GT vs KKR: ಮಳೆ ಬಳಿಕ ಗುರ್ಬಜ್ ರನ್ ಮಳೆ; ಗುಜರಾತ್‌ಗೆ ಪೈಪೋಟಿಯುತ ಗುರಿ

IPL 2023: Rahmanullah Gurbazs 81 helps KKR to set target of 180 runs to Gujarat Taitans

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 29 ) ಎರಡು ಪಂದ್ಯಗಳು ಜರುಗುತ್ತಿವೆ. ರಾತ್ರಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದ್ದು, ಈಗ ಆರಂಭವಾಗಿರುವ ಮಧ್ಯಾಹ್ನದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.

ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ಡಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡು, ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿದ್ದು, ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 180 ರನ್‌ಗಳ ಪೈಪೋಟಿಯುತ ಗುರಿಯನ್ನು ನೀಡಿದೆ. ಇನ್ನು ಮಳೆ ಸುರಿದ ಕಾರಣದಿಂದಾಗಿ ಈ ಪಂದ್ಯ ಸುಮಾರು ಮೂವತ್ತು ನಿಮಿಷಗಳ ಕಾಲ ತಡವಾಗಿ ಆರಂಭವಾಗಿದ್ದು, ಪಂದ್ಯ ಆರಂಭವಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ರಹ್ಮನ್ನುಲ್ಲಾ ಗುರ್ಬಜ್ ರನ್ ಮಳೆ ಸುರಿಸಿದ್ದಾರೆ.

ಆರಂಭಿಕರಾಗಿ ಕಣಕ್ಕಿಳಿದ ಎನ್ ಜಗದೀಶನ್ 19 ರನ್ ಗಳಿಸಿದರೆ, ಗುರ್ಬಜ್ 39 ಎಸೆತಗಳಲ್ಲಿ 5 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 81 ರನ್ ಚಚ್ಚಿದರು. ಇನ್ನುಳಿದಂತೆ ಕಳೆದ ಬಾರಿಯ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಡಕ್ಔಟ್ ಆಗಿದ್ದ ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿಯೂ 4 ಎಸೆತಗಳನ್ನು ಎದುರಿಸಿ ಡಕ್ಔಟ್ ಆಗಿದ್ದಾರೆ. ವೆಂಕಟೇಶ್ ಐಯ್ಯರ್ 14 ಎಸೆತಗಳಲ್ಲಿ 11, ನಿತಿಶ್ ರಾಣಾ 3 ಎಸೆತಗಳಲ್ಲಿ 4 ರನ್, ರಿಂಕು ಸಿಂಗ್ 20 ಎಸೆತಗಳಲ್ಲಿ 19 ರನ್, ಆಂಡ್ರೆ ರಸೆಲ್ 19 ಎಸೆತಗಳಲ್ಲಿ 34 ಹಾಗೂ ಡೇವಿಡ್ ವೈಸ್ 6 ಎಸೆತಗಳಲ್ಲಿ ಅಜೇಯ 8 ರನ್ ಗಳಿಸಿದರು.

ಆರಂಭದಲ್ಲಿ ಗುರ್ಬಜ್ ವೇಗವಾಗಿ ರನ್ ಕಲೆಹಾಕಿದ್ದನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದಿ ಆಟಗಾರರು ಉಳಿಸಿಕೊಳ್ಳುವಲ್ಲಿ ವಿಫಲಗೊಂಡರು. ಅಬ್ಬರಿಸುತ್ತಿದ್ದ ರಿಂಕು ಸಿಂಗ್ ಸಹ ಏಕದಿನ ಪಂದ್ಯದ ರೀತಿಯ ಇನ್ನಿಂಗ್ಸ್ ಆಡಿದರು. ಮಧ್ಯಮ ಕ್ರಮಾಂಕದ ಆಟಗಾರರು ಜವಾಬ್ದಾರಿಗೆ ತಕ್ಕಂತೆ ಬ್ಯಾಟ್ ಬೀಸಿದ್ದರೆ ರನ್ ಇನ್ನೂ ಹೆಚ್ಚಿರುತ್ತಿತ್ತು.

ಇನ್ನು ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಆಮಿ 3 ವಿಕೆಟ್, ಜೋಶ್ವಾ ಲಿಟಲ್ ಹಾಗೂ ನೂರ್ ಅಹ್ಮದ್ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಹಾರ್ದಿಕ್ ಪಾಂಡ್ಯಾ 3 ಓವರ್‌ಗಳಲ್ಲಿ 34 ರನ್ ನೀಡಿ ದುಬಾರಿಯಾದರೆ, ರಶಿದ್ ಖಾನ್ 4 ಓವರ್‌ಗಳಲ್ಲಿ 54 ರನ್ ನೀಡಿ ದುಬಾರಿಯಾದರು.

ಆಡುವ ಬಳಗಗಳು:

ಕೊಲ್ಕತ್ತಾ ನೈಟ್‌ ರೈಡರ್ಸ್ ಆಡುವ ಬಳಗ: ಎನ್ ಜಗದೀಸನ್, ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಡೇವಿಡ್ ವೈಸ್, ಶಾರ್ದೂಲ್ ಠಾಕೂರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+