GT vs SRH: ಗಿಲ್ ಶತಕ; ಸನ್‌ರೈಸರ್ಸ್‌ಗೆ ಸವಾಲಿನ ಗುರಿ ನೀಡಿದ ಗುಜರಾತ್

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 62ನೇ ಪಂದ್ಯ ಇಂದು ( ಮೇ 15 ) ನಡೆಯುತ್ತಿದೆ. ಈ ಪಂದ್ಯದಲ್ಲಿ ಟೇಬಲ್ ಟಾಪರ್ಸ್ ಗುಜರಾತ್ ಟೈಟನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.
ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡನ್ ಮಾರ್ಕ್ರಮ್ ಫೀಲ್ಡಿಂಗ್ ಆಯ್ದುಕೊಂಡು ತಮ್ಮ ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ಶುಭ್‌ಮನ್ ಗಿಲ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್‌ಗೆ 189 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
ಗುಜರಾತ್ ಟೈಟನ್ಸ್ ಪರ ಆರಂಭಿಕ ಆಟಗಾರರಾಗಿ ವೃದ್ಧಿಮಾನ್ ಸಹಾ ಹಾಗೂ ಶುಬ್‌ಮನ್ ಗಿಲ್ ಕಣಕ್ಕಿಳಿದರು. ವೃದ್ಧಿಮಾನ್ ಸಹಾ 3 ಎಸೆತಗಳನ್ನು ಎದುರಿಸಿ ಯಾವುದೆ ರನ್ ಗಳಿಸದೇ ಡಕ್ಔಟ್ ಆದರೆ, ಶುಬ್‌ಮನ್ ಗಿಲ್ 58 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 101 ರನ್ ಗಳಿಸಿದರು. ಈ ಮೂಲಕ ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡಕ್ಕೆ ಆಸರೆಯಾದರು.
ಇನ್ನುಳಿದಂತೆ ಸಾಯಿ ಸುದರ್ಶನ್ 36 ಎಸೆತಗಳಲ್ಲಿ ಎಸೆತಗಳಲ್ಲಿ 47 ರನ್, ನಾಯಕ ಹಾರ್ದಿಕ್ ಪಾಂಡ್ಯ 8 ರನ್, ಡೇವಿಡ್ ಮಿಲ್ಲರ್ 7, ರಾಹುಲ್ ತೆವಾಟಿಯಾ 3 ರನ್, ರಶೀದ್ ಖಾನ್ ಡಕ್ಔಟ್, ನೂರ್ ಅಹ್ಮದ್ ಡಕ್ ಔಟ್, ಮೊಹಮ್ಮದ್ ಶಮಿ ಡಕ್ಔಟ್, ಮೋಹಿತ್ ಶರ್ಮಾ ಡಕ್ಔಟ್ ಹಾಗೂ ದಾಸನ್ ಶನಕ 7 ಎಸೆತಗಳಲ್ಲಿ 9 ರನ್ ಗಳಿಸಿದರು.
ಸನ್ ರೈಸರ್ಸ್ ಹೈದರಾಬಾದ್ ಭುವನೇಶ್ವರ್ ಕುಮಾರ್ 5 ವಿಕೆಟ್, ಮಾರ್ಕೋ ಯಾನ್ಸೆನ್, ಫಜಲ್‌ಹಕ್ ಫರೂಕಿ ಹಾಗೂ ಟಿ ನಟರಾಜನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.
ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಲ್ಯಾವೆಂಡರ್ ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದು, ಕ್ಯಾನ್ಸರ್ ರೋಗದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಲಿದೆ.
ಆಡುವ ಬಳಗಗಳು:
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಸನ್ವಿರ್ ಸಿಂಗ್, ಮಯಾಂಕ್ ಮಾರ್ಕಂಡೆ, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಟಿ ನಟರಾಜನ್
ಗುಜರಾತ್ ಟೈಟನ್ಸ್ ಆಡುವ ಬಳಗ: ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ದಾಸುನ್ ಶನಕ, ರಾಹುಲ್ ತೆವಾಟಿಯಾ, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್












Click it and Unblock the Notifications