IPL 2023: ಆರ್‌ಸಿಬಿ vs ಪಂಜಾಬ್ ಪಂದ್ಯದ ಪಿಚ್ ವರದಿ, ಸಂಭಾವ್ಯ ಆಡುವ ಬಳಗ, ನೇರಪ್ರಸಾರದ ಮಾಹಿತಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 27ನೇ ಪಂದ್ಯ ನಾಳೆ ( ಏಪ್ರಿಲ್ 20 ) ಮಧ್ಯಾಹ್ನ 3.30 ಕ್ಕೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಷಿಯೇಷನ್ ಐಎಸ್ ಬಿಂದ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಈ ಎರಡೂ ತಂಡಗಳೂ ಸಹ ತಲಾ 5 ಪಂದ್ಯಗಳನ್ನು ಆಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

IPL 2023: RCB vs PBKS probable playing 11, pitch report and live telecast details

ಪಂಜಾಬ್ ಕಿಂಗ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿಯೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನ್ನು ಕಂಡಿದೆ. ಇನ್ನು ಎರಡೂ ತಂಡಗಳು ಇಲ್ಲಿಯವರೆಗೂ 30 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಪಂಜಾಬ್ ಕಿಂಗ್ಸ್ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠವಾಗಿದೆ.

ಪಿಚ್ ವರದಿ:

ಎರಡೂ ತಂಡಗಳ ನಡುವಿನ 31ನೇ ಪಂದ್ಯ ನಡೆಯಲಿರುವ ಪಂಜಾಬ್ ಕ್ರಿಕೆಟ್ ಅಸೋಷಿಯೇಷನ್ ಐಎಸ್ ಬಿಂದ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ವೇಗಿಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲಿದ್ದು, ಎರಡೂ ಕಡೆಯ ಬೌಂಡರಿಗಳು ಅಗಲವಾಗಿವೆ. ಇನ್ನು ಪಿಚ್ ಹೆಚ್ಚು ಬೌನ್ಸ್ ಗುಣವನ್ನೊಂದಿದ್ದು ರನ್ ಹೊಳೆ ಹೆಚ್ಚಾಗಿಯೇ ಇರಲಿದೆ. ಎರಡನೇ ಇನ್ನಿಂಗ್ಸ್ ಸಂದರ್ಭದಲ್ಲಿ ಇಬ್ಬನಿ ಇರಲಿದ್ದು, ಎರಡೂ ತಂಡಗಳು ಚೇಸ್ ಮಾಡಲು ಇಚ್ಛಿಸಲಿವೆ.

IPL 2023: RCB vs PBKS probable playing 11, pitch report and live telecast details

ಸಂಭಾವ್ಯ ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ವೇಯ್ನ್ ಪಾರ್ನೆಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅನುಜ್ ರಾವತ್, ಹರ್ಷಲ್ ಪಟೇಲ್ ಹಾಗೂ ಮೊಹಮ್ಮದ್ ಸಿರಾಜ್

ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್(ನಾಯಕ), ಶಾರುಖ್ ಖಾನ್, ಸ್ಯಾಮ್ ಕರನ್, ಸಿಕಂದರ್ ರಜಾ, ರಿಷಿ ಧವನ್, ಲಾಸ್ ಲಿವಿಂಗ್‌ಸ್ಟನ್, ಸಿಮ್ರಾನ್ ಸಿಂಗ್, ಜೆ ಎಮ್ ಶರ್ಮಾ(ವಿಕೆಟ್ ಕೀಪರ್), ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಕಗಿಸೊ ರಬಾಡ

ನೇರಪ್ರಸಾರ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ನೇರಪ್ರಸಾರ ಕಾರ್ಯಕ್ರಮ ಜಿಯೊ ಸಿನಿಮಾ ಅಪ್ಲಿಕೇಶನ್‌ನಲ್ಲಿ ಹಾಗೂ ವೆಬ್‌ಸೈಟ್‌ನಲ್ಲಿ ಉಚಿತವಾಗಿ ಪ್ರಸಾರವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿಯೂ ಸಹ ವೀಕ್ಷಿಸಬಹುದಾಗಿದೆ.

ನಾಳೆ ಎರಡು ಪಂದ್ಯಗಳು ಜರುಗಲಿದ್ದು, ಈ ಪಂದ್ಯ ಮುಗಿದ ಬಳಿಕ ರಾತ್ರಿ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+