IPL 2023: ಆರ್‌ಸಿಬಿ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿ; ಕೆಲವು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿರುವ ವಿರಾಟ್ ಕೊಹ್ಲಿ!
2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿಗೆ ದಿನಗಣನೆ ಆರಂಭವಾಗಿದ್ದು, ಬಹುನಿರೀಕ್ಷಿತ ಪಂದ್ಯಾವಳಿಗಾಗಿ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಮಾರ್ಚ್ 31ರಂದು ಅದ್ಧೂರಿ ಚಾಲನೆ ಸಿಗಲಿದೆ.
ಉದ್ಘಾಟನಾ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ಎದುರು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಇದೇ ವೇಳೆ ಆರ್‌ಸಿಬಿ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಘಾತವಾಗುವ ವರದಿಯೊಂದು ಕೇಳಿಬಂದಿದೆ.
2008ರಲ್ಲಿ ಐಪಿಎಲ್ ಪಂದ್ಯಾವಳಿಯ ಆರಂಭದಿಂದಲೂ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ 15 ವರ್ಷಗಳ ಇತಿಹಾಸದಲ್ಲಿ ಕೇವಲ ಒಂದು ಫ್ರಾಂಚೈಸಿಯನ್ನು ಪ್ರತಿನಿಧಿಸಿರುವ ಏಕೈಕ ಆಟಗಾರರಾಗಿದ್ದಾರೆ.

ವಿರಾಟ್ ಕೊಹ್ಲಿ ಈ 15 ವರ್ಷಗಳ ಬಹುಪಾಲು ಆರ್‌ಸಿಬಿ ತಂಡದ ನಾಯಕತ್ವವನ್ನು ವಹಿಸಿದ್ದರು ಮತ್ತು ಆರ್‌ಸಿಬಿ ತಂಡದ ಐಕಾನ್ ಆಟಗಾರನಾಗಿ ಪರಿಗಣಿಸಿದ್ದಾರೆ. ವಿರಾಟ್ ಕೊಹ್ಲಿಗಾಗಿ ಲಕ್ಷಾಂತರ ಅಭಿಮಾನಿಗಳು ಆರ್‌ಸಿಬಿ ತಂಡವನ್ನು ಬೆಂಬಲಿಸುವವರಿದ್ದಾರೆ.
2023ರ ಐಪಿಎಲ್ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಫ್ರಾಂಚೈಸಿ ಆರ್‌ಸಿಬಿ ತಂಡಕ್ಕಾಗಿ ಹಲವು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಹೀಗಾಗಿ ಇದು ಆರ್‌ಸಿಬಿ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಅತ್ಯಂತ ಕೆಟ್ಟ ಸುದ್ದಿಯಾಗಿದೆ.

ಇದಕ್ಕೆ ಕಾರಣವೆನೆಂದರೆ, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿಯೇ ನಡೆಯುವ 2023ರ ಏಕದಿನ ವಿಶ್ವಕಪ್ ತಂಡದ ಭಾಗವಾಗಲಿರುವ ಭಾರತೀಯ ಆಟಗಾರರಿಗೆ ಐಪಿಎಲ್‌ನಿಂದ ಹೆಚ್ಚಿನ ವಿಶ್ರಾಂತಿ ನೀಡಲಾಗುವುದು ಎಂದು ಹೇಳಿರುವ ಬಿಸಿಸಿಐ ಆದೇಶವೇ ಇದಕ್ಕೆ ಕಾರಣವಾಗಿದೆ.
ಐಪಿಎಲ್‌ನಿಂದ ವಿಶ್ರಾಂತಿ ಪಡೆಯುವವರಲ್ಲಿ ವಿರಾಟ್ ಕೊಹ್ಲಿ ಮಾತ್ರವಲ್ಲದೆ, ರೋಹಿತ್ ಶರ್ಮಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಸೇರಿದಂತೆ ಕೆಲವು ಪ್ರಮುಖ ಆಟಗಾರರು ಪಂದ್ಯಾವಳಿಯಲ್ಲಿ ಕೆಲವು ಪಂದ್ಯಗಳನ್ನು ತಪ್ಪಿಸಿಕೊಳ್ಳುವ ನಿರೀಕ್ಷೆಯಿದೆ.
MLC 2023: ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ ನ್ಯೂಯಾರ್ಕ್ ಫ್ರಾಂಚೈಸಿ ಖರೀದಿಸಿದ ಮುಂಬೈ ಇಂಡಿಯನ್ಸ್
ಸುಮಾರು 12 ವರ್ಷಗಳ ಬಳಿಕ ಭಾರತೀಯ ಕ್ರಿಕೆಟ್ ತಂಡವು ವಿಶ್ವಕಪ್ ಟ್ರೋಫಿಯನ್ನು ಜಯಿಸಬೇಕೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಯಸಿದ್ದು, ಇದಕ್ಕಾಗಿ ಆಟಗಾರರಿಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ.
ಹೀಗಾಗಿ ಆರ್‌ಸಿಬಿ ತಂಡಕ್ಕೆ ಕೆಲವು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಸ್ಥಾನವನ್ನು ತುಂಬುವ ಸಮರ್ಥ 3ನೇ ಕ್ರಮಾಂಕದ ಬ್ಯಾಟ್ಸ್‌ಮನ್‌ನನ್ನು ಈಗಲೇ ಹುಡುಕಿಕೊಳ್ಳಬೇಕಿದೆ.
ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 9000 ರನ್ ಗಳಿಸಿದ ಮೂವರು ಬ್ಯಾಟ್ಸ್‌ಮನ್‌ಗಳು
ಮಾರ್ಚ್ 26ರಂದು ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಮಾರ್ಚ್ 26ರಂದು ಸಂಜೆ 4 ಗಂಟೆಗೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸ್ ಇವೆಂಟ್ ಕರ್ಟನ್ ರೈಸರ್ ಕಾರ್ಯಕ್ರಮವನ್ನು ಆಯೋಜಿಸಲಿದೆ. ಇದರಲ್ಲಿ ಸೋನು ನಿಗಮ್ ಅವರಿಂದ ಸಂಗೀತ ಸಂಜೆ ಇರಲಿದೆ. ಆರ್‌ಸಿಬಿಯ ಅಧಿಕೃತ ವೆಬ್‌ಸೈಟ್‌ನಿಂದ ಟಿಕೆಟ್‌ಗಳನ್ನು ಖರೀದಿಸುವ ಮೂಲಕ ಅಭಿಮಾನಿಗಳು ಆರ್‌ಸಿಬಿಯ ಪೂರ್ಣ ತಂಡದ ಅಭ್ಯಾಸ ಪಂದ್ಯ ಮತ್ತು ಹಾಲ್ ಆಫ್ ಫೇಮ್ ಸಮಾರಂಭದಲ್ಲಿ ಹಾಜರಾಗಬಹುದು.
IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ:
ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮೈಕಲ್ ಬ್ರೇಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗೆ, ಆಕಾಶ್ ದೀಪ್, ಜೋಶ್ ಹ್ಯಾಝಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ.












Click it and Unblock the Notifications