RCB vs MI: ಐಪಿಎಲ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ

ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡುವ ಮೂಲಕ ತಮ್ಮ ವೈಫಲ್ಯವನ್ನು ಮುಂದುವರಿಸಿದ್ದಾರೆ. ಆರ್‌ಸಿಬಿ ವಿರುದ್ಧ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಗ್ಗಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಸೇರಿಕೊಂಡರು.

ಈ ಪಂದ್ಯದಲ್ಲಿ ಮುಂಬೈ ಇಂಡಯನ್ಸ್ ತಂಡ ಕಳಪೆ ಆರಂಭವನ್ನು ಪಡೆದ ಕಾರಣ 32ರ ಹರೆಯದ ಸೂರ್ಯಕುಮಾರ್ ಯಾದವ್ ಪವರ್‌ಪ್ಲೇ ಮುಗಿಯುವ ಮುನ್ನವೇ ಕ್ರೀಸ್‌ಗೆ ಇಳಿದಿದ್ದರು. ಆದರೆ ಸೂರ್ಯಕುಮಾರ್ ಯಾದವ್ ಕೂಡ ಕ್ರೀಸ್‌ನಲ್ಲಿ ಹೆಚ್ಚು ಹಿತ್ತು ಉಳಿದಯಲು ಸಾಧ್ಯವಾಗಲಿಲ್ಲ. 15 ರನ್‌ಗಳಿಸಿದ್ದಾಗ ಮೈಕಲ್ ಬ್ರೇಸ್‌ವೆಲ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು ಸೂರ್ಯಕುಮಾರ್ ಯಾದವ್.

IPL 2023, RCB vs MI: Mumbai Indians star Suryakumar Yadav bad form continues in IPL

ODI World Cup : ಭಾರತದ ಎರಡನೇ ಏಕದಿನ ವಿಶ್ವಕಪ್‌ ಗೆಲುವಿಗೆ 12 ವರ್ಷದ ಸಂಭ್ರಮ: ಲೋಗೊ ಬಿಡುಗಡೆ ಮಾಡಿದ ಐಸಿಸಿ

ಕಳೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸೂಈರ್ಯಕುಮಾರ್ ಯಾದವ್ ಅತ್ಯಂತ ಆಘಾತಕಾರಿ ಪ್ರದರ್ಶನ ನೀಡಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರು ಪಂದ್ಯದಲ್ಲಿಯೂ ಎದುರಿಸಿದ ಮೊದಲ ಎಸೆತದಲ್ಲಿಯೇ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡಿದ್ದರು. ಇದೀಗ ಐಪಿಎಲ್‌ನಲ್ಲಿಯೂ ಆರಂಭಿಕ ಪಂದ್ಯದಲ್ಲಿ ಹಿನ್ನಡೆ ಅನುಭವಿಸುವ ಮೂಲಕ ತಮ್ಮ ಕಳಪೆ ಪಾರ್ಮ್ ಮುಂದುವರಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಅಗ್ರ ಕ್ರಮಾಂಕ ಆರ್‌ಸಿಬಿ ಬೌಲಿಂಗ್ ದಾಳಿಯ ವಿರುದ್ಧ ಸಂಪೂರ್ಣವಾಗಿ ಶರಣಾಯಿತು. ಆದರೆ ಮಧ್ಯಮ ಕ್ರಮಾಂಕದ ಆಟಗಾರ ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಆರ್‌ಸಿಬಿ ತಂಡದ ಲೆಕ್ಕಾಚಾರವನ್ನು ಬುಡಮೇಲು ಮಾಡಿದರು. ಇದರ ಪರಿಣಾಮವಾಗಿ ಮುಂಬೈ ಇಂಡಿಯನ್ಸ್ ತಂಡ ಆರ್‌ಸಿಬಿಗೆ ಈ ಪಂದ್ಯದಲ್ಲಿ ಗೆಲ್ಲಲು 172 ರನ್‌ಗಳ ಸವಾಲಿನ ಗುರಿ ನಿಗದಿಪಡಿಸಿದೆ.

ಆರ್‌ಸಿಬಿ ತಂಡದ ಬೌಲರ್‌ಗಳು ಈ ಪಂದ್ಯದ ಆರಂಭದಲ್ಲಿಯೇ ಅದ್ಭುತ ಯಶಸ್ಸು ಗಳಿಸಲು ಆರಂಭಿಸಿದರು. ಅದರಲ್ಲೂ ಒಹಮ್ಮದ್ ಸಿರಾಜ್ ಆರಂಭದಿಂದಲೇ ತೀಕ್ಷ್ಣ ದಾಳಿಯ ಮೂಲಕ ಎದುರಾಳೀ ದಾಂಡಿಗರ ವಿರುದ್ಧ ಒತ್ತಡ ಹೇರಲು ಆರಂಭಿಸಿದರು. ಇದರ ಪರಿಣಾಮವಾಗಿ ಅಗ್ರ ಕ್ರಮಾಂಕದ ಆಟಗಾರರಾದ ಇಶಾನ್ ಕಿಶನ್ ಕ್ಯಾಮರೂನ್ ಗ್ರೀನ್, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯ ಕುಮಾರ್ ಯಾದವ್ ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡರು.

ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್‌ಸಿಬಿಗೆ ಸುಲಭ ಗುರಿ ನೀಡಲಿದೆ ಎಂದು ಎಲ್ಲರೂ ಭಾವಿಸಿದರು. ಆದರೆ ತಿಲಕ್ ವರ್ಮಾ ಹಾಗೂ ನೇಹಲ್ ವಧೇರಾ 6ನೇ ವಿಕೆಟ್‌ಗೆ ಅರ್ಧ ಶತಕದ ಜೊತೆಯಾಟ ನೀಡಿ ತಂಡಕ್ಕೆ ಚೇತರಿಕೆ ನೀಡಿದರು. 13 ಎಸೆತಗಳಲ್ಲಿ 21 ರನ್‌ಗಳಿಸಿದ ವಧೇರಾ ವಿಕೆಟ್ ಕಳೆದುಕೊಂಡಾಗ ಮುಂಬೈ ಇಂಡಿಯನ್ಸ್ ತಂಡ 98 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಮತ್ತೊಂದು ತುದಿಯಲ್ಲಿ ಇನ್ನೆರಡು ವಿಕೆಟ್‌ಗಳು ಉರುಳಿದರು ಕೂಡ ತಿಲಕ್ ವರ್ಮಾ ಹೋರಾಟ ಕೈಬಿಡಲಿಲ್ಲ.

9ನೇ ವಿಕೆಟ್‌ಗೆ ಅರ್ಶದ್ ಖಾನ್ ಜೊತೆಗೆ ಮತ್ತೊಂದು ಅದ್ಭುತ ಜೊತೆಯಾಟದಲ್ಲಿ ಭಾಗುಯಾದ ತಿಲಕ್ ತಂಡದ ಮೊತ್ತವನ್ನು 171 ರನ್‌ಗಳಿಗೆ ತಲುಪಿಸುವಲ್ಲಿ ಯಶಸ್ವಿಯಾದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 46 ಎಸೆತಗಳನ್ನು ಎದುರಿಸಿದ ತಿಲಕ್ ವರ್ಮಾ 84 ರನ್‌ಗಳಿಸಿ ಅಜೇಯವಾಗುಳಿದರು. 9 ಬೌಂಡರಿ ಹಾಗೂ 4 ಸಿಕ್ಸರ್‌ಗಳು ಈ ಇನ್ನಿಂಗ್ಸ್‌ನಲ್ಲಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+