IPL 2023: ಚಿನ್ನಸ್ವಾಮಿಯಲ್ಲಿ RCBಗೆ ಲಕ್ನೋ ಸವಾಲು: ಈ ಬಾರಿ ಫಾಫ್ ಪಡೆಗೆ ಕನ್ನಡಿಗ ಜೋಡಿಯ ಆತಂಕ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಸವಾಲೆಸೆಯುತ್ತಿರುವುದು ಲಕ್ನೋ ಸೂಪರ್ ಜೈಂಟ್ಸ್ ತಂಡ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ತೀವ್ರ ಕುತೂಹಲ ಮೂಡಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಭುತ ಗೆಲುವು ಸಾಧಿಸಿರುವ ಆರ್‌ಸಿಬಿ ತಂಡ ಅಂಥಾದ್ದೇ ಗೆಲುವಿಗೆ ಎದುರಿ ನೋಡುತ್ತಿದೆ.

ಆದರೆ ಈ ಬಾರಿ ಆರ್‌ಸಿಬಿ ತಂಡಕ್ಕೆ ಎರಡು ದೊಡ್ಡ ಸವಾಲುಗಳು ಎದುರಾಗುವುದು ನಿಶ್ಚಿತ. ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಇಬ್ಬರು ಕನ್ನಡಿಗ ಆಟಗಾರರು ಇದ್ದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿದ ಸಾಕಷ್ಟು ಅನುಭವ ಹೊಂದಿದ್ದಾರೆ. ಇಲ್ಲಿನ ಪಿಚ್‌ನ ವರ್ತನೆಯ ಬಗ್ಗೆ ಸಂಪೂರ್ಣ ಅರಿವು ಈ ಇಬ್ಬರು ಆಟಗಾರರಿಗೆ ಇದೆ. ಹೀಗಾಗಿ ಈ ಪಂದ್ಯ ಆರ್‌ಸಿಬಿ ತಂಡಕ್ಕೆ ಹೆಚ್ಚಿನ ಸವಾಲಾಗಿರುವುದರಲ್ಲಿ ಅನುಮಾನವಿಲ್ಲ.

IPL 2023: RCB will face LSG in Chinnaswamy, expect big challenge from KL rahul and K Gowtham

ಇಬ್ಬರು ಕನ್ನಡಿಗರ ಸವಾಲು: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಹಾಗೂ ಆಲ್‌ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಆರ್‌ಸಿಬಿ ತಂಡಕ್ಕೆ ಮುಮದಿನ ಪಂದ್ಯದಲ್ಲಿ ಸವಾಲೆನಿಸಬಲ್ಲ ಆಟಗಾರರಾಗಿರುವುದರಲ್ಲಿ ಅನುಮಾನವಿಲ್ಲ. ಕೆಎಲ್ ರಾಹುಲ್ ಅಗ್ರ ಕ್ರಮಾಂಕದಲ್ಲಿ ಎಲ್‌ಎಸ್‌ಜಿ ಪರವಾಗಿ ಅಬ್ಬರಿಸಲು ಸಜ್ಜಾಗಿದ್ದರೆ ಕೆ ಗೌತಮ್ ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲಿಯೂ ಮಿಂಚುವ ಆತ್ಮವಿಶ್ವಾಸದಲ್ಲಿದ್ದಾರೆ. ಹೀಗಾಗಿ ಕೆ ಗೌತಮ್ ಆರ್‌ಸಿಬಿ ವಿರುದ್ಧದ ಆರಂಭಿಕ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನವನ್ನು ಪಡೆಯುವುವು ಬಹುತೇಕ ಖಚಿತ.

MI vs CSK: ಚೆನ್ನೈ ವಿರುದ್ಧದ ಸೋಲಿಗೆ ಬ್ಯಾಟರ್‌ಗಳನ್ನು ದೂರಿದ ಮುಂಬೈ ಇಂಡಿಯನ್ಸ್ ಕೋಚ್

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲ ಪಂದ್ಯದಲ್ಲಿ ಗೆದ್ದು ಎರಡನೇ ಪಂದ್ಯದಲ್ಲಿ ಸೋಲು ಕಂಡ ಬಳಿಕ ಮತ್ತೆ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದೆ. ಇತ್ತ ಆರ್‌ಸಿಬಿ ಒಂದು ಗೆಲುವು ಒಂದು ಸೋಲಿನೊಂದಿಗೆ ನೆಟ್‌ ರನ್‌ರೇಟ್‌ನಲ್ಲಿಯೂ ಭಾರೀ ಕುಸಿತ ಕಂಡಿರುವ ಕಾರಣ 7ನೇ ಸ್ಥಾನದಲ್ಲಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 10 ಸೋಮವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು ಟಾಸ್ ಪ್ರಕ್ರಿಯೆ 7 ಗಂಟೆಗೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಪಂದ್ಯ ನೇರಪ್ರಸಾರವಾಗಲಿದ್ದು ಜಿಯೋ ಸಿನಿಮಾದಲ್ಲಿ ಪಂದ್ಯವನ್ನು ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್

ಎಲ್‌ಎಸ್‌ಜಿ: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಕೆ ಗೌತಮ್, ಯಶ್ ಠಾಕೂರ್, ಜಯದೇವ್ ಉನಾದ್ಕತ್, ರವಿ ಬಿಷ್ಣೋಯ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+