IPL 2023: ಎಂಎಸ್ ಧೋನಿ vs ಕ್ರಿಸ್ ಗೇಲ್; ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರಾರು?
ಬಹುನಿರೀಕ್ಷಿತ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್ ಇದೇ ಮಾರ್ಚ್ 31ರಂದು ಅದ್ಧೂರಿಯಾಗಿ ಆರಂಭಗೊಳ್ಳಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ವಿಶ್ವದ ಅತ್ಯಂತ ಜನಪ್ರಿಯ ಮತ್ತು ಶ್ರೀಮಂತ ಟಿ20 ಕ್ರಿಕೆಟ್ ಲೀಗ್‌ಗಳಲ್ಲಿ ಅಗ್ರಗಣ್ಯ. ವಿಶ್ವದ ಹಲವು ಪ್ರಮುಖ ಆಟಗಾರರು ಈ ಪಂದ್ಯಾವಳಿಯಲ್ಲಿ ಆಡಿ ತಮ್ಮ ಕೌಶಲ್ಯ ಪ್ರದರ್ಶಿಸಿದ್ದಾರೆ.

ಐಪಿಎಲ್ ಟೂರ್ನಿ ಇತಿಹಾಸದಲ್ಲಿ ಇಬ್ಬರು ಲೆಜೆಂಡ್‌ಗಳಾದ ಕ್ರಿಸ್ ಗೇಲ್ ಮತ್ತು ಎಂಎಸ್ ಧೋನಿ ಅವರುಗಳು ತಮ್ಮ ತಂಡಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ ಆಟಗಾರರಾಗಿದ್ದಾರೆ. ಇದೀಗ ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರು ಯಾರು ಎಂಬುದು ಎಲ್ಲರಿಗೂ ಮೂಡಿರುವ ಪ್ರಶ್ನೆಯಾಗಿದೆ ಮತ್ತು ಅದಕ್ಕೆ ಉತ್ತರ ಇಲ್ಲಿದೆ.
ವೆಸ್ಟ್ ಇಂಡೀಸ್ ದೈತ್ಯ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ವಿಶ್ವದ ಅತ್ಯಂತ ಸ್ಫೋಟಕ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್, ಕೋಲ್ಕತ್ತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆ್‌ಸಿಬಿ) ತಂಡಗಳ ಪರ ಆಡಿದ್ದಾರೆ.

ಕ್ರಿಸ್ ಗೇಲ್ ಆರಂಭಿಕ ಬ್ಯಾಟರ್ ಆಗಿ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ ಮತ್ತು ಸುಲಭವಾಗಿ ಸಿಕ್ಸರ್ ಬಾರಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಅವರ ಬ್ಯಾಟಿಂಗ್ ಸಾಮರ್ಥ್ಯ ನೋಡಿ ಅಭಿಮಾನಿಗಳು ಅವರನ್ನು ಯೂನಿವರ್ಸ್ ಬಾಸ್ ಎಂಬ ಬಿರುದು ನೀಡಿದ್ದಾರೆ.
ಈಗಾಗಲೇ ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕ್ರಿಸ್ ಗೇಲ್, ಐಪಿಎಲ್ ಪಂದ್ಯಾವಳಿಯಲ್ಲಿ 142 ಪಂದ್ಯಗಳಲ್ಲಿ ಆರು ಶತಕ ಮತ್ತು 31 ಅರ್ಧಶತಕ ಸೇರಿದಂತೆ 4,965 ರನ್ ಗಳಿಸಿದ್ದಾರೆ.

ಮತ್ತೊಂದೆಡೆ, ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡಕ್ಕಾಗಿ ಆಡಿದ್ದಾರೆ. ಈವರೆಗಿನ ಪಂದ್ಯಾವಳಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ಸಿನ ಅವಿಭಾಜ್ಯ ಅಂಗವಾಗಿದ್ದಾರೆ.
ಎಂಎಸ್ ಧೋನಿ 234 ಪಂದ್ಯಗಳಲ್ಲಿ 24 ಅರ್ಧಶತಕ ಸೇರಿದಂತೆ 4,978 ರನ್ ಗಳಿಸಿದ್ದಾರೆ. ಎಂಎಸ್ ಧೋನಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಈವರೆಗೆ 229 ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಗಾದರೆ, ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದವರು ಯಾರು ಎಂಬ ಪ್ರಶ್ನೆಗೆ ಉತ್ತರ ಕ್ರಿಸ್ ಗೇಲ್ ಆಗಿದೆ. ಐಪಿಎಲ್ ಪಂದ್ಯಾವಳಿಯಲ್ಲಿ ಕ್ರಿಸ್ ಗೇಲ್ 357 ಸಿಕ್ಸರ್‌ಗಳನ್ನು ಬಾರಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅಲ್ಲದೇ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಆಟಗಾರನಾಗಿದ್ದಾರೆ.
ಎಂಎಸ್ ಧೋನಿ ಮತ್ತು ಕ್ರಿಸ್ ಗೇಲ್ ಅವರಷ್ಟು ಸಿಕ್ಸರ್‌ಗಳನ್ನು ಬಾರಿಸಿಲ್ಲವಾದರೂ, ಆಟಕ್ಕೆ ಸಂಬಂಧಿಸಿದಂತೆ ಧೋನಿ ಕೊಡುಗೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಎಂಎಸ್ ಧೋನಿ ವಿಶ್ವದ ಅತ್ಯುತ್ತಮ ಫಿನಿಶರ್‌ಗಳಲ್ಲಿ ಒಬ್ಬರಾಗಿದ್ದಾರೆ. ಅವರ ನಾಯಕತ್ವದ ಕೌಶಲ್ಯದ ವಿಧಾನದಿಂದ ಸಿಎಸ್‌ಕೆ ತಂಡಕ್ಕಾಗಿ ಹಲವಾರು ಪಂದ್ಯಗಳನ್ನು ಗೆದ್ದು ಕೊಟ್ಟಿದ್ದಾರೆ.
ಎಂಎಸ್ ಧೋನಿ ನಾಯಕತ್ವದಲ್ಲಿ ಸಿಎಸ್‌ಕೆ ತಂಡ 4 ಬಾರಿ ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ಇದೇ ವೇಳೆ 2023ರ ಐಪಿಎಲ್‌ನಲ್ಲಿ ಮತ್ತೊಮ್ಮೆ ಟ್ರೋಫಿ ಎತ್ತಿ ಹಿಡಿಯಲು ಎದುರು ನೋಡುತ್ತಿದೆ. ಇನ್ನು ಕ್ರಿಸ್ ಗೇಲ್ ಕ್ರಿಕೆಟ್ ಆಡುವುದರಿಂದ ದೂರ ಉಳಿದಿದ್ದು, ಆರ್‌ಸಿಬಿ ತಂಡವನ್ನು ಬೆಂಬಲಿಸಲಿದ್ದಾರೆ.












Click it and Unblock the Notifications