IPL 2023 RCB Team : ರಜತ್ ಪಾಟಿದಾರ್ ಫಿಟ್‌ನೆಸ್ ಬಗ್ಗೆ ಸಂಜಯ್ ಬಂಗಾರ್ ಮಹತ್ವದ ಹೇಳಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ ತನ್ನ ಮೊದಲನೇ ಪಂದ್ಯವನ್ನಾಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ಭಾನುವಾರ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದ್ದಾರೆ. ತಂಡದ ಪ್ರಮುಖ ಬ್ಯಾಟರ್ ರಜತ್ ಪಾಟಿದಾರ್ ಗಾಯಗೊಂಡಿರುವುದು ತಂಡಕ್ಕೆ ಆರಂಭದಲ್ಲೇ ಸ್ವಲ್ಪ ಹಿನ್ನಡೆಯಾಗಿದೆ. ಪಾಟಿದಾರ್ ಗಾಯದ ಬಗ್ಗೆ ತಂಡದ ಮುಖ್ಯ ಕೋಚ್ ಸಂಜಯ್ ಬಂಗಾರ್ ಮಹತ್ವದ ಮಾಹಿತಿ ನೀಡಿದ್ದಾರೆ.

ತಂಡದ ಮೊದಲನೇ ಪಂದ್ಯಕ್ಕೆ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿರುವ ಸಂಜಯ್ ಬಂಗಾರ್, ರಜತ್ ಪಾಟಿದಾರ್ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಮಧ್ಯಪ್ರದೇಶ ತಂಡದ ಬ್ಯಾಟರ್ ಹಿಮ್ಮಡಿ ಗಾಯದಿಂದ ಬಳಲುತ್ತಿದ್ದಾರೆ, ಅವರು ಕೆಲವು ದಿನಗಳ ಕಾಲ ಕ್ರಿಕೆಟ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಆದರೂ, ಅವರು ಕೆಲವು ಪಂದ್ಯಗಳಲ್ಲಿ ಆಡುವ ಸಾಧ್ಯತೆ ಇದೆ ಎಂದು ಸಂಜಯ್ ಬಂಗಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

IPL 2023: Rajat Patidar Not Ruled Out For IPL 2023 RCB Coach Sanjay Bangar

ಕಳೆದ ಆವೃತ್ತಿಯಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಶತಕ ಬಾರಿಸಿ ಆರ್ ಸಿಬಿ ಗೆಲುವಿಗೆ ಕಾರಣವಾಗಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದ ಅವರು ಈ ಆವೃತ್ತಿಯಲ್ಲಿ ಕೂಡ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದರು. ಆದರೆ, ತಂಡವನ್ನು ಸೇರಿಕೊಳ್ಳುವ ಮುನ್ನ ಅಭ್ಯಾಸದ ಅವಧಿಯಲ್ಲಿ ಹಿಮ್ಮಡಿ ಗಾಯಕ್ಕೆ ತುತ್ತಾಗಿದ್ದರು. ಮೂರನೇ ಕ್ರಮಾಂಕದಲ್ಲಿ ಉತ್ತಮ ಆಟಗಾರರಾಗಿದ್ದ ಅವರ ಅಲಭ್ಯತೆ ತಂಡಕ್ಕೆ ಹಿನ್ನಡೆಯಾಗಿದೆ.

ಎನ್‌ಸಿಯನಲ್ಲಿರುವ ರಜತ್ ಪಾಟಿದಾರ್

"ರಜತ್ ಪಾಟಿದಾರ್ ನಮ್ಮ ನಿಯಂತ್ರಣದಿಂದ ಹೊರಗುಳಿದಿದ್ದಾರೆ. ಎನ್‌ಸಿಎ ನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ಇನ್ನೂ ಅವರ ಸ್ಪಷ್ಟೀಕರಣಕ್ಕಾಗಿ ಕಾಯುತ್ತಿದ್ದೇವೆ. ಸ್ಪಷ್ಟೀಕರಣ ಪಡೆದ ನಂತರ ನಾವು ಮುಂದಿನ ನಿರ್ಧಾರ ಮಾಡಬಹುದು. ಅಲ್ಲಿಯವರೆಗೂ ನಾವು ಯಾವುದೇ ನಿರ್ಧಾರ ಮಾಡಲು ಸಾಧ್ಯವಿಲ್ಲ" ಎಂದು ಸಂಜಯ್ ಬಂಗಾರ್ ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೇಸಿಸ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ಮೂರನೇ ಕ್ರಮಾಖದಲ್ಲಿ ರಜತ್ ಪಾಟಿದಾರ್ ಬದಲಾಗಿ ಅನುಜ್ ರಾವತ್ ಅಥವಾ ಸುಯಶ್ ಪ್ರಭುದೇಸಾಯಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಜೋಶ್ ಹೇಜಲ್‌ವುಡ್ ಮತ್ತು ವನಿಂದು ಹಸರಂಗ ಕೂಡ ಕೆಲವು ಪಂದ್ಯಗಳಿಗೆ ಲಭ್ಯವಿರುವುದಿಲ್ಲ.

IPL 2023: Rajat Patidar Not Ruled Out For IPL 2023 RCB Coach Sanjay Bangar

ಕಳೆದ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆರ್ ಸಿಬಿ ಪ್ಲೇ ಆಫ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿ ವಿರಾಟ್ ಕೊಹ್ಲಿ ಫಾರ್ಮ್‌ನಲ್ಲಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಮೂರು ವರ್ಷಗಳ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಅಂಗಳದಲ್ಲಿ ಆರ್ ಸಿಬಿ ಪಂದ್ಯವನ್ನಾಡಲು ಸಿದ್ಧವಾಗಿದೆ. ನ್ಯೂಜಿಲೆಂಡ್‌ನ ಸ್ಫೋಟಕ ಆಲ್‌ರೌಂಡರ್ ಮೈಕೆಲ್ ಬ್ರೇಸ್‌ವೆಲ್ ತಂಡಕ್ಕೆ ಸೇರ್ಪಡೆಯಾಗಿರುವು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಕ್ಕೆ ಹೆಚ್ಚಿನ ಶಕ್ತಿ ತಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಅನುಜ್ ರಾವತ್, ದಿನೇಶ್ ಕಾರ್ತಿಕ್, ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಫಿನ್ ಅಲೆನ್, ಅವಿನಾಶ್ ಸಿಂಗ್, ರಾಜನ್ ಕುಮಾರ್, ವಿಲ್ ಜ್ಯಾಕ್ಸ್, ಮನೋಜ್ ಭಾಂಡಗೆ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಝ್ ಅಹ್ಮದ್, ವನಿಂದು ಹಸರಂಗ, ಸೋನು ಯಾದವ್, ಡೇವಿಡ್ ವಿಲ್ಲಿ, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರಣ್ ಶರ್ಮಾ, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+