RCB vs PBKS: ಫಾಫ್ 'ಇಂಪ್ಯಾಕ್ಟ್' ಆಟ, ಕೊಹ್ಲಿ ಅರ್ಧಶತಕ; ಪಂಜಾಬ್‌ಗೆ ಪೈಪೋಟಿಯುತ ಗುರಿ ನೀಡಿದ ಆರ್‌ಸಿಬಿ

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 27ನೇ ಪಂದ್ಯದಲ್ಲಿ ಇಂದು ( ಏಪ್ರಿಲ್ 20 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಷಿಯೇಷನ್ ಐಎಸ್ ಬಿಂದ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಫೀಲ್ಡಿಂಗ್ ಆಯ್ದುಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಇನ್ನು ಗಾಯಕ್ಕೊಳಗಾಗಿರುವ ಕಾರಣ ಎರಡೂ ತಂಡಗಳ ನಾಯಕತ್ವ ಬದಲಾಗಿದ್ದು, ಪಂಜಾಬ್ ಕಿಂಗ್ಸ್ ಪರ ಶಿಖರ್ ಧವನ್ ಬದಲಾಗಿ ಸ್ಯಾಮ್ ಕರನ್ ನಾಯಕನಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಾಫ್ ಡುಪ್ಲೆಸಿಸ್ ಬದಲಾಗಿ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಂಡಿದ್ದಾರೆ.

Virat Kohli and Faf Du Plessis

ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿದ್ದು, ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 175 ರನ್‌ಗಳ ಗುರಿಯನ್ನು ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕ ಆಟಗಾರರ ಆಟಗಾರರಾಗಿ ನಾಯಕ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರು. ಗಾಯದ ಸಮಸ್ಯೆಗೆ ಒಳಗಾಗಿರುವ ಫಾಫ್ ಡು ಪ್ಲೆಸಿಸ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದಾರೆ. 16 ಓವರ್‌ಗಳವರೆಗೆ ವಿಕೆಟ್ ಕಳೆದುಕೊಳ್ಳದೇ 137 ರನ್‌ಗಳ ಜತೆಯಾಟವನ್ನು ಈ ಜೋಡಿ ಆಡಿದೆ. ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 59 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 56 ಎಸೆತಗಳಲ್ಲಿ 84 ರನ್ ಗಳಿಸಿದರು.

Virat Kohli and Faf Du Plessis

ಇನ್ನುಳಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್ ಗೋಲ್ಡನ್ ಡಕ್ಔಟ್ ಆದರೆ, ದಿನೇಶ್ ಕಾರ್ತಿಕ್ ಕೇವಲ 7 ರನ್, ಮಹಿಪಾಲ್ ಲೊಮ್ರಾರ್ ಅಜೇಯ 7 ರನ್ ಹಾಗೂ ಶಹ್ಬಾಜ್ ಅಹ್ಮದ್ ಅಜೇಯ 5 ರನ್ ಕಲೆಹಾಕಿದರು. 16 ಓವರ್‌ಗಳವರೆಗೂ ವಿಕೆಟ್ ಕಳೆದುಕೊಳ್ಳದೇ ಇದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಿಗ್ ಸ್ಕೋರ್ ಮಾಡುವ ಅವಕಾಶವಿದ್ದರೂ ಸಹ ವಿಫಲವಾಗಿದೆ.

ಪಂಜಾಬ್ ಕಿಂಗ್ಸ್ ಪರ ಹರ್‌ಪ್ರೀತ್ ಬ್ರಾರ್ 2 ವಿಕೆಟ್ ಪಡೆದರೆ, ನಾಥನ್ ಎಲ್ಲಿಸ್ ಹಾಗೂ ಅರ್ಷ್‌ದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆದರು. ಹೀಗೆ ಪೈಪೋಟಿಯುತ ಗುರಿಯನ್ನು ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ತಂಡವನ್ನು ಗುರಿ ತಲುಪದ ಹಾಗೆ ಕಟ್ಟಿ ಹಾಕಿ ಜಯ ದಾಖಲಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ

ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಆಡುವ ಬಳಗ: ವಿರಾಟ್ ಕೊಹ್ಲಿ(ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ ಮತ್ತು ಮೊಹಮ್ಮದ್ ಸಿರಾಜ್

ಪಂಜಾಬ್ ಕಿಂಗ್ಸ್ ಆಡುವ ಬಳಗ: ಅಥರ್ವ ಥೈದೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್ ಹಾಗೂ ಅರ್ಶ್‌ದೀಪ್ ಸಿಂಗ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+