Rohit Sharma: ಐಪಿಎಲ್‌ನಲ್ಲಿ 6000 ರನ್‌ಗಳಿಸಿದ ರೋಹಿತ್ ಶರ್ಮಾ: ಅಪರೂಪದ ಸಾಧಕರ ಪಟ್ಟಿಗೆ ಸೇರ್ಪಡೆ

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಟೂರ್ನಿಯಲ್ಲಿ ಒಟ್ಟಾರೆಯಾಗಿ ರೋಹಿತ್ ಶರ್ಮಾ 6000 ರನ್‌ಗಳನ್ನು ಗಳಿಸಿದ ಅಪರೂಪದ ಸಾಧನೆ ಮಾಡಿದ್ದು ಈ ಮೈಲಿಗಲ್ಲು ದಾಟಿದ ಕೇವಲ ನಾಲ್ಕನೇ ಆಟಗಾರ ಎನಿಸಿದ್ದು ಮೂರನೇ ಭಾರತೀಯ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಮುಂಬೈ ಇಂಡಿಯನ್ಸ್ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಇಶಾನ್ ಕಿಶನ್ ಜೊತೆಗೆ ಎಂದಿನಂತೆ ಆರಂಬಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾದರು.

IPL 2023: Rohit Sharma completes 6,000 runs in IPL, joins elite club with Kohli and Dhawan

ಈ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 5986 ರನ್‌ಗಳನ್ನು ಗಳಿಸಿದ್ದರು. ಹೀಗಾಗಿ 6000 ರನ್‌ಗಳ ಮೈಲಿಗಲ್ಲು ತಲುಪಲು 14 ರನ್‌ಗಳ ಅಗತ್ಯ ಮಾತ್ರವೇ ಇತ್ತು. ಈ ವಿಶೇಷ ಸಾಧನೆ ಮಾಡುವ ಮೂಲಕ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ, ಶಿಖರ್ ಧವನ್ ಹಾಗೂ ಡೇವಿಡ್ ವಾರ್ನರ್ ಬಳಿಕ 6000 ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

RCB vs CSK: ಸಿಎಸ್‌ಕೆ ವಿರುದ್ಧದ ಸೋಲಿನ ಬಳಿಕ RCBಯ ಹುಳುಕು ಬೊಟ್ಟು ಮಾಡಿದ ಜಹೀರ್ ಖಾನ್

ಐಪಿಎಲ್‌ನಲ್ಲಿ ಅತ್ಯಂತ ಹೆಚ್ಚು ರನ್‌ಗಳಿಸಿರುವ ದಾಖಲೆ ಆರ್‌ಸಿಬಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 6844 ರನ್‌ಗಳಿಸಿರುವ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 7000 ರನ್‌ಗಳ ಗಡಿದಾಟಿದ ಮೊದಲ ಆಟಗಾರ ಎನಿಸಿಕೊಳ್ಳುವ ಸನಿಹದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಶಿಖರ್ ಧವನ್ ಇದ್ದು 6477 ರನ್‌ಗಳನ್ನು ಗಳಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್ 6109 ರನ್‌ಗಳಿಸಿದ್ದು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಆಟಗಾರ.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಉತ್ತಮ ಆರಂಭವನ್ನು ಪಡೆದರು ಕೂಡ ಅದನ್ನು ವಿಸ್ತರಿಸಲು ಸಾಧ್ಯವಾಗಲಿಲ್ಲ. ಮುಂಬೈ ಇಂಡಿಯನ್ಸ್ ನಾಯಕ 18 ಎಸೆತಗಳನ್ನು ಎದುರಿಸಿದ್ದು 6 ಬೌಂಡರಿ ಸಿಡಿಸಿ 28 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಟಿ ನಟರಾಜನ್ ಎಸೆತದಲ್ಲಿ ಎಸ್‌ಆರ್‌ಹೆಚ್ ನಾಯಕ ಐಡೆನ್ ಮಾರ್ಕ್ರಮ್‌ಗೆ ಕ್ಯಾಚ್ ನೀಡಿ ರೋಹಿತ್ ನಿರ್ಗಮಿಸಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ಆಡುವ ಬಳಗ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್

ಬೆಂಚ್: ಅಬ್ದುಲ್ ಸಮದ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಮಯಾಂಕ್ ದಾಗರ್, ಉಮ್ರಾನ್ ಮಲಿಕ್, ಉಪೇಂದ್ರ ಯಾದವ್, ಅನ್ಮೋಲ್‌ಪ್ರೀತ್ ಸಿಂಗ್, ಆದಿಲ್ ರಶೀದ್, ಅಕೇಲ್ ಹೊಸೈನ್, ಸಮರ್ಥ ವ್ಯಾಸ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್

ಬೆಂಚ್: ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಕುಮಾರ್ ಕಾರ್ತಿಕೇಯ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಅರ್ಷದ್ ಖಾನ್, ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ಆಕಾಶ್ ಮಾಧ್ವಲ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+