MI vs DC IPL 2023: ಸೋತ ತಂಡಗಳ ಹಣಾಹಣಿಯಲ್ಲಿ ಗೆಲುವು ಯಾರಿಗೆ?; ಪಂದ್ಯದ ವಿವರ, ಆಡುವ 11ರ ಬಳಗ
ಮಂಗಳವಾರ, ಏಪ್ರಿಲ್ 11ರಂದು ದೆಹಲಿಯಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಪಂದ್ಯದಲ್ಲಿ ಈವೆರೆಗೆ ಗೆಲುವೇ ಕಾಣದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ತಮ್ಮ ಮೊದಲ ಗೆಲುವಿಗಾಗಿ ಸೆಣಸಾಡಲಿವೆ.
ಬೆಂಗಳೂರಿನಲ್ಲಿ ನಡೆದ ರೋಚಕ ಪಂದ್ಯದ ನಂತರ, ಇದೀಗ ಎಲ್ಲರ ಗಮನ ದೆಹಲಿಗೆ ಸ್ಥಳಾಂತರಗೊಳ್ಳಲಿದೆ. ಐಪಿಎಲ್ 2023ರ ಅಂಕಪಟ್ಟಿಯಲ್ಲಿ ಕೆಳಗಿನಿಂದ ಮೊದಲೆರಡು ಸ್ಥಾನದಲ್ಲಿರುವ ತಂಡಗಳಾದ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗುತ್ತಿವೆ. ಎರಡು ತಂಡಗಳು ತಮ್ಮ ಮೊದಲ ಖಾತೆಯನ್ನು ತೆರೆಯಲು ಎದುರು ನೋಡುತ್ತಿವೆ.

ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ ಮೂರನ್ನು ಸೋತು ಹೀನಾಯ ಸ್ಥಿತಿಯಲ್ಲಿದೆ. ಮತ್ತೊಂದೆಡೆ, ರೋಹಿತ್ ಶರ್ಮಾ ನಾಯಕತ್ವದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಆಡಿದ ಎರಡು ಪಂದ್ಯಗಳಲ್ಲಿ ಎರಡನ್ನೂ ಸೋತಿದೆ.
ಗುವಾಹಟಿಯಲ್ಲಿ ಸೋತ ನಂತರ ರಾಜಸ್ಥಾನ ರಾಯಲ್ಸ್ ತಂಡದ ಕೊರತೆಯ ಬಗ್ಗೆ ಬೆರಳು ತೋರಿಸಲು ನನಗೆ ಸಾಧ್ಯವಾಗಲಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದರು. 200 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿತು. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿಯ ಬ್ಯಾಟಿಂಗ್ ತನ್ನ ಹಿಂದಿನ ಶಕ್ತಿಯ ಕುಂದಿದೆ ಎಂಬುದು ತೋರುತ್ತಿದೆ.

ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ನಾಯಕ ಡೇವಿಡ್ ವಾರ್ನರ್, ಪೃಥ್ವಿ ಶಾ, ಮನೀಶ್ ಪಾಂಡೆ, ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಮತ್ತು ಅನ್ರಿಚ್ ನಾರ್ಟ್ಜೆ ಅವರನ್ನು ನೆಚ್ಚಿಕೊಂಡಿದೆ.
ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ತಲಕ್ ವರ್ಮಾ, ಟಿಮ್ ಡೇವಿಡ್ ಮತ್ತು ಜೋಫ್ರಾ ಆರ್ಚರ್ ಅವರಂತಹ ಆಟಗಾರರನ್ನು ನೆಚ್ಚಿಕೊಂಡಿದೆ.

ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಹೆಡ್-ಟು-ಹೆಡ್
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಐಪಿಎಲ್‌ನಲ್ಲಿ 32 ಬಾರಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡ 17 ಬಾರಿ ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಬಾರಿ ಗೆದ್ದಿದೆ.
ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಮಂಗಳವಾರ, ಏಪ್ರಿಲ್ 11ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಸಂಜೆ 7.30ಕ್ಕೆ ಪ್ರಾರಂಭವಾಗುತ್ತದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ 11ರ ಬಳಗ
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಲೀ ರೊಸ್ಸೌ, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಲಲಿತ್ ಯಾದವ್, ಕಮಲೇಶ್ ನಾಗರಕೋಟಿ, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಅರ್ಷದ್ ಖಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಕುಮಾರ್ ಕಾರ್ತಿಕೇಯ.












Click it and Unblock the Notifications