IPL 2023: ಬೆಂಗಳೂರಿಗೆ ಬಂದಿಳಿದ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್: ವಿಡಿಯೋ

IPL 2023: Royal Challengers Bangalore skipper Faf du Plessis reached Bengaluru for upcoming IPL 2023 season

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಆವೃತ್ತಿ ಆರಂಭಕ್ಕೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ಎಲ್ಲಾ ಫ್ರಾಂಚೈಸಿಗಳು ಕೂಡ ಈ ಮೆಗಾ ಟೂರ್ನಿಗೆ ಸಿದ್ಧತೆಗಳನ್ನು ಆರಂಭಿಸಲು ಶುರು ಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಈ ಆವೃತ್ತಿಗೆ ಸಿದ್ಧತೆ ನಡೆಸಲು ಸಜ್ಜಾಗಿದ್ದು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಬೆಂಗಳೂರಿಗೆ ಬಂದಿಳಿದಿದ್ದಾರೆ. ಈ ಮೂಲಕ ಮುಂಬರುವ ಆವೃತ್ತಿಗೆ ಫಾಫ್ ಸಜ್ಜಾಗಿದ್ದಾರೆ.

ಫಾಫ್ ಡು ಪ್ಲೆಸಿಸ್ ಕಳೆದ ಐಪಿಎಲ್ ಆವೃತ್ತಿಗೂ ಮುನ್ನ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿಯಿಂದ ವಹಿಸಿಕೊಂಡಿದ್ದರು. ಕಳೆದ ಆವೃತ್ತಿಯಲ್ಲಿ ಫಾಫ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್‌ಸಿಬಿ ತಂಡ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿತ್ತು.

WTC Final: ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಹ್ಯಾಟ್ಸ್‌ಆಫ್ ಎಂದ ಅನುಭವಿ ಆಟಗಾರ ಆರ್ ಅಶ್ವಿನ್

ಇನ್ನು ಬೆಂಗಳೂರಿಗೆ ಆಗಮಿಸಿದ ಬಳಿಕ ಮುಂಬರುವ ಆವೃತ್ತಿಯಲ್ಲಿ ಆರ್‌ಸಿಬಿ ಅಭಿಮಾನಿಗಳ ಸಮ್ಮುಖದಲ್ಲಿ ಆಡುವುದಕ್ಕೆ ಉತ್ಸುಕನಾಗಿರುವುದಾಗಿ ಹೇಳಿದ್ದಾರೆ ಫಾಫ್ ಡು ಪ್ಲೆಸಿಸ್. ಆ ಅನುಭವವನ್ನು ಪಡೆಯುವುದಕ್ಕಾಗಿ ತಾನು ಕಾತರಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

"ಬೆಂಗಳೂರಿಗೆ ಮತ್ತೆ ಮರಳಿರುವುದು ಸಂತಸ ತಂದಿದೆ. ಕಳೆದ ವರ್ಷದ ಆವೃತ್ತಿಯಲ್ಲಿ ತವರಿನ ಪ್ರೇಕ್ಷಕರೊಂದಿಗೆ ಆಡಿದ ಅನುಭವ ಪಡೆದುಕೊಂಡಿರಲಿಲ್ಲ. ಹಾಗಾಗಿ ಈ ಬಾರಿ ಬಹಳ ಉತ್ಸಾಹಿತನಾಗಿದ್ದೇನೆ. ಯಾಕೆಂದರೆ ಈ ಬಾರಿ ನಾನು ಕಿಕ್ಕಿರಿದ ಅಭಿಮಾನಿಗಳ ಮಧ್ಯೆ ಆಡಲಿದ್ದೇನೆ. ಅದಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ" ಎಂದಿದ್ದಾರೆ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್.

ಇನ್ನು ಈ ಬಾರಿಯ ಐಪಿಎಲ್‌ಗೂ ಮುನ್ನ ನಡೆದಿದ್ದ ಹರಾಜು ಪ್ರಕ್ರಿಯೆಯಲ್ಲಿ ಆರ್‌ಸಿಬಿ ತಂಡ ವಿಲ್ ಜಾಕ್ಸ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿತ್ತು. ಆದರೆ ಅವರು ಐಪಿಎಲ್‌ಗೂ ಮುನ್ನ ಗಾಯಗೊಂಡಿರುವ ಕಾರಣದಿಂದಾಗಿ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಆರ್‌ಸಿಬಿ ತಂಡಕ್ಕೆ ನ್ಯೂಜಿಲೆಂಡ್ ತಂಡದ ಆಲ್‌ರೌಂಡರ್ ಮೈಕ್ ಬ್ರೇಸ್‌ವೆಲ್ ಸೇರ್ಪಡೆಯಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಆಲ್‌ರೌಂಡರ್ ವಿಲ್ ಜಾಕ್ಸ್ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಐಪಿಎಲ್‌ನಿಂದ ಅವರು ಹೊರಗುಳಿಯುವುದು ಅನಿವಾರ್ಯವಾಯಿತು. ಹೀಗಾಗಿ ಆರ್‌ಸಿಬಿ ಮತ್ತೋರ್ವ ಆಲ್‌ರೌಂಡರ್ ನ್ಯೂಜಿಲೆಂಡ್ ತಂಡದ ಆಟಗಾರ ಮೈಕಲ್ ಬ್ರೇಸ್‌ವೆಲ್ ಅವರನ್ನು ಸೇರ್ಪಡೆಗೊಳಿಸಿದೆ. ತಮ್ಮ ಮೂಲಬೆಲೆ 1 ಕೋಟಿಗೆ ಅವರು ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

Tim Paine Retirement: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಿಮ್ ಪೈನ್ ನಿವೃತ್ತಿ

ಇನ್ನು ಮೈಕಲ್ ಬ್ರೇಸ್‌ವೆಲ್‌ಗೆ ಭಾರತದಲ್ಲಿ ಆಡಿರುವ ಅನುಭವವೂ ಇದೆ. ಈ ವರ್ಷಾರಂಭದಲ್ಲಿ ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾಗ ಏಕದಿನ ಹಾಗೂ ಟಿ20 ಸರಣಿಯಲ್ಲಿ ಕಿವೀಸ್ ಪರವಾಗಿ ಕಣಕ್ಕಿಳಿದಿದ್ದರು. ಇನ್ನು ಈವರೆಗೆ ಬ್ರೇಸ್‌ವೆಲ್ ಒಟ್ಟಾರೆಯಾಗಿ 117 ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದು 30.86ರ ಸರಾಸರಿಯಲ್ಲಿ 133.48ರ ಸ್ಟ್ರೈಕ್‌ರೇಟ್‌ನಲ್ಲಿ 2284 ರನ್‌ಗಳಿಸಿದ್ದಾರೆ. ಒಂದು ಶತಕ ಹಾಗೂ 13 ಅರ್ಧ ಶತಕಗಳು ಅವರ ಹೆಸರಿನಲ್ಲಿದೆ. ಇನ್ನು 40 ವಿಕೆಟ್‌ಗಳನ್ನು ಕೂಡ ಅವರು ಸಂಪಾದಿಸಿದ್ದು 4 ನಾಲ್ಕು ವಿಕೆಟ್‌ಗಳ ಗೊಂಚಲು ಹೊಂದಿದ್ದಾರೆ.

ಆರ್‌ಸಿಬಿ ಸ್ಕ್ವಾಡ್ ಹೀಗಿದೆ: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ರಜತ್ ಪಾಟಿದಾರ್, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಶಹಬಾಜ್ ಅಹಮದ್, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ಸಿದ್ಧಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜೋಶ್ ಹೇಜಲ್‌ವುಡ್, ಕರಣ್ ಶರ್ಮಾ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮೈಕಲ್ ಬ್ರೇಸ್‌ವೆಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+