MI vs SRH: ಹೈದರಬಾದ್ ಗೆದ್ರೆ ಮುಂಬೈ ಪ್ಲೇಆಫ್ ಅನುಮಾನ; ಮುಖಾಮುಖಿಯಲ್ಲಿ ಯಾರು ಬಲಿಷ್ಠರು?

IPL 2023: Mumbai Indians vs Sunrisers Hyderabad head to head record details

ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭವಾದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ನಾಳೆಗೆ ( ಮೇ 21 ) ಕೊನೆಗೊಳ್ಳಲಿವೆ. ಇಂದು ಹಾಗೂ ನಾಳೆ ದಿನಕ್ಕೆ ಎರಡು ಪಂದ್ಯಗಳು ಆಯೋಜನೆಯಗೊಂಡಿದ್ದು, ಈ ನಾಲ್ಕೂ ಪಂದ್ಯಗಳೂ ಸಹ ಅತಿ ಮುಖ್ಯದ್ದಾಗಿದೆ.

ಹೌದು, ಇಲ್ಲಿಯವರೆಗೂ ಕೇವಲ ಗುಜರಾತ್ ಟೈಟನ್ಸ್ ತಂಡ ಮಾತ್ರ ಪ್ಲೇಆಫ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇನ್ನುಳಿದ ಮೂರು ಸ್ಥಾನಗಳಿಗೆ ಯಾವ ತಂಡಗಳು ಅರ್ಹತೆ ಗಿಟ್ಟಿಸಿಕೊಳ್ಳಲಿವೆ ಎಂಬುದು ಇಂದು ಹಾಗೂ ನಾಳೆ ನಡೆಯುವ ಪಂದ್ಯಗಳ ಫಲಿತಾಂಶದಿಂದ ತಿಳಿದು ಬರಲಿದೆ.

ಇಂದು ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ vs ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳು ಜರುಗಿದರೆ, ನಾಳೆ ಸನ್ ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟನ್ಸ್ ಪಂದ್ಯಗಳು ಜರುಗಲಿವೆ.

ಇನ್ನು ಇಂದಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್‌ಗಳ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಖಚಿತಪಡಿಸಿಕೊಂಡು ಗುಜರಾತ್ ಟೈಟನ್ಸ್ ವಿರುದ್ಧ ಕ್ವಾಲಿಫೈಯರ್ ಆಡಲು ಸಿದ್ಧವಾಗಿದೆ.

ಇನ್ನು ನಾಳೆ ನಡೆಯಲಿರುವ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ತಮ್ಮ ಎದುರಾಳಿಗಳನ್ನು ಸೋಲಿಸಿ ಪ್ಲೇಆಫ್ ಸ್ಥಾನವನ್ನು ಗಿಟ್ಟಿಸಿಕೊಳ್ಳುವತ್ತ ಚಿತ್ತ ನೆಟ್ಟಿವೆ.

ಮೊದಲಿಗೆ ಮಧ್ಯಾಹ್ನ ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಕುತೂಹಲ ಹಾಗೂ ಚರ್ಚೆಗಳು ಆರಂಭವಾಗಿವೆ.

ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಇತ್ತಂಡಗಳು ಒಟ್ಟಾರೆಯಾಗಿ 20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ.

ಈ ಪೈಕಿ ಮುಂಬೈ ಇಂಡಿಯನ್ಸ್ 11 ಪಂದ್ಯಗಳಲ್ಲಿ ಗೆದ್ದಿದ್ದು, ಸನ್ ರೈಸರ್ಸ್ ಹೈದರಾಬಾದ್ 9 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ಮೇಲುಗೈ ಸಾಧಿಸಿದೆ. ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 25ನೇ ಪಂದ್ಯದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 193 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ಸನ್ ರೈಸರ್ಸ್ ಹೈದರಾಬಾದ್ 19.5 ಓವರ್‌ಗಳಲ್ಲಿ 178 ರನ್‌ಗಳಿಗೆ ಆಲ್ಔಟ್ ಆಗಿತ್ತು. ಈ ಮೂಲಕ ಮುಂಬೈ ಇಂಡಿಯನ್ಸ್ 14 ರನ್‌ಗಳ ಗೆಲುವನ್ನು ಕಂಡಿತ್ತು. ಇನ್ನು ಇತ್ತಂಡಗಳ ಕೊನೆಯ ಐದು ಮುಖಾಮುಖಿ ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದ್ದು, ಮುಂಬೈ ಇಂಡಿಯನ್ಸ್ ನಾಲ್ಕು ಪಂದ್ಯಗಳಲ್ಲಿ ಗೆದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+