IPL 2023 16th Season: ಆರ್‌ಸಿಬಿ ತಂಡದ ವೇಳಾಪಟ್ಟಿ, ಪೂರ್ಣ ತಂಡ, ಸಂಭಾವ್ಯ ಬಲಿಷ್ಠ ಆಡುವ 11ರ ಬಳಗ

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳ ಮುಖಾಮುಖಿಯ ಮೂಲಕ ಚಾಲನೆ ಸಿಗಲಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಏಪ್ರಿಲ್ 2ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎದುರಿಸಲಿದೆ.

IPL 2023: RCB Team Schedule, Full Squad, Probable Strongest Playing 11

ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂಬರುವ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಮ್ಮ ತಂಡದಲ್ಲಿ ಕೆಲವೇ ಬದಲಾವಣೆಗಳೊಂದಿಗೆ ಟೂರ್ನಿಯನ್ನು ಪ್ರವೇಶಿಸಿದೆ.

ಕಳೆದ 15 ವರ್ಷಗಳಿಂದ ಐಪಿಎಲ್‌ನಲ್ಲಿ ಆಡುತ್ತಿದ್ದರೂ, ಆರ್‌ಸಿಬಿ ಇನ್ನೂ ಟ್ರೋಫಿಯನ್ನು ಗೆದ್ದಿಲ್ಲ. ಈ ವರ್ಷವಾದರೂ ಪ್ರಶಸ್ತಿ ಗೆಲ್ಲಲು ಆರ್‌ಸಿಬಿ ತಂಡದ ಮಾಲೀಕರು ಆಸೆ ಹೊಂದಿದ್ದಾರೆ. 16ನೇ ಐಪಿಎಲ್ ಋತು ಸಮೀಪಿಸುದ್ದು, ಈವರೆಗೂ ಒಲಿಯದ ಟ್ರೋಫಿಯನ್ನು ಎತ್ತಿ ಹಿಡಿಯಲು ಎದುರು ನೋಡುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಯಾವಾಗಲೂ ನಿಷ್ಠೆಗೆ ಹೆಸರುವಾಸಿಯಾಗಿದ್ದಾರೆ. ತಂಡ ಸೋತರೂ, ಗೆದ್ದರೂ ತಮ್ಮ ತಂಡವನ್ನು ಬಿಟ್ಟುಕೊಡುವುದಿಲ್ಲ. ಈ ಬಾರಿಯೂ ತವರಿನಲ್ಲಿ ಆರ್‌ಸಿಬಿ ಬೆಂಬಲಿಸಲು ಕಾಯುತ್ತಿದ್ದಾರೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 2ರಂದು ಆರ್‌ಸಿಬಿ ತಂಡ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸೆಣಸಾಡಲಿದೆ. ಮೂರು ವರ್ಷಗಳ ನಂತರ ಅಭಿಮಾನಿಗಳು ಮತ್ತೊಮ್ಮೆ ತವರಿನ ಮೈದಾನದಲ್ಲಿ ತಮ್ಮ ತಂಡವನ್ನು ಹುರಿದುಂಬಿಸಲು "ಆರ್‌ಸಿಬಿ... ಆರ್‌ಸಿಬಿ... ಆರ್‌ಸಿಬಿ' ಎಂದು ಘೋಷಣೆ ಕೂಗಲಿದ್ದಾರೆ.

IPL 2023: RCB Team Schedule, Full Squad, Probable Strongest Playing 11

ಕೋವಿಡ್-19 ನಂತರ ಐಪಿಎಲ್ ತನ್ನ ತವರಿನ ಮತ್ತು ಎದುರಾಳಿ ನೆಲದಲ್ಲಿ ಆಡುವ ಸ್ವರೂಪಕ್ಕೆ ಮರಳಿದೆ. 2022ರ ಐಪಿಎಲ್‌ನಿಂದ ಆರ್‌ಸಿಬಿ ತಂಡ ತನ್ನ 18 ಆಟಗಾರರನ್ನು ಉಳಿಸಿಕೊಂಡಿತ್ತು. 2023ರ ಐಪಿಎಲ್‌ಗಾಗಿ ನಡೆದ ಮಿನಿ ಹರಾಜಿನಲ್ಲಿ ಏಳು ಆಟಗಾರರನ್ನು ಖರೀದಿಸಿದೆ.

ಅವರಲ್ಲಿ ಇಂಗ್ಲೆಂಡ್ ಆಟಗಾರರಾದ ರೀಸ್ ಟೋಪ್ಲಿ ಮತ್ತು ವಿಲ್ ಜಾಕ್ಸ್ ಹೊರತುಪಡಿಸಿ, ಆರ್‌ಸಿಬಿ ಖರೀದಿಸಿದ ಎಲ್ಲಾ ಆಟಗಾರರು ಅನ್ ಕ್ಯಾಪ್ಡ್ ಆಟಗಾರರಾಗಿದ್ದಾರೆ.

IPL 2023: RCB Team Schedule, Full Squad, Probable Strongest Playing 11

ಆರ್‌ಸಿಬಿ ತಂಡದ ಸಂಪೂರ್ಣ ವೇಳಾಪಟ್ಟಿ

1) ಆರ್‌ಸಿಬಿ vs ಮುಂಬೈ ಇಂಡಿಯನ್ಸ್- ಏಪ್ರಿಲ್ 2, ಬೆಂಗಳೂರು

2) ಆರ್‌ಸಿಬಿ vs ಕೋಲ್ಕತ್ತಾ ನೈಟ್ ರೈಡರ್ಸ್ - ಏಪ್ರಿಲ್ 6, ಕೋಲ್ಕತ್ತಾ

3) ಆರ್‌ಸಿಬಿ vs ಲಕ್ನೋ ಸೂಪರ್ ಜೈಂಟ್ಸ್ - ಏಪ್ರಿಲ್ 10, ಬೆಂಗಳೂರು

4) ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ - ಏಪ್ರಿಲ್ 15, ಬೆಂಗಳೂರು

5) ಆರ್‌ಸಿಬಿ vs ಚೆನ್ನೈ ಸೂಪರ್ ಕಿಂಗ್ಸ್ - ಏಪ್ರಿಲ್ 17, ಬೆಂಗಳೂರು

6) ಆರ್‌ಸಿಬಿ vs ಪಂಜಾಬ್ ಕಿಂಗ್ಸ್ - ಏಪ್ರಿಲ್ 20, ಮೊಹಾಲಿ

7) ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ - ಏಪ್ರಿಲ್ 23, ಬೆಂಗಳೂರು

8) ಆರ್‌ಸಿಬಿ vs ಕೋಲ್ಕತ್ತಾ ನೈಟ್ ರೈಡರ್ಸ್ - ಏಪ್ರಿಲ್ 26, ಬೆಂಗಳೂರು

9) ಆರ್‌ಸಿಬಿ vs ಲಕ್ನೋ ಸೂಪರ್ ಜೈಂಟ್ಸ್ - ಮೇ 1, ಲಕ್ನೋ

10) ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ - ಮೇ 6, ನವದೆಹಲಿ

11) ಆರ್‌ಸಿಬಿ vs ಮುಂಬೈ ಇಂಡಿಯನ್ಸ್- ಮೇ 9, ಮುಂಬೈ

12) ಆರ್‌ಸಿಬಿ vs ರಾಜಸ್ಥಾನ ರಾಯಲ್ಸ್ - ಮೇ 14, ಜೈಪುರ

13) ಆರ್‌ಸಿಬಿ vs ಸನ್‌ರೈಸರ್ಸ್ ಹೈದರಾಬಾದ್ - ಮೇ 18, ಬೆಂಗಳೂರು

14) ಆರ್‌ಸಿಬಿ vs ಗುಜರಾತ್ ಟೈಟನ್ಸ್ - ಮೇ 21, ಬೆಂಗಳೂರು

ಐಪಿಎಲ್ 2023: ಆರ್‌ಸಿಬಿ ತಂಡದ ಸಂಭಾವ್ಯ ಅಡುವ 11ರ ಬಳಗ

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹೇಝಲ್‌ವುಡ್, ಮೊಹಮ್ಮದ್ ಸಿರಾಜ್.

ಐಪಿಎಲ್ 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗೆ, ಆಕಾಶ್ ದೀಪ್, ಜೋಶ್ ಹ್ಯಾಝಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+