MI vs GT, Qualifier 2: ಪಿಚ್ ವರದಿ, ಸಂಭಾವ್ಯ ಆಡುವ ಬಳಗ & ನೇರಪ್ರಸಾರದ ಮಾಹಿತಿ

ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸದ್ಯ ಮುಕ್ತಾಯದ ಹಂತಕ್ಕೆ ತಲುಪಿದ್ದು, ಎರಡನೇ ಕ್ವಾಲಿಫಯರ್ ಹಾಗೂ ಫೈನಲ್ ಪಂದ್ಯಗಳು ಬಾಕಿ ಉಳಿದುಕೊಂಡಿವೆ.
ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ತಲುಪಿದ್ದು, ಸೋತ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲು ಮತ್ತೊಂದು ಅವಕಾಶವನ್ನು ಹೊಂದಿದ್ದು, ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದಿರುವ ತಂಡದ ವಿರುದ್ಧ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಸೆಣಸಾಡಲಿದೆ.
ಇನ್ನು ನಿನ್ನೆ ( ಮೇ 24 ) ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಗೆದ್ದ ಮುಂಬೈ ಇಂಡಿಯನ್ಸ್ ಎರಡನೇ ಕ್ವಾಲಿಫಯರ್ ಪಂದ್ಯ ತಲುಪಿದೆ. ಅತ್ತ ಸೋತ ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 183 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಲಕ್ನೋ ಸೂಪರ್ ಜೈಂಟ್ಸ್ 16.3 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ 81 ರನ್‌ಗಳ ಭರ್ಜರಿ ಗೆಲುವನ್ನು ಕಂಡಿತು.
ಹೀಗೆ ಲೀಗ್ ಹಂತದ ಆರಂಭದ ಪಂದ್ಯಗಳಲ್ಲಿ ಕಳಪೆ ಆಟವನ್ನಾಡಿ ಪ್ಲೇಆಫ್ ಪ್ರವೇಶಿಸುವುದರಲ್ಲಿ ಅನುಮಾನ ಮೂಡಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಸದ್ಯ ತನ್ನ ಆರನೇ ಐಪಿಎಲ್ ಟ್ರೋಫಿ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಎರಡನೆ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿ ಫೈನಲ್‌ಗೇರುವ ಯೋಜನೆಯನ್ನು ಹಾಕಿಕೊಂಡಿದೆ. ಈ ಪಂದ್ಯದ ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಹಾಗೂ ನೇರಪ್ರಸಾರದ ಮಾಹಿತಿ ಈ ಕೆಳಕಂಡಂತಿದೆ..
ಪಿಚ್ ವರದಿ: ಈ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿನ ಪಿಚ್ ವೇಗಿಗಳಿಗೆ ಉತ್ತಮವಾಗಿ ಬೆಂಬಲ ನೀಡಲಿದೆ. ಈ ಕ್ರೀಡಾಂಗಣದಲ್ಲಿ ಬ್ಯಾಟರ್‌ಗಳಿಗೆ ಹೆಚ್ಚಿನ ರನ್‌ಗಳಿಸುವ ಅವಕಾಶವಿದ್ದರೂ ಆರಂಭಿಕ ಹಂತದಲ್ಲಿ ಕೆಲ ಕಾಲ ಕ್ರೀಸ್‌ನಲ್ಲಿ ನೆಲೆಯೂರುವುದು ಸವಾಲೆನಿಸಲಿದೆ. ಅದಾದ ಬಿಳಿಕ ರನ್ ಸರಾಹವಾಗಿ ಹರಿದುಬರಲಿದೆ.
ಸಂಭಾವ್ಯ ಆಡುವ ಬಳಗ:
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್, ಹೃತಿಕ್ ಶೋಕೀನ್, ಆಕಾಶ್ ಮಧ್ವಲ್
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ದಸುನ್ ಶನಕ, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ದರ್ಶನ್ ನಲ್ಕಂಡೆ, ವಿಜಯ್ ಶಂಕರ್
ನೇರಪ್ರಸಾರದ ಮಾಹಿತಿ: ಈ ಪಂದ್ಯ ಸಂಜೆ 7.30ಕ್ಕೆ ಶುರುವಾಗಲಿದ್ದು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.












Click it and Unblock the Notifications