RCB vs LSG: ತಂಡಗಳು ಕಳೆದ ಬಾರಿ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

IPL 2023: Royal Challengers Bangalore vs Lucknow Super Giants head to head details

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಜರುಗುತ್ತಿದ್ದು ಇಂದು ( ಮೇ 1 ) ಟೂರ್ನಿಯ 43ನೇ ಲೀಗ್ ಪಂದ್ಯ ಜರುಗಲಿದೆ. ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯವಿದಾಗಿದ್ದು, ಈಗಾಗಲೇ ಮುಖಾಮುಖಿಯಾಗಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಗೆಲುವನ್ನು ಕಂಡಿತ್ತು.

ತವರು ನೆಲದಲ್ಲಿ ಸೋಲನ್ನು ಅನುಭವಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಇಲ್ಲಿಯವರೆಗೂ 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು, ಉಳಿದ 4 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿ 5 ಪಂದ್ಯಗಳನ್ನು ಗೆದ್ದು ಉಳಿದ 3 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಹೀಗೆ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಉತ್ತಮ ಹಂತದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯವನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಆಕ್ರಮಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಹೀಗೆ ಈ ಪಂದ್ಯ ಕಾತರತೆ ಹುಟ್ಟುಹಾಕಿದ್ದು, ಎರಡೂ ತಂಡಗಳು ಮುಖಾಮುಖಿಯಾದಾಗ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂಬ ಚರ್ಚೆಗಳೂ ಸಹ ನಡೆಯುತ್ತಿವೆ. ಈ ಕುರಿತ ಮಾಹಿತಿ ಈ ಕೆಳಕಂಡಂತಿದೆ..

ಮೊದಲೇ ಹೇಳಿದಂತೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳು ಈಗಾಗಲೇ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಆ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತಿದೆ. ಏಪ್ರಿಲ್ 10ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿತ್ತು. ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿ ಕೊನೆಯ ಎಸೆತದಲ್ಲಿ 1 ವಿಕೆಟ್ ಅಂತರದ ಗೆಲುವನ್ನು ಕಂಡಿತ್ತು.

ಇದು ಈ ಬಾರಿಯ ಮುಖಾಮುಖಿಯ ಫಲಿತಾಂಶವಾದರೆ ಕಳೆದ ಬಾರಿ ಲಕ್ನೋ ಸೂಪರ್ ಜೈಂಟ್ಸ್ ಆಡಿದ್ದ ಮೊದಲ ಐಪಿಎಲ್ ಸೀಸನ್‌ನಲ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದ್ದ ಎರಡೂ ಪಂದ್ಯಗಳಲ್ಲಿಯೂ ಸೋಲುಣಿಸಿತ್ತು. ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 181 ರಮ್ ಕಲೆಹಾಕಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 163 ರನ್ ಕಲೆಹಾಕಿ 18 ರನ್‌ಗಳ ಸೋಲನ್ನು ಕಂಡಿತ್ತು.

ಇನ್ನು ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತ್ತು. ಬಳಿಕ ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿ 14 ರನ್‌ಗಳ ಸೋಲನ್ನು ಕಂಡಿತ್ತು.

ಈ ಮೂಲಕ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮೇಲುಗೈ ಸಾಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+