RCB vs DC: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ಬಲಿಷ್ಠ ತಂಡ ಯಾವುದು?

IPL 2023: Royal Challengers Bangalore vs Delhi Capitals head to head records in kannada

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 6 ) ಲೀಗ್ ಹಂತದ 49 ಹಾಗೂ 50ನೇ ಪಂದ್ಯಗಳು ಜರುಗುತ್ತಿವೆ. ಮಧ್ಯಾಹ್ನ ಆರಂಭಗೊಂಡಿರುವ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ರಾತ್ರಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾತ್ರಿ 7.30 ಕ್ಕೆ ಆರಂಭಗೊಳ್ಳಲಿದೆ.

ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದ್ದು, ಮೊದಲಿಗೆ ಲೀಗ್ ಹಂತದ 20ನೇ ಪಂದ್ಯದಲ್ಲಿ ಸೆಣಸಾಡಿದ್ದವು.

ಟೂರ್ನಿಯಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ‌. ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಮಾತ್ರ ಗೆದ್ದು 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಹೀಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀನಾಯ ಪರಿಸ್ಥಿತಿಯಲ್ಲಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಪಂದ್ಯದಲ್ಲಿ ಸೋತರೆ ಪ್ಲೇ ಆಫ್ ಹಾದಿ ಕಠಿಣಗೊಳ್ಳಲಿದ್ದು, ಈ ಪಂದ್ಯವನ್ನು ಗೆಲ್ಲಲೇಬೇಕೆಂಬ ಗುರಿಯನ್ನು ಹೊಂದಿದೆ.

ಅತ್ತ ಈಗಾಗಲೇ ಪ್ಲೇ ಆಫ್ ರೇಸಿನಿಂದ ಬಲು ದೂರ ಉಳಿದಿರುವ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ ಸೋತರೆ ಪ್ಲೇ ಆಫ್ ಅವಕಾಶವನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಸಾಧ್ಯತೆ ಇದ್ದು, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಹೀಗೆ ಕುತೂಹಲ ಹುಟ್ಟುಹಾಕಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ಶುರುವಾಗಿವೆ‌. ಎರಡೂ ತಂಡಗಳು ಈ ಹಿಂದೆ ಎಷ್ಟು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ, ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದಿದೆ ಎಂಬ ಹೆಡ್ ಟು ಹೆಡ್ ಮಾಹಿತಿ ಈ ಕೆಳಕಂಡಂತಿದೆ..

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಇಲ್ಲಿಯವರೆಗೂ ಒಟ್ಟು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ಪಂದ್ಯಗಳಲ್ಲಿ ಗೆದ್ದಿದ್ದು, ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಗೆದ್ದಿದೆ‌ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿದೆ‌. ಇನ್ನು ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳ ನಡುವಿನ ಮೊದಲ ಪಂದ್ಯದಲ್ಲಿ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 175 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿತ್ತು‌. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ಸಾಧಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+