IPL 2023: ಫೈನಲ್‌ಗೇರಲು ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ ಕಾದಾಟ; ಹೆಡ್ ಟು ಹೆಡ್ ಮಾಹಿತಿ
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯಲ್ಲಿ ಕೊನೆಯ ಎರಡು ಪಂದ್ಯಗಳು ಮಾತ್ರವೇ ಬಾಕಿಯಿದ್ದು ಶುಕ್ರವಾರ ಮೊದಲ ಎರಡನೇ ಕ್ವಾಲಿಫಯರ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಾಡುವ ತಂಡ ಯಾವುದು ಎಂಬುದು ಅಧಿಕೃತವಾಗಲಿದೆ. ಈ ಎರಡು ಪಂದ್ಯಗಳಿಗೂ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯವಹಿಸಲು ಸಜ್ಜಾಗಿದೆ.
ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ 15 ರನ್‌ಗಳ ಅಂತರದಿಂದ ಸೋಲು ಅನುಭವಿಸಿದ ಕಾರಣ ನೇರವಾಗಿ ಫೈನಲ್‌ಗೆ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿತು. ಹೀಗಾಗಿ ಮತ್ತೊಂದು ಕ್ವಾಲಿಫಯರ್ ಪಂದ್ಯವನ್ನಾಡಲಿರುವ ಗುಜರಾಥ್ ಟೈಟನ್ಸ್ ತಂಡಕ್ಕೆ ಐದು ಬಾರಿಯ ಚಾಂಪಿಯಬ್ ಮುಂಬೈ ಇಂಡಿಯನ್ಸ್ ಸವಾಲೊಡ್ಡಿದೆ. ಈ ಪಂದ್ಯದಲ್ಲಿ ಗೆದ್ದು ಫೈನಲ್‌ಗೆ ಪ್ರವೇಶಿಸುವ ತಂಡ ಯಾವುದು ಎಂಬುದು ಈಗಿನ ಕುತೂಹಲ.

ಇನ್ನು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 81 ರನ್‌ಗಳ ಭಾರೀ ಗೆಲುವು ಸಾಧಿಸಿದೆ. ಈ ಮೂಲಕ ಆತ್ಮವಿಶ್ವಾಸದೊಂದಿಗೆ ಕ್ವಾಲಿಫಯರ್ ಪಂದ್ಯವನ್ನಾಡಲು ಸಜ್ಜಾಗಿದೆ ರೋಹಿತ್ ಪಡೆ.
IPL 2023: ಈ ಗೆಲುವಿನ ಶ್ರೇಯಸ್ಸು ಸಂಪೂರ್ಣ ಆತನಿಗೆ ನೀಡಬೇಕು: ಮುಂಬೈ ಗೆಲುವಿನ ಬಳಿಕ ಪಠಾಣ್ ಹೇಳಿಕೆ
ಹೆಡ್ ಟು ಹೆಡ್ ಮಾಹಿತಿ
ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈವರೆಗೆ ಐಪಿಎಲ್‌ನಲ್ಲಿ ಮೂರು ಬಾಕಿ ಮುಖಾಮುಖಿಯಾಗಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ 2-1 ಅಂತರದಿಂದ ಮೇಲುಗೈ ಸಾಧಿಸಿದೆ. ಈ ಬಾರಿಯ ಐಪಿಎಲ್‌ನ ಲೀಗ್ ಹಂತದಲ್ಲಿ ಎರಡು ಬಾರಿ ಈ ತಂಡಗಳು ಮುಖಾಮುಖಿಯಾಗಿದ್ದು ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದು ಬೀಗಿತ್ತು. ಇನ್ನು 2022ರ ಐಪಿಎಲ್‌ನಲ್ಲಿ ಈ ತಂಡಗಳು ಒಂದು ಬಾರಿ ಮುಖಾಮುಖಿಯಾಗಿದ್ದು ಇದರಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿತ್ತು.
ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ ಪಿಚ್ ರಿಪೋರ್ಟ್ ಹವಾಮಾನ ವರದಿ
ಅಹ್ಮದಾಬಾದ್‌ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಮತ್ತೊಂದು ಹೈಸ್ಕೋರಿಂಗ್ ಪಂದ್ಯವಾಗುವುದರಲ್ಲಿ ಅನುಮಾನವಿಲ್ಲ. ಅಹ್ಮದಾಬಾದ್‌ನ ಈ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚಿನ ಅನುಕೂಲ ನೀಡಲಿದ್ದು ಬೌಲರ್‌ಗಳು ದಂಡನೆಗೆ ಒಳಗಾಗುವುದು ಖಚಿತ. ಆರಂಬದಲ್ಲಿ ವೇಗಗಳಿಗೆ ಸ್ವಿಂಗ್ ಮೂಲಕ ನೆರವು ನೀಡುವ ಸಾಧ್ಯತೆಯಿದೆ. ಅಂತಿಮ ಹಂತದಲ್ಲಿ ಸ್ಪಿನ್ನರ್‌ಗಳು ಇಲ್ಲಿ ಮಿಂಚುವ ಅವಕಾಶವಿದೆ.
IPL 2023: ಎಲಿಮಿನೇಟರ್‌ನಲ್ಲಿ 5 ವಿಕೆಟ್ ಪಡೆದು ಮುಂಬೈ ಗೆಲ್ಲಿಸಿದ ಆಕಾಶ್ ಮಧ್ವಲ್ ಈ ಹಿಂದೆ ಆರ್‌ಸಿಬಿಯಲ್ಲಿದ್ರು!
ಹವಾಮಾನ ವರದಿ: ಶುಕ್ರವಾರ ಅಹ್ಮದಾಬಾದ್‌ನಲ್ಲಿ ಪಂದ್ಯ ನಡೆಯಲು ಪೂರಕವಾದ ವಾತಾವರಣವನ್ನು ಹೊಂದಿದೆ. ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್‌ನಿಂದ 41 ಡಿಗ್ರಿಯವರೆಗೂ ಇರುವ ಸಾಧ್ಯತೆಯಿದೆ.
ಇತ್ತಂಡಗಳ ಸ್ಕ್ವಾಡ್
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್












Click it and Unblock the Notifications