IPL 2023: ಗುಜರಾತ್ ವಿರುದ್ಧ ಹೀನಾಯ ಸೋಲು ಕಂಡ ಲಕ್ನೋ; ಅಂಕಪಟ್ಟಿ ಹೀಗಿದೆ

ಇಂದು ( ಏಪ್ರಿಲ್ 22 ) ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ‌ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ‌ ನಡುವಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 7 ರನ್ ಗಳ ಗೆಲುವನ್ನು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾಟ್ ಟೈಟನ್ಸ್ ದೊಡ್ಡ ಇನ್ನಿಂಗ್ಸ್ ಕಟ್ಟಲಾಗದೇ ರನ್ ಕಲೆಹಾಕಲು ಪರದಾಡಿತು. 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಕೇವಲ 135 ರನ್‌ಗಳನ್ನು ಗುಜರಾತ್ ಟೈಟನ್ಸ್ ಕಲೆಹಾಕಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 136 ರನ್‌ಗಳ ಸುಲಭ ಗುರಿಯನ್ನು ನೀಡಿತ್ತು.

IPL 2023: Points table, orange cap and purple cap updated list after LSG vs GT match

ಲಕ್ನೋ ಸೂಪರ್ ಜೈಂಟ್ಸ್ ಈ ಅಲ್ಪಮೊತ್ತದ ಗುರಿಯನ್ನೂ ಸಹ ಬೆನ್ನತ್ತಲಾಗದೇ ಮಕಾಡೆ ಮಲಗಿತು. 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 128 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್ ತವರಿನ ಸ್ಟೇಡಿಯಂನಲ್ಲಿಯೇ ಇಷ್ಟೊಂದು ಕಡಿಮೆ ಗುರಿಯನ್ನು ಬೆನ್ನತ್ತಲಾಗದೇ ಮುಖಭಂಗ ಅನುಭವಿಸಿತು.

ಈ ಪಂದ್ಯ ಮುಕ್ತಾಯವಾದ ನಂತರ ಅಂಕಪಟ್ಟಿ ಹೇಗಿದೆ, ಯಾವ ತಂಡ ಎಷ್ಟು ಅಂಕಗಳನ್ನು ಪಡೆದುಕೊಂಡು ಯಾವ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಕೇವಲ ಒಂದೇ ಒಂದು ಪಂದ್ಯದಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

2. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

3. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

4. 6 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

5. 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

6. 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

7. 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

8. 6 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

9. 6 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

10. 6 ಪಂದ್ಯಗಳನ್ನಾಡಿ ಕೇವಲ 1 ಪಂದ್ಯದಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+