RCB vs KKR IPL 2023: ಆರ್‌ಸಿಬಿ vs ಕೆಕೆಆರ್ ನಡುವೆ ಗೆಲುವು ಯಾರಿಗೆ?; ಸಂಭಾವ್ಯ ಆಡುವ 11ರ ಬಳಗ

ಗುರುವಾರ, ಏಪ್ರಿಲ್ 6ರಂದು ಕೋಲ್ಕತ್ತಾದಲ್ಲಿ ನಡೆಯುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿವೆ.

ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡವು ತಮ್ಮ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿ ಶುಭಾರಂಭ ಮಾಡಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ತಲಾ ಅರ್ಧಶತಕ ಬಾರಿಸಿ ಉತ್ತಮ ಲಯದಲ್ಲಿದ್ದಾರೆ.

IPL 2023: RCB vs KKR Match Preview, Probable Playing 11, TV And Live Streaming Details

ಇನ್ನು ತಂಡದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೆಸ್‌ವೆಲ್ ಅವರಂತಹ ಸ್ಟಾರ್ ಬ್ಯಾಟರ್‌ಗಳನ್ನು ಒಳಗೊಂಡಿದ್ದರೆ, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್ ಅವರಂತಹ ಬೌಲಿಂಗ್ ದಾಳಿಯನ್ನು ಹೊಂದಿದೆ.

ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ವಿರುದ್ಧದ ತಮ್ಮ ಮಳೆ-ಬಾಧಿತ ಮೊದಲ ಪಂದ್ಯದಲ್ಲಿ ನಿತೀಶ್ ರಾಣಾ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಡಿಎಲ್‌ಎಸ್ ವಿಧಾನದಲ್ಲಿ ಏಳು ರನ್‌ಗಳಿಂದ ಸೋಲು ಕಂಡು ನಿರಾಸೆ ಅನುಭವಿಸಿತು. ಸ್ಫೋಟಕ ಆಟಗಾರರಿಂದ ಕೂಡಿದ ಹೊರತಾಗಿಯೂ ಸೋಲು ಕಂಡಿದೆ.

IPL 2023: RCB vs KKR Match Preview, Probable Playing 11, TV And Live Streaming Details

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಶಕೀಬ್ ಅಲ್ ಹಸನ್ ಮತ್ತು ಶ್ರೇಯಸ್ ಅಯ್ಯರ್ ಅವರ ಸೇವೆ ಕಳೆದುಕೊಂಡಿದ್ದು ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ. ಆದರೂ, ತಂಡದಲ್ಲಿ ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ ಅವರಂತಹ ಉತ್ತಮ ಪ್ರದರ್ಶನಕಾರರನ್ನು ಒಳಗೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಸದ್ಯದ ಬಲಾಬಲದ ಪ್ರಕಾರ, ಆರ್‌ಸಿಬಿ ತಂಡ ಕೆಕೆಆರ್ ವಿರುದ್ಧ ಮೈಲುಗೈ ಸಾಧಿಸುವ ಮುನ್ಸೂಚನೆ ಕಾಣುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ವಿವರ

ಸ್ಥಳ ಮತ್ತು ಸಮಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವು ಗುರುವಾರ, ಏಪ್ರಿಲ್ 6ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.

IPL 2023: RCB vs KKR Match Preview, Probable Playing 11, TV And Live Streaming Details

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದೆ ಮತ್ತು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಈಡನ್ ಗಾರ್ಡನ್ಸ್ ಪಿಚ್ ವರದಿ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಪಿಚ್‌ನಲ್ಲಿ ಬಾಲ್ ಸುಲಭವಾಗಿ ಬ್ಯಾಟ್‌ಗೆ ಬರಲಿದೆ ಮತ್ತು ಕಿರಿದಾದ ಬೌಂಡರಿ ಲೈನ್ ಬ್ಯಾಟ್ಸ್‌ಮನ್‌ಗಳು ದೊಡ್ಡ ರನ್ ಗಳಿಸಲು ಸಹಾಯವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ 11ರ ಬಳಗ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಮನ್‌ದೀಪ್ ಸಿಂಗ್, ಅನುಕುಲ್ ರಾಯ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+