ಐಪಿಎಲ್ 2023: ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮಕ್ಕೆ ಸಜ್ಜಾದ ಚಿನ್ನಸ್ವಾಮಿ ಕ್ರೀಡಾಂಗಣ: ವಿಡಿಯೋ
ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟೂರ್ನಿಯ ಪಂದ್ಯಗಳು ನಾಲ್ಕು ವರ್ಷಗಳ ಬಳಿಕ ನಡೆಯಲಿದೆ. ಈ ಪಂದ್ಯಗಳಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಸನ್ನಧವಾಗಿದೆ. ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 26 ಭಾನುವಾರದಂದು ಅಭಿಮಾನಿಗಳ ಸಮ್ಮುಖದಲ್ಲಿ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 26ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಆರ್‌ಸಿಬಿ ತಂಡದ ಅಭಿಮಾನಿಗಳು ಕೂಡ ಭಾಗಿಯಾಗಲಿದ್ದು ಇದಕ್ಕಾಗಿ ವಿಶೇಷ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ. ಇನ್ನು ಈ ಬಾರಿಯ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಮೊದಲ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆಡಲಿದ್ದು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಮಾರ್ಚ್ 1ರಂದು ಈ ಪಂದ್ಯವನ್ನು ಆಡುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.

ಮಾರ್ಚ್ 26ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಅನ್‌ಬಾಕ್ಸ್ ಕಾರ್ಯಕ್ರಮ ಆಯೋಜನೆಯಾಗಲಿದೆ. ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಕೂಡ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು ಆರ್‌ಸಿಬಿ ತಂಡದ ವೆಬ್‌ಸೈಟ್‌ನಲ್ಲಿ ಟಿಕೆಟ್ ಕೊಂಡು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಈ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಹಲವು ವಿಭಿನ್ನ ಕಾರ್ಯಕ್ರಮಗಳು ಇರಲಿದ್ದು ಆರ್‌ಸಿಬಿ ತಂಡದ ಮೊದಲ ಅಭ್ಯಾಸ, ಹಾಲ್ ಆಫ್ ಫೇಮ್ ಹಾಗೂ ಸೋನು ನಿಗಮ್ ಹಾಗೂ ಜೇಸನ್ ಡೆರುಲೋ ಅವರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿದೆ.
ಭಾನುವಾರ ನಡೆಯಲಿರುವ ಈ ಅನ್‌ಬಾಕ್ಸ್ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆಗಳನ್ನು ಕೂಡ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕಾಗಿ ಕ್ರೀಡಾಂಗಣದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದ್ದು ಆಸನದ ವ್ಯವಸ್ಥೆ, ಬೆಳಕಿನ ವ್ಯವಸ್ಥೆಗಳು ಹಾಗೂ ಆಡಿಯೋ ವ್ಯವಸ್ಥೆಯನ್ನು ಉನ್ನತ ಮಟ್ಟಕ್ಕೇರಿಸಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಸುಮಾರು 40000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣವಾಗಿದ್ದು ಬಹುತೇಕ ಸೀಟುಗಳು ಅಭಿಮಾನಿಗಳಿಂದ ತುಂಬಿರುವ ನಿರೀಕ್ಷೆಯಿದೆ. ಇನ್ನು ಕ್ರೀಡಾಂಗಣದ ಆಡಳಿತ ಮಂಡಳಿ ಐಪಿಎಲ್ ಆಡಳಿತ ಮಂಡಳಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಎಲ್ಲಾ ಪಂದ್ಯಗಳು ಕೂಡ ಸುರಕ್ಷಿತ ವಾತಾವರಣದಲ್ಲಿ ಆಯೋಜನೆಯಾಗಲು ಸಿದ್ಧತೆಗಳು ನಡೆಯುತ್ತಿದೆ.
ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೂಡ ಆರ್‌ಸಿಬಿ ತಂಡ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದ್ದು ಕೆಲ ಪ್ರತಿಭಾನ್ವಿತ ಆಟಗಾರರು ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ರೀಸ್ ಟೋಪ್ಲಿ, ಮೈಕಲ್ ಬ್ರೇಸ್‌ವೆಲ್ ತಂಡಕ್ಕೆ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿಯಲು ಸರ್ವ ಪ್ರಯತ್ನ ನಡೆಸಲಿದೆ.
ಆರ್‌ಸಿಬಿ ಸ್ಕ್ವಾಡ್ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಶಹಬಾಜ್ ಅಹಮದ್, ರಜತ್ ಪಾಟಿದಾರ್, ಅನುಜ್ ರಾವತ್, ಆಕಾಶ್ ದೀಪ್, ಜೋಶ್ ಹ್ಯಾಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮೈಕೆಲ್ ಬ್ರೇಸ್‌ವೆಲ್.












Click it and Unblock the Notifications