IPL 2023: ನಾಯಕನಾಗಿ ಆತ ಪ್ರಬುದ್ಧನಾಗಿದ್ದಾನೆ: ರವಿ ಶಾಸ್ತ್ರಿ ಹೊಗಳಿದ ಕ್ಯಾಪ್ಟನ್ ಯಾರು!
ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ನಾಯಕತ್ವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅದ್ಭುತವಾಗಿ ಮುನ್ನಡೆಸುತ್ತಿರುವ ಸಂಜು ಸ್ಯಾಮ್ಸನ್ ಕಳೆದ ಬಾರಿಯ ಐಪಿಎಲ್‌ನಲ್ಲಿ ತಂಡವನ್ನು ಫೈನಲ್ ಹಂತದವರೆಗೆ ತಲುಪಿದಿದ್ದರೆ ಈ ಬಾರಿಯೂ ಲೀಗ್‌ನಲ್ಲಿ ಅದ್ಭುತ ಪ್ರದರ್ಶನದೊಂದಿಗೆ ಆರ್‌ಆರ್ ಪ್ರಸ್ತುತ ಅಗ್ರಸ್ಥಾನದಲ್ಲಿದೆ.
ಸಂಜು ಸ್ಯಾಮ್ಸನ್ ನಾಯಕತ್ವದ ಬಗ್ಗೆ ರವಿ ಶಾಸ್ತ್ರಿ ವಿಶೇಷ ಮೆಚ್ಚುಗೆಯ ಮಾತುಗಳನ್ನಾಡಿದ್ದು ಬೌಲಿಂಗ್‌ನಲ್ಲಿ ಸ್ಪಿನ್ನರ್‌ಗಳನ್ನು ಬಳಸಿಕೊಳ್ಳುತ್ತಿರುವ ರೀತಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಪಿನ್ನರ್‌ಗಳನ್ನು ಬಳಸಿಕೊಂಡ ರೀತಿಯಲ್ಲಿ ಅವರು ತಮ್ಮ ಪ್ರಬುದ್ಧತೆಯನ್ನು ಮೆರೆದಿದ್ದಾರೆ ಎಂದಿದ್ದಾರೆ ರವಿ ಶಾಸ್ತ್ರಿ.

ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಲಯದಲ್ಲಿದ್ದು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆದರೆ ರಾಜಸ್ಥಾನ್ ರಾಯಲ್ಸ್ ತಂಡ ಎರಡು ಪಂದ್ಯದಲ್ಲಿಯೂ ಸಿಎಸ್‌ಕೆ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಟೂರ್ನಿಯಲ್ಲಿಯೂ ಆರ್‌ಆರ್ ಮೇಲುಗೈ ಸಾಧಿಸಿದೆ.
RR vs CSK: ಮತ್ತೊಂದು ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್: ತಂಡದ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ನಾಯಕ
"ನಾಯಕನಾಗಿ ಸಂಜು ಸ್ಯಾಮ್ಸನ್ ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಅವರು ತಮ್ಮ ಸ್ಪಿನ್ನರ್‌ಗಳನ್ನು ಬಹಳ ಅದ್ಭುತವಾಗಿ ಬಳಸಿಕೊಂಡಿದ್ದಾರೆ. ಉತ್ತಮ ನಾಯಕನಾದವನು ಮಾತ್ರವೇ ಮೂವರು ಸ್ಪಿನ್ನರ್‌ಗಳೊಂದಿಗೆ ಆಡಲು ಹಾಗೂ ಅವರನ್ನು ಚಾಣಾಕ್ಷತನದಿಂದ ಬಳಸಿಕೊಳ್ಳಲು ಸಾಧ್ಯ" ಎಂದಿದ್ದಾರೆ ಭಾರತದ ಮಾಜಿ ಕೋಚ್ ಹಾಗೂ ಕಾಮೆಂಟೇಟರ್ ರವಿ ಶಾಸ್ತ್ರಿ.
ಜೈಪುರಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಂಜು ಸ್ಯಾಮ್ಸನ್ ನೇತೃತ್ವ ರಾಜಸ್ಥಾನ್ ರಾಯಲ್ಸ್ ತಂಡ ಜೈಸ್ವಾಲ್ ಅವರ ಅಬ್ಬರದ ಬ್ಯಾಟಿಂಗ್‌ನ ಕಾರಣದಿಂದಾಗಿ ಭರ್ಜರಿ 202 ರನ್‌ಗಳನ್ನು ಕಲೆಹಾಕಿತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಸಿಎಸ್‌ಕೆ ತಂಡ ಋತುರಾಜ್ ಗಾಯಕ್ವಾಡ್ ಹಾಗೂ ಶಿವಂ ದುಬೆ ಅವರ ಸ್ಪೋಟಕ ಪ್ರದರ್ಶನದ ಹೊರತಾಗಿಯೂ 32 ರನ್‌ಗಳ ಅಂತರದ ಸೋಲು ಅನುಭವಿಸಿದೆ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಬೆಂಚ್: ಡೊನಾವೊನ್ ಫೆರೇರಾ, ಮುರುಗನ್ ಅಶ್ವಿನ್, ರಿಯಾನ್ ಪರಾಗ್, ಕೆಎಂ ಆಸಿಫ್, ಕುಲದೀಪ್ ಯಾದವ್, ಅಬ್ದುಲ್ ಬಸಿತ್, ಆಕಾಶ್ ವಸಿಷ್ಟ್, ಜೋ ರೂಟ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕುಲದೀಪ್ ಸೇನ್, ಕುನಾಲ್ ಸಿಂಗ್ ರಾಥೋಡ್, ಟ್ರೆಂಟ್ ಬೌಲ್ಟ್
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ಮಥೀಶ ಪತಿರಾನ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಆಕಾಶ್ ಸಿಂಗ್
ಬೆಂಚ್: ಅಂಬಾಟಿ ರಾಯುಡು, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆರ್ ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ನಿಶಾಂತ್ ಸಿಂಧು












Click it and Unblock the Notifications