RCB vs KKR: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೇಡಿನ ಸೆಣೆಸಾಟ: ಸ್ಟಾರ್ ವೇಗಿಯ ಲಭ್ಯತೆ ಬಗ್ಗೆ ಸುಳಿವು ನೀಡಿದ RCB
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಟೂರ್ನಿಯಲ್ಲಿ ನಾಲ್ಕನೇ ಗೆಲುವು ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿದ್ದು ಆತ್ಮವಿಶ್ವಾಸದಲ್ಲಿದೆ. ಇದೀಗ ಆರ್‌ಸಿಬಿ ತಂಡದ ಮುಂದಿನ ಗುರಿ ಕೊಲ್ಕತ್ತಾ ಐಟ್ ರೈಡರ್ಸ್. ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಈ ಪಂದ್ಯ ನಡೆಯಲಿದ್ದು ತೀವ್ರ ಕುತೂಹಲ ಮೂಡಿಸಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಇದೇ ಆವೃತ್ತಿಯಲ್ಲಿ ನಡೆದ ತವರಿನಾಚೆಗಿನ ಪಂದ್ಯದಲ್ಲಿ ಆರ್‌ಸಿಬಿ ಆಘಾತಕಾರಿಯಾಗಿ ಸೋಲು ಕಂಡಿತ್ತು. ಇದೀಗ ಆರ್‌ಸಿಬಿ ತಂಡ ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಹೊಂದಿದೆ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡ ತನ್ನ ಬೌಲಿಂಗ್ ಪಡೆಯನ್ನು ಮತ್ತಷ್ಟಯ ಬಲಿಷ್ಠ ಗೊಳಿಸುವತ್ತ ಚಿತ್ತ ನೆಟ್ಟಿದ್ದು ಪ್ರಮುಖ ವೇಗಿ ತಂಡಕ್ಕೆಡ ಕಮ್‌ಬ್ಯಾಕ್ ಮಾಡುವ ಸುಳಿವು ನೀಡಿದೆ ಆರ್‌ಸಿಬಿ.

ಆರ್‌ಸಿಬಿ ತಂಡದ ಅನುಭವಿ ವೇಗಿ ಜೋಶ್ ಹೇಜಲ್‌ವುಡ್ ಗಾಯದ ಕಾರಣದಿಂದಾಗಿ ಈವರೆಗಿನ ಐಪಿಎಲ್ ಪಂದ್ಯಗಳಿಗೆ ಅಲಭ್ಯವಾಗಿದ್ದರು. ಆದರೆ ಇದೀಗ ಜೋಶ್ ಹೇಜಲ್‌ವುಡ್ ಅವರ ಚೇತರಿಕೆಯ ಬಗ್ಗೆ ಪ್ರಮುಖ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಹೇಜಲ್‌ವುಡ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೆ 7 ಪಂದ್ಯಗಳನ್ನು ಆಡಿದೆ. ಇದರಲ್ಲಿ ಆರ್‌ಸಿಬಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಜೋಶ್ ಹೇಜಲ್‌ವುಡ್ ಐಪಿಎಲ್‌ಬ ದ್ವಿತಿಯಾರ್ಧಕ್ಕೆ ಅಲಭ್ಯವಾಗುತ್ತಿರುವುದು ತಂಡದ ಬೌಲಿಂಗ್ ವಿಭಾಗದ ಬಲ ಹೆಚ್ಚಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಬಳಿಕ ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದರು.
IPL 2023: ಭವಿಷ್ಯದ ಶ್ರೇಷ್ಠ ಆಟಗಾರರಂತೆ ಅಬ್ಬರಿಸಿ, ಈಗ ತಂಡದಿಂದಲೇ ಹೊರಬಿದ್ದ 4 ಯುವ ಆಟಗಾರರು!
ಆರ್‌ಸಿಬಿ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕ್ರೀಡಾಂಗಣದಲ್ಲಿ ಏಪ್ರಿಲ್ 26 ಮಂಗಳವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್
ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಜೇಸನ್ ರಾಯ್, ಆರ್ಯ ದೇಸಾಯಿ












Click it and Unblock the Notifications