PBKS vs RR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದ ಬಲಿಷ್ಠ ತಂಡ ಯಾವುದು?

IPL 2023: Rajasthan Royals vs Punjab Kings head to head details

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದು ತಲುಪಿದೆ.

ನಿನ್ನೆ ( ಮೇ 18 ) ಹೈದರಾಬಾದ್‌‌ನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಮೂಲಕ ಟೂರ್ನಿಯಲ್ಲಿ ಎಲ್ಲಾ ತಂಡಗಳು 13 ಪಂದ್ಯಗಳನ್ನು ಆಡಿ ಮುಗಿಸಿದಂತಾಗಿದೆ.

ಈ ಮೂಲಕ ಸದ್ಯ ಇಂದಿನಿಂದ ( ಮೇ 19 ) ಎಲ್ಲಾ ತಂಡಗಳ ಅಂತಿಮ ಹಣಾಹಣಿ ಆರಂಭವಾಗುತ್ತಿದೆ‌. ಗುಜರಾತ್ ಟೈಟನ್ಸ್ ಈಗಾಗಲೇ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಲು ಪೈಪೋಟಿಗೆ ಬಿದ್ದಿವೆ.

ಇನ್ನು ಈ ಹಿಂದೆ ಪ್ಲೇಆಫ್ ಪ್ರವೇಶಿಸುವ ತಂಡಗಳು ಎನಿಸಿಕೊಂಡಿದ್ದ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸದ್ಯ ಇನ್ನೊಂದು ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಸಹ ಪ್ಲೇಆಫ್ ಪ್ರವೇಶಿಸುವುದು ಅನುಮಾನ.

ಹೀಗೆ ಟೂರ್ನಿಯಿಂದ ಈಗಾಗಲೇ ಬಹುತೇಕ ಹೊರಬಿದ್ದಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಇಂದು ( ಮೇ 19 ) ನಡೆಯಲಿರುವ ಟೂರ್ನಿಯ 66ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ‌.

ಈ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದ್ದು, ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ‌. ಹೀಗೆ ಪ್ಲೇಆಫ್ ಮೇಲೆ ಹೆಚ್ಚೇನೂ ಪರಿಣಾಮ ಬೀರದ ಈ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ‌ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟು ಎಷ್ಟು ಪಂದ್ಯಗಳು ಜರುಗಿವೆ ಹಾಗೂ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ‌..

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿನ ಒಂದು ಮುಖಾಮುಖಿಯ ಪಂದ್ಯವೂ ಸೇರಿದಂತೆ ಇತ್ತಂಡಗಳು ಇಲ್ಲಿಯವರೆಗೂ ಒಟ್ಟು 25 ಐಪಿಎಲ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ರಾಜಸ್ಥಾನ್ ರಾಯಲ್ಸ್ 14 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 11 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮುನ್ನಡೆ ಸಾಧಿಸಿದೆ.

ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದ್ದು, ಏಪ್ರಿಲ್ 5ರಂದು ನಡೆದಿದ್ದ ಟೂರ್ನಿಯ ಎಂಟನೇ ಪಂದ್ಯದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 197 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 198 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕುವಲ್ಲಿ ಮಾತ್ರ ಶಕ್ತವಾಗಿತ್ತು. ಈ ಮೂಲಕ ಪಂಜಾಬ್ ಕಿಂಗ್ಸ್ 5 ರನ್‌ಗಳ ರೋಚಕ ಜಯ ಸಾಧಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+