RCB vs CSK, Kohli vs Dhoni; ದಿಗ್ಗಜರ ಮುಖಾಮುಖಿಗೆ ಸಾಕ್ಷಿಯಾಗಲಿದೆ ಚಿನ್ನಸ್ವಾಮಿ ಕ್ರೀಡಾಂಗಣ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸೋಮವಾರ ಬಹುನಿರೀಕ್ಷಿತ ಪಂದ್ಯ ನಡೆಯಲಿದೆ. ಐಪಿಎಲ್‌ನ ಬದ್ಧ ಎದುರಾಳಿಗಳು ಎನಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಿಕೊಳ್ಳುತ್ತಿರುವುದು ಕುತೂಹಲ ಹೆಚ್ಚಿಸಿದೆ.
ಭಾರತೀಯ ಕ್ರಿಕೆಟ್‌ನ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ಎಂಎಸ್ ಧೋನಿ ಇಬ್ಬರು ಕೂಡ ಅತ್ಯಂತ ಆಪ್ತರು ಎಂಬುದು ಕ್ರಿಕೆಟ್ ಪ್ರೇಮಿಗಳಿಗೆ ತಿಳಿದಿರುವ ಸಂಗತಿ. ಈ ಇಬ್ಬರು ದಿಗ್ಗಜ ಕ್ರಿಕೆಟಿಗರು ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳ ಉತ್ಸುಕತೆ ಹೆಚ್ಚಲು ಮತ್ತೊಂದು ಕಾರಣವಾಗಿದೆ.

IPL 2023: ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸೋಲು: ಗಂಗೂಲಿಯನ್ನು ಟೀಕಿಸಿದ ರವಿಶಾಸ್ತ್ರಿ
ಆರ್‌ಸಿಬಿ ಹಾಗೂ ಸಿಎಸ್‌ಕೆ ತಂಡಗಳು ಈ ಬಾರಿಯ ಐಪಿಎಲ್‌ನ ಈವರೆಗಿನ ಪಂದ್ಯಗಳಲ್ಲಿ ಒಂದೇ ರೀತಿಯ ಫಲಿತಾಂಶ ಪಡೆದುಕೊಂಡಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ತಲಾ ಎರಡು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೆಟ್ ರನ್‌ರೇಟ್ ಆರ್‌ಸಿಬಿಗಿಂತ ಮುಂದಿದ್ದು ಅಂಕಪಟ್ಟಿಯಲ್ಲಿ ಒಂದುಸ್ಥಾನ ಆರ್‌ಸಿಬಿಗಿಂತ ಮೇಲಿದೆ. ಸಿಎಸ್‌ಕೆ 6ನೇ ಸ್ಥಾನದಲ್ಲಿದ್ದರೆ ಆರ್‌ಸಿಬಿ 7ನೇ ಸ್ಥಾನದಲ್ಲಿದೆ.
ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ವಿರುದ್ಧದ ಈ ಪಂದ್ಯ ಬೆಂಗೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರೀಡಾಂಗಣದಲ್ಲಿ ಏಪ್ರಿಲ್ 17 ಸೋಮವಾರದಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
MI vs KKR: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದ ರೋಹಿತ್ ಶರ್ಮಾ: ಕಾರಣವೇನು?
ಪಿಚ್ ರಿಪೋರ್ಟ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು ಹೈಸ್ಕೋರಿಂಗ್ ಮ್ಯಾಚ್‌ಗಳು ಹೆಚ್ಚಾಗಿ ನಡೆದಿದೆ. ಕ್ರೀಡಾಂಗಣ ಕೂಡ ಸಣ್ಣದಾಗಿರುವ ಕಾರಣ 175ಕ್ಕಿಂತ ಕಡಿಮೆ ಮೊತ್ತವನ್ನು ಇಲ್ಲಿ ರಕ್ಷಿಸಿಕೊಳ್ಳುವುದು ದೊಡ್ಡ ಸವಾಲಾಗಿರಲಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ದೊಡ್ಡ ಮೊತ್ತವನ್ನು ಗಳಿಸದ ಹೊರತಾಗಿಯೂ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು ಎಂಬುದು ಗಮನಾರ್ಹ.
ಆರ್‌ಸಿಬಿ ಸಂಭಾವ್ಯ ಆಡುವ ಬಳಗ
ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ವೇಯ್ನ್ ಪಾರ್ನೆಲ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ವಿಜಯ್‌ಕುಮಾರ್ ವೈಶಾಕ್
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ
ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಹಮ್ಮದ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಸಿಸಂದ ಮಗಲ, ಎಂಎಸ್ ಧೋನಿ(ನಾಯಕ), ತುಷಾರ್ ದೇಶಪಾಂಡೆ, ಮಹೀಶ ತೀಕ್ಷಣ, ಆಕಾಶ್ ಸಿಂಗ್












Click it and Unblock the Notifications