IPL 2023: ಇಂದು ಹೈವೋಲ್ಟೇಜ್ ಪಂದ್ಯ: ಇಂಡಿಯನ್ಸ್‌ಗೆ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಸವಾಲು
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಮತ್ತೊಂದು ರೋಚಕ ಪಂದ್ಯ ನಡೆಯಲಿದೆ. ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಮುಂಬೈ ಇಂಡಿಯನ್ಸ್‌ಗೆ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಎದುರಾಳಿಯಾಗಿ ಕಣಕಿಳಿಯಲಿದೆ. ಕಳೆದ ಕೆಲ ಪಂದ್ಯಗಳಿಂದ ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಜಿಟಿ ಪಡೆಯ ಸವಾಲನ್ನು ತವರಿನಲ್ಲಿ ಯಾವ ರೀತಿಯಾಗಿ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.
ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಈವರೆಗೆ ಆಡಿರುವ 11 ಪಂದ್ಯಗಳ ಪೈಕಿ ಕೇವಲ 3 ಪಂದ್ಯಗಳಲ್ಲಿ ಮಾತ್ರವೇ ಸೋಲು ಅನುಭವಿಸಿದೆ. ಉಳಿದ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಈಗಾಗಲೇ 16 ಅಂಕಗಳನ್ನು ತನ್ನದಾಗಿಸಿಕೊಂಡಿದೆ. ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಗೆಲುವು ಸಾಧಿಸಿದಲ್ಲಿ ಜಿಟಿ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಪ್ಲೇಆಫ್‌ಗೆ ಅಧಿಕೃತವಾಗಿ ಎಂಟ್ರಿಕೊಟ್ಟ ಮೊದಲ ತಂಡ ಎನಿಸಿಕೊಳ್ಳಲಿದೆ.

ಇನ್ನು ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಆರಂಭಿಕ ಪಂದ್ಯಗಳಲ್ಲಿ ಹಿನ್ನಡೆ ಅನುಭವಿಸಿದ್ದರೂ ನಂತರ ಚೇತರಿಸಿಕೊಂಡಿತ್ತು. ನಂಯತರ ಮತ್ತೆ ಏರಿಳಿತ ಕಂಡರೂ ಸದ್ಯ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದು ತನ್ನ ಸ್ಥಾನವನ್ನು ಭದ್ರಗೊಳಿಸುವ ಪ್ರಯತ್ನ ಮಾಡಲಿದೆ ಎಂಐ. ಆರ್‌ಸಿಬಿ ವಿರುದ್ಧ ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಅಲ್ಲದೆ ರೋಹಿತ್ ಶರ್ಮಾ ಹೊರತುಪಡಿಸಿ ಉಳಿದ ಆಟಗಾರರು ಅದ್ಭುತ ಲಯದಲ್ಲಿರುವುದು ತಂಡಕ್ಕೆ ಹೆಚ್ಚಿನ ಬಲ ತುಂಬಿದೆ.
ಪಂದ್ಯದ ಮಾಹಿತಿ
ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೇ 11 ಗುರುವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ISSF ಶೂಟಿಂಗ್ ವಿಶ್ವಕಪ್: ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟ ಕನ್ನಡತಿ ದಿವ್ಯಾ- ಸರಬ್‌ಜೋತ್ ಸಿಂಗ್ ಜೋಡಿ
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್, ಕ್ರಿಸ್ ಜೋರ್ಡನ್












Click it and Unblock the Notifications