IPL 2023: ಮುಂಬೈ ಇಂಡಿಯನ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ, ಸಂಭಾವ್ಯ ಬಲಿಷ್ಠ ಆಡುವ 11ರ ಬಳಗ, ಪೂರ್ಣ ತಂಡ
2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತು ಸಮೀಪಿಸುತ್ತಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ.
ಇನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ 2022ರ ಐಪಿಎಲ್ ಅತ್ಯಂತ ಹೀನಾಯವಾಗಿತ್ತು. ಆಡಿದ 14 ಪಂದ್ಯಗಳಲ್ಲಿ 10ರಲ್ಲಿ ಸೋಲು ಕಂಡು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. ಈವರೆಗಿನ 15 ಆವೃತ್ತಿಗಳಲ್ಲಿ ಮೊದಲ ಬಾರಿ ಕೊನೆಯ ಸ್ಥಾನ ಪಡೆದ ಮುಂಬೈ ಇಂಡಿಯನ್ಸ್ ಕೆಟ್ಟ ಪ್ರದರ್ಶನ ನೀಡಿತ್ತು.

ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಆಡುತ್ತಿದ್ದು, ಅವರ ಅನುಪಸ್ಥಿತಿಯಲ್ಲಿ ಜೋಫ್ರಾ ಆರ್ಚರ್ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಭಾವಿಸಿದೆ.
ಮುಂಬೈ ತಂಡದ ಜೊತೆಗೆ ನಾಯಕ ರೋಹಿತ್ ಶರ್ಮಾ ಕೂಡ ಕಳಪೆ ಪ್ರದರ್ಶನದೊಂದಿಗೆ ಕಳೆದ ಋತು ಮುಗಿಸಿದ್ದರು. ಏಕೆಂದರೆ ಐಪಿಎಲ್‌ನ ಇತಿಹಾಸದಲ್ಲಿ ರೋಹಿತ್ ಶರ್ಮಾ ಒಂದೇ ಒಂದು ಅರ್ಧಶತಕವಿಲ್ಲದ ಐಪಿಎಲ್ ಪಂದ್ಯಾವಳಿ ಆಡಿದ್ದರು. ಇಡೀ ಪಂದ್ಯಾವಳಿಯಲ್ಲಿ 19.14ರ ಸರಾಸರಿಯಲ್ಲಿ ಕೇವಲ 268 ರನ್ ಗಳಿಸಿದ್ದರು.
2023ರ ಐಪಿಎಲ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹೊಸ ಹುಮ್ಮಸ್ಸಿನಲ್ಲಿ ಆಡಲು ಎದುರು ನೋಡುತ್ತಿದೆ. ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಮತ್ತೊಮ್ಮೆ ಘರ್ಜಿಸಲು ಕಾತರರಾಗಿದ್ದಾರೆ.

ಈ ಬಾರಿ ಮುಂಬೈ ಇಂಡಿಯನ್ಸ್ ತಂಡ ಯುವ ಮತ್ತು ಅನುಭವಿ ಆಟಗಾರರೊಂದಿಗೆ ಕಣಕ್ಕಿಳಿಯಲಿದ್ದು, ತಮ್ಮ ತಂಡವನ್ನು ಮತ್ತೊಮ್ಮೆ ಚಾಂಪಿಯನ್ ಮಾಡಲು ಸಜ್ಜಾಗಿದ್ದಾರೆ. ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಸ್ಟಬ್ಸ್, ಟಿಮ್ ಡೇವಿಡ್ ಮತ್ತು ಕ್ಯಾಮೆರಾನ್ ಗ್ರೀನ್ ಅವರಂತಹ ಯುವ ಪ್ರತಿಭೆಗಳನ್ನು ಹೊಂದಿದೆ.
ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಆಧಾರಸ್ತಂಭಗಳೆಂದರೆ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್. ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್ ಈಗಾಗಲೇ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಶ್ವ ನಂ.1 ಬ್ಯಾಟ್ಸ್‌ಮನ್ ಎನಿಸಿದ್ದಾರೆ.
ಇನ್ನು ಮುಂಬೈ ಇಂಡಿಯನ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಏಪ್ರಿಲ್ 2ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎದುರಿಸಲಿದೆ.
ಐಪಿಎಲ್ 2023: ಮುಂಬೈ ಇಂಡಿಯನ್ಸ್ ತಂಡದ ಪೂರ್ಣ ವೇಳಾಪಟ್ಟಿ
1) ಮುಂಬೈ ಇಂಡಿಯನ್ಸ್ vs ಆರ್‌ಸಿಬಿ - ಎಪ್ರಿಲ್ 2, ಬೆಂಗಳೂರು
2) ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಎಪ್ರಿಲ್ 8, ಮುಂಬೈ
3) ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ - ಎಪ್ರಿಲ್ 11, ದೆಹಲಿ
4) ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ - ಎಪ್ರಿಲ್ 16, ಮುಂಬೈ
5) ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ - ಎಪ್ರಿಲ್ 18, ಹೈದರಾಬಾದ್
6) ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ - ಎಪ್ರಿಲ್ 22, ಮುಂಬೈ
7) ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟನ್ಸ್- ಎಪ್ರಿಲ್ 25, ಅಹಮದಾಬಾದ್
8) ಮುಂಬೈ ಇಂಡಿಯನ್ಸ್ vs ರಾಜಸ್ಥಾನ ರಾಯಲ್ಸ್ - ಎಪ್ರಿಲ್ 30, ಮುಂಬೈ
9) ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ - ಮೇ 3, ಮೊಹಾಲಿ
10) ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ - ಮೇ 6, ಚೆನ್ನೈ
11) ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು - ಮೇ 9, ಮುಂಬೈ
12) ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟನ್ಸ್ - ಮೇ 12, ಮುಂಬೈ
13) ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್- ಮೇ 16, ಲಕ್ನೋ
14) ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ - ಮೇ 21, ಮುಂಬೈ

ಮುಂಬೈ ಇಂಡಿಯನ್ಸ್ ತಂಡದ ಸಂಭಾವ್ಯ ಬಲಿಷ್ಠ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್.
ಮುಂಬೈ ಇಂಡಿಯನ್ಸ್ ಪೂರ್ಣ ತಂಡ
ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಾಲ್. ರಾಘವ್ ಗೋಯಲ್, ನೆಹಾಲ್ ವಾಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್.












Click it and Unblock the Notifications