KKR vs PBKS: ಧವನ್ ಅರ್ಧಶತಕ, ದುಬಾರಿ ಲಾಸ್ಟ್ ಓವರ್; ಕೆಕೆಆರ್‌ಗೆ ಪೈಪೋಟಿಯುತ ಗುರಿ ನೀಡಿದ ಪಂಜಾಬ್

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 53ನೇ ಪಂದ್ಯ ಇಂದು ( ಮೇ 8 ) ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 180 ರನ್‌ಗಳ ಗುರಿಯನ್ನು ನೀಡಿದೆ.
ಪಂಜಾಬ್ ಕಿಂಗ್ಸ್ ಪರ ನಾಯಕ ಶಿಖರ್ ಧವನ್ ಹಾಗೂ ಪ್ರಭ್‌ಸಿಮ್ರಾನ್ ಸಿಂಗ್ ಆರಂಭಿಕರಾಗಿ ಕಣಕ್ಕಿಳಿದರು. ಪ್ರಭ್‌ಸಿಮ್ರಾನ್ ಸಿಂಗ್ 12 ರನ್ ಗಳಿಸಿದರೆ, ಶಿಖರ್ ಧವನ್ 47 ಎಸೆತಗಳಲ್ಲಿ 57 ರನ್ ಬಾರಿಸಿದರು. ಇನ್ನುಳಿದಂತೆ ಭಾನುಕ ರಾಜಪಕ್ಸೆ ಡಕ್ಔಟ್, ಲಿಯಾಮ್ ಲಿವಿಂಗ್‌ಸ್ಟನ್ 15, ಜಿತೇಶ್ ಶರ್ಮಾ 21, ಸ್ಯಾಮ್ ಕರನ್ 4, ರಿಷಿ ಧವನ್ 19 ರನ್ ಗಳಿಸಿದರು. ಅಂತಿಮವಾಗಿ ಶಾರುಖ್ ಖಾನ್ 8 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 21 ರನ್ ಗಳಿಸಿದರೆ, ಹರ್‌ಪ್ರೀತ್ ಬ್ರಾರ್ 9 ಎಸೆತಗಳಲ್ಲಿ 2 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 17 ರನ್ ಗಳಿಸಿದರು.
19 ಓವರ್‌ಗಳಲ್ಲಿ 159 ರನ್ ಗಳಿಸಿದ್ದ ಪಂಜಾಬ್ ಕಿಂಗ್ಸ್ ಪರ ಕೊನೆಯ ಓವರ್‌ನಲ್ಲಿ ಶಾರುಖ್ ಖಾನ್ ಒಂದು ಸಿಕ್ಸರ್ ಹಾಗೂ ಎರಡು ಬೌಂಡರಿ ಮತ್ತು ಹರ್‌ಪ್ರೀತ್ ಬ್ರಾರ್ ಒಂದು ಸಿಕ್ಸರ್ ಬಾರಿಸಿದ ಒಟ್ಟು 20 ರನ್ ಹರಿದುಬಂದ ಕಾರಣ 20 ಓವರ್‌ಗಳಲ್ಲಿ 179 ರನ್ ತಲುಪಿತು.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರೆ, ಹರ್ಷಿತ್ ರಾಣಾ ಎರಡು ವಿಕೆಟ್, ಸುಯಶ್ ಶರ್ಮಾ ಹಾಗೂ ನಾಯಕ ನಿತಿಶ್ ರಾಣಾ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಳಗಗಳು:
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಶ್ ಶರ್ಮಾ, ವರುಣ್ ಚಕ್ರವರ್ತಿ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್(ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕುರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್












Click it and Unblock the Notifications