IPL 2023: ತೆಲುಗು ನಟ ಅಲ್ಲು ಅರ್ಜುನ್‌ರನ್ನು ಭೇಟಿ ಮಾಡಿದ ಪಂಜಾಬ್ ಕಿಂಗ್ಸ್ ಆಟಗಾರರು

ಪಂಜಾಬ್ ಕಿಂಗ್ಸ್ ತಂಡದ ಆಟಗಾರು ಸದ್ಯ ಹೈದರಾಬಾದ್‌ನಲ್ಲಿದ್ದಾರೆ, ಭಾನುವಾರ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್‌ನ 14ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯಕ್ಕೆ ಮುನ್ನ ಪಂಜಾಬ್ ಕಿಂಗ್ಸ್ ತಂಡದ ಆಟಗಾರರು ಪ್ರಸಿದ್ಧ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡಿದ್ದಾರೆ.

ಪಂಜಾಬ್ ಕಿಂಗ್ಸ್ ತಂಡದ ಆಟಗಾರರಾದ ರಾಹುಲ್ ಚಹಾರ್ ಮತ್ತು ಹರ್‌ಪ್ರೀತ್ ಬ್ರಾರ್ ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡಿದ್ದಾರೆ. ಶುಕ್ರವಾರ ಸಂಜೆ ಹೈದರಾಬಾದ್‌ನಲ್ಲಿ ಇಬ್ಬರೂ ಆಟಗಾರರು ತೆಲುಗು ಸೂಪರ್ ಸ್ಟಾರ್ ಅವರನ್ನು ಭೇಟಿ ಮಾಡಿ ಖುಷಿ ಪಟ್ಟಿದ್ದಾರೆ. ಇಬ್ಬರೂ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಚಹಾರ್ ಮತ್ತು ಬ್ರಾರ್ ತಮ್ಮ ಗೆಳತಿಯರೊಂದಿಗೆ ಅಲ್ಲು ಅರ್ಜುನ್ ಅವರ ಜೊತೆ ಫೋಸ್ ಕೊಟ್ಟಿರುವುದನ್ನು ನೋಡಬಹುದಾಗಿದೆ.

IPL 2023: Punjab Kings Players Meets Pushpa Star Allu Arjun In Hyderabad

ಅಲ್ಲು ಅರ್ಜುನ್ ನಟಿಸಿರುವ ಪುಷ್ಪ-2 ಚಿತ್ರದ ಪ್ರೊಮೊಷನ್ ವಿಡಿಯೋ ಬಿಡುಗಡೆಯಾಗಿದ್ದು ಸಖತ್ ವೈರಲ್ ಆಗಿದೆ. ಪುಷ್ಪ ಚಿತ್ರದ ಮೊದಲನೇ ಭಾಗ ಸೂಪರ್ ಹಿಟ್ ಆದ ನಂತರ ಪುಷ್ಪ ಚಿತ್ರದ ಎರಡನೇ ಭಾಗದ ಬಗ್ಗೆ ಹೆಚ್ಚಿನ ಕುತೂಹಲ ಮೂಡಿದೆ. ಹಿಂದಿ ಆವೃತ್ತಿ ಕೂಡ 100 ಕೋಟಿ ಕಲೆಕ್ಷನ್ ಮಾಡಿದ್ದರಿಂದ, ಎರಡನೇ ಭಾಗಕ್ಕೆ ಉತ್ತರ ಭಾರತದಲ್ಲಿ ಕೂಡ ಅಭಿಮಾನಿಗಳು ಕಾಯುತ್ತಿದ್ದಾರೆ.

ಭಾನುವಾರ ಎಸ್‌ಆರ್‌ಹೆಚ್ ವಿರುದ್ಧ ಪಂದ್ಯ

ಐಪಿಎಲ್‌ 2023ರ ಆವೃತ್ತಿಯಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಪಂಜಾಬ್ ಕಿಂಗ್ಸ್ ಮೂರನೇ ಪಂದ್ಯವನ್ನಾಡಲು ಹೈದರಾಬಾದ್‌ಗೆ ಪ್ರಯಾಣಿಸಿದೆ. ಭಾನುವಾರ ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಮೂರನೇ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ ಪಂಜಾಬ್ ಕಿಂಗ್ಸ್. ಶಿಖರ್ ಧವನ್ ಯಶಸ್ವಿಯಾಗಿ ತಂಡವನ್ನು ಮುನ್ನಡೆಸುತ್ತಿರುವುದು ತಂಡಕ್ಕೆ ಹೆಚ್ಚಿನ ಆತ್ಮವಿಶ್ವಾಸ ಹೆಚ್ಚಿಸಿದೆ.

IPL 2023: Punjab Kings Players Meets Pushpa Star Allu Arjun In Hyderabad

ಆಡಿದ ಮೊದಲ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಗುಜರಾತ್ ಜೈಂಟ್ಸ್ ತಂಡ ಮೊದಲನೇ ಸ್ಥಾನದಲ್ಲಿದೆ. ತಂಡದ ಪ್ರಮುಖ ಆಟಗಾರರಾದ ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಕಗಿಸೊ ರಬಾಡ ಅನುಪಸ್ಥಿತಿಯಲ್ಲಿ ಕೂಡ ಅವರು ಮೊದಲ ಎರಡು ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಭಾನುವಾರ ನಡೆಯಲಿರುವ ಪಂದ್ಯಕ್ಕೆ ತಂಡದ ಮತ್ತೊಬ್ಬ ವೇಗಿ ಕಗಿಸೊ ರಬಾಡ ಲಭ್ಯವಿದ್ದಾರೆ.

ಮೊದಲನೇ ಪಂದ್ಯ ಗೆಲ್ಲುತ್ತಾ ಹೈದರಾಬಾದ್

ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಸನ್‌ರೈಸರ್ಸ್ ಹೈದರಾಬಾದ್ ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಐಡೆನ್ ಮಾರ್ಕ್ರಾಮ್, ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್ ಅವರಂತಹ ಬ್ಯಾಟರ್ ಇದ್ದಾಗಲೂ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಮೊದಲನೇ ಪಂದ್ಯ ತವರಿನಲ್ಲಿ ನಡೆದರೂ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತರು, ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿದರು.

IPL 2023: Punjab Kings Players Meets Pushpa Star Allu Arjun In Hyderabad

ಸದ್ಯ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದರಾಬಾದ್ ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಖಾತೆಯನ್ನು ತೆರೆಯುವ ಉತ್ಸಾಹದಲ್ಲಿದೆ. ದುಬಾರಿ ಆಟಗಾರರಲ್ಲಿ ಒಬ್ಬರಾದ ಹ್ಯಾರಿ ಬ್ರೂಕ್ ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಬೇಕಿದೆ. ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ ಬ್ಯಾಟ್‌ನಿಂದ ಕೂಡ ರನ್‌ ಬರಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+