LSG vs MI: ಕಳೆದ ಬಾರಿ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 63ನೇ ಪಂದ್ಯ ಇಂದು ( ಮೇ 16 ) ನಡೆಯಲಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿದ್ದು, ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಈ ಎರಡೂ ತಂಡಗಳೂ ಸಹ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇಆಫ್ ಹಾದಿಯನ್ನು ಸುಲಭಪಡಿಸಿಕೊಳ್ಳಲಿದ್ದು, ಸೋಲುವ ತಂಡದ ಪ್ಲೇಆಫ್ ಪ್ರವೇಶದ ಹಾದಿ ಕಠಿಣಗೊಳ್ಳಲಿದೆ.
12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮುಂಬೈ ಇಂಡಿಯನ್ಸ್ ಗೆಲ್ಲಬೇಕಿದ್ದು, ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಬಹುತೇಕ ಖಚಿತವಾದಂತೆ.
ಅತ್ತ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ ಸುಲಭವಾಗಿ ಪ್ಲೇಆಫ್ ಪ್ರವೇಶ ಪಡೆದುಕೊಳ್ಳಲಿದೆ.
ಹೀಗೆ ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಪ್ರಶ್ನೆ ಮೂಡಿದ್ದು, ಇತ್ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದಾಗ ಯಾವ ತಂಡ ಗೆದ್ದಿತ್ತು ಹಾಗೂ ಉಭಯ ತಂಡಗಳ ಮುಖಾಮುಖಿಯಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಇನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇದೇ ಮೊದಲ ಬಾರಿಗೆ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿದ್ದು, ಕಳೆದ ಬಾರಿಯ ಟೂರ್ನಿಯಲ್ಲಿ ಮಾತ್ರ ಎರಡು ಬಾರಿ ಮುಖಾಮುಖಿಯಾಗಿವೆ ಹಾಗೂ ಈ ಎರಡೂ ಪಂದ್ಯಗಳಲ್ಲಿಯೂ ಸಹ ಮುಂಬೈ ಇಂಡಿಯನ್ಸ್ ತಂಡಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನ್ನು ಉಣಿಸಿದೆ.
ಹೌದು, ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 26ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 200 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತ್ತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 18 ರನ್‌ಗಳ ಗೆಲುವನ್ನು ಕಂಡಿತ್ತು.
ಇನ್ನು ಅದೇ ಆವೃತ್ತಿಯ ಲೀಗ್ ಹಂತದ 37ನೇ ಪಂದ್ಯದಲ್ಲಿ ಮತ್ತೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿಯೂ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 169 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ಎಡವಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 132 ರನ್ ಗಳಿಸಿತ್ತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 36 ರನ್‌ಗಳ ಗೆಲುವನ್ನು ಕಂಡಿತ್ತು.
ಹೀಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಕಣಕ್ಕಿಳಿದ ಎರಡೂ ಪಂದ್ಯಗಳಲ್ಲಿಯೂ ಸೋತಿರುವ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿ ಗೆದ್ದು ಲೆಕ್ಕಾಚಾರವನ್ನು ಉಲ್ಟಾ ಮಾಡುತ್ತಾ ಕಾದುನೋಡಬೇಕಿದೆ.












Click it and Unblock the Notifications