಸಜ್ಜಾಗಿವೆ. ಕೋವಿಡ್ ಸಾಂಕ್ರಾಮಿಕದ ನಂತರ ಇದೇ ಮೊದಲ ಬಾರಿಗೆ ಐಪಿಎಲ್ ಪಂದ್ಯಗಳು ತವರು ಮತ್ತು ಹೊರಗಿನ ಮಾದರಿಯಲ್ಲಿ ನಡೆಯಲಿವೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ತವರಿನಲ್ಲಿ ಪಂದ್ಯವನ್ನಾಡುತ್ತಿರುವುದು ಅಭಿಮಾನಿಗಳ ಖುಷಿಯನ್ನು ದ್ವಿಗುಣಗೊಳಿಸಿದೆ.

IPL 2023: MS Dhoni Paints Chepauk Yellow Ahead Of CSKs Highly Anticipated Return To Home Ground

ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚೆಪಾಕ್‌ನಲ್ಲಿ ಅಭಿಮಾನಿಗಳ ಮುಂದೆ ಪಂದ್ಯವನ್ನಾಡಲಿದೆ. ಮಾರ್ಚ್ 31ರಂದು ಸಿಎಸ್‌ಕೆ ಉದ್ಘಾಟನಾ ಪಂದ್ಯವನ್ನು ಗುಜರಾತ್ ಜೈಂಟ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯ ಅಹಮಾದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಸ್‌ಕೆ ತಮ್ಮ ಎರಡನೇ ಪಂದ್ಯವನ್ನು ತವರಿನಲ್ಲಿ ಆಡಲಿದ್ದು, ಏಪ್ರಿಲ್ 3ರಂದು ಲಕ್ನೂ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದ್ದಾರೆ.

ಹಳದಿ ಬಣ್ಣ ಬಳಿದ ಎಂಎಸ್ ಧೋನಿ

ಸಿಎಸ್‌ಕೆ ತಂಡದ ನಾಯಕ ಎಂಎಸ್‌ ಧೋನಿ ಚಿದಂಬರಂ ಕ್ರೀಡಾಂಗಣದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಐಪಿಎಲ್ ಆರಂಭಕ್ಕೆ ಒಂದು ತಿಂಗಳ ಮೊದಲನೇ ಚಿದಂಬರಂ ಕ್ರೀಡಾಂಗಣಕ್ಕೆ ಬಂದಿದ್ದ ಅವರು ಭರ್ಜರಿಯಾಗಿ ಅಭ್ಯಾಸ ಮಾಡಿದ್ದಾರೆ.

ಮೂರು ವರ್ಷಗಳ ನಂತರ ತವರಿನ ಅಭಿಮಾನಿಗಳ ಮುಂದೆ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಪಂದ್ಯಕ್ಕೆ ಕೆಲವೇ ದಿನಗಳಿರುವಾಗ ಚಿದಂಬರಂ ಕ್ರೀಡಾಂಗಣ ಮೊದಲನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ನಾಯಕ ಎಂಎಸ್ ಧೋನಿ ಕೂಡ ಕ್ರೀಡಾಂಗಣದ ಆಸನಗಳಿಗೆ ಹಳದಿ ಬಣ್ಣ ಬಳಿಯುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.

IPL 2023: MS Dhoni Paints Chepauk Yellow Ahead Of CSKs Highly Anticipated Return To Home Ground

2023ರ ಐಪಿಎಲ್ ನಂತರ ಧೋನಿ ನಿವೃತ್ತಿಯಾಗುತ್ತಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಧೋನಿ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ಆದರೂ ಚೆಪಾಕ್‌ನಲ್ಲಿ ಅಭಿಮಾನಿಗಳ ಮುಂದೆ ಅಂತಿಮ ಪಂದ್ಯವನ್ನಾಡುವ ಮೂಲಕ ಕ್ರಿಕೆಟ್ ವೃತ್ತಿಬದುಕಿಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ. 41ನೇ ವರ್ಷದಲ್ಲಿಯೂ ಕೂಡ ಧೋನಿ ಫಿಟ್ ಆಗಿ ಕಾಣುತ್ತಿದ್ದಾರೆ. ನೆಟ್ಸ್‌ನಲ್ಲಿ ಅಭ್ಯಾಸದ ವೇಳೆ ಸಿಕ್ಸರ್ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಟಿಕೆಟ್ ಮಾರಾಟ ಆರಂಭಿಸಿದ ಸಿಎಸ್‌ಕೆ

ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ಐಪಿಎಲ್ 2023ರ ಚೆನ್ನೈನ ಮೊದಲನೇ ಪಂದ್ಯಕ್ಕಾಗಿ ಟಿಕೆಟ್ ಮಾರಾಟ ಆರಂಭಿಸಿದೆ. ಏಪ್ರಿಲ್ 3ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮೊದಲನೇ ಪಂದ್ಯಕ್ಕಾಗಿ ಟಿಕೆಟ್‌ ಮಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಮಾರಾಟವಾಗಿದೆ.

ಕೆಲವೇ ನಿಮಿಷಗಳಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿದ್ದು, ಚೆಪಾಕ್ ಸ್ಟೇಡಿಯಂನ ಎರಡು ಕೌಂಟರ್ ಗಳಲ್ಲಿ ಕೂಡ ಟಿಕೆಟ್ ಮಾರಾಟ ಮಾಡಲಾಗಿದೆ. ಧೋನಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

2023ರ ಐಪಿಎಲ್‌ಗೆ ಸಿಎಸ್‌ಕೆ ತಂಡ: ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಮತೀಶ ಚೌಧರಿ, ಮತೀಶ ಚೌಧರಿ ಸಿಂಗ್ , ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಕ್ ರಶೀದ್, ನಿಶಾಂತ್ ಸಿಂಧು, ಸಿಸಂದಾ ಮಗಳ, ಅಜಯ್ ಮಂಡಲ್, ಭಗತ್ ವರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+