IPL 2023: ಮೊದಲನೇ ಪಂದ್ಯಕ್ಕೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಗೈರು!
2023 ಐಪಿಎಲ್ ಮಿನಿ ಹರಾಜಿನಲ್ಲಿ ಪ್ರಮುಖ ಆಟಗಾರರನ್ನು ಖರೀದಿ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ ಬಲಿಷ್ಠ ತಂಡವನ್ನು ಕಟ್ಟುವಲ್ಲಿ ಯಶಸ್ವಿಯಾಗಿದೆ. ತಂಡದ ನಾಯಕನಾಗಿ ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ ಆಯ್ಕೆಯಾಗಿದ್ದಾರೆ. ಮೊದಲನೇ ಪಂದ್ಯವನ್ನು ಗೆಲ್ಲುವ ಕನಸು ಕಾಣುತ್ತಿದ್ದ ತಂಡಕ್ಕೆ ಆರಂಭದಲ್ಲೇ ಹಿನ್ನಡೆಯಾಗಿದೆ. ನಾಯಕ ಮಾರ್ಕ್ರಾಮ್ ಮೊದಲನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ತನ್ನ ಮೊದಲನೆಯ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ವಿರುದ್ದ ಆಡಲಿದೆ. ಏಪ್ರಿಲ್ 2 ರಂದು ಈ ಪಂದ್ಯ ನಡೆಯಲಿದೆ. ಐಡೆನ್ ಮಾರ್ಕ್ರಾಮ್ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ತಂಡಕ್ಕೆ ಆಯ್ಕೆಯಾಗಿದ್ದು, ಈ ಸರಣಿ ಮುಗಿದ ಬಳಿಕ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮಾರ್ಚ್ 31 ಮತ್ತು ಏಪ್ರಿಲ್ 2 ರಂದು ಎರಡು ಏಕದಿನ ಪಂದ್ಯಗಳು ನಡೆಯಲಿವೆ.

ಐಡೆನ್ ಮಾರ್ಕ್ರಾಮ್ ಮಾತ್ರವಲ್ಲದೆ ಹೆನ್ರಿಚ್ ಕ್ಲಾಸೆನ್ ಮತ್ತು ಮಾರ್ಕೊ ಜಾನ್ಸನ್ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮಾರ್ಕ್ರಾಮ್ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯಕ್ಕೆ ನಾಯಕ ಯಾರು ಎನ್ನುವ ಕುತೂಹಲ ಎದುರಾಗಿದೆ. ಮೂಲಗಳ ಪ್ರಕಾರ ಮೊದಲ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಅಥವಾ ಭುವನೇಶ್ವರ್ ಕುಮಾರ್ ನಾಯಕರಾಗುವ ಸಾಧ್ಯತೆ ಇದೆ.
ICC Ranking: ರಶೀದ್ ಖಾನ್ ಈಗ ಟಿ20 ನಂಬರ್ 1 ಬೌಲರ್: 7ನೇ ಸ್ಥಾನದಲ್ಲೇ ಉಳಿದ ಕೊಹ್ಲಿ
ಸ್ಫೋಟಕ ಆಟಗಾರರು ತಂಡಕ್ಕೆ ಸೇರ್ಪಡೆ
ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸನ್ ರೈಸರ್ಸ್ ಹೈದರಾಬಾದ್ ಪ್ಲೇ ಆಫ್ ತಲುಪಲು ಕೂಡ ವಿಫಲವಾಗಿತ್ತು, ಅದಕ್ಕಾಗಿಯೇ ನಾಯಕ ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್ ಸೇರಿದಂತೆ ಹಲವು ಆಟಗಾರರನ್ನು ಮಿನಿ ಹರಾಜಿಗೆ ಮುನ್ನ ಬಿಡುಗಡೆ ಮಾಡಿತ್ತು, ಮಿನಿ ಹರಾಜಿನಲ್ಲಿ ಪ್ರಮುಖ ಆಟಗಾರರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಅಕಿಲ್ ಹೊಸೈನ್, ಗ್ಲೆನ್ ಫಿಲಿಪ್ಸ್ ಸೇರಿದಂತೆ ಪ್ರಮುಖ ಆಟಗಾರರು ತಂಡಕ್ಕೆ ಸೇರ್ಪಡೆಯಾಗಿದ್ದು, ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಶಕ್ತಿಯನ್ನು ಹೆಚ್ಚಿಸಿಕೊಂಡಿದೆ. ತಂಡದ ಬೌಲಿಂಗ್ ವಿಭಾಗ ಶಕ್ತಿಯುತವಾಗಿದೆ. ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಫಜಲ್ಹಕ್ ಫಾಕೂರ್, ಟಿ ನಟರಾಜನ್ ರಂತಹ ಆಟಗಾರರು ಇದ್ದಾರೆ.
ರಾಜಸ್ಥಾನ ರಾಯಲ್ಸ್ ವಿರುದ್ಧ ಮೊದಲ ಪಂದ್ಯ
ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ. ಏಪ್ರಿಲ್ 2ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಕಳೆದ ಬಾರಿಯ ರನ್ನರ್ ಅಪ್ ಆಗಿದ್ದ ರಾಜಸ್ಥಾನ ರಾಯಲ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರಿ ಪೈಪೋಟಿ ನೀಡುವ ಸಾಧ್ಯತೆ ಇದೆ. ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ರವಿಚಂದ್ರನ್ ಅಶ್ವಿನ್‌ರಂತಹ ಅನುಭವಿ ಆಟಗಾರರು ರಾಜಸ್ಥಾನ ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ: ಅಬ್ದುಲ್ ಸಮದ್, ಐಡೆನ್ ಮಾರ್ಕ್ರಾಮ್ (ನಾಯಕ), ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಆದಿಲ್ ರಶೀದ್, ಮಯಾಂಕ್ ಮಾರ್ಕಂಡೆ, ವಿವ್ರಾಂತ್ ಶರ್ಮಾ, ಸಮರ್ಥ್ ವ್ಯಾಸ್, ಸನ್ವಿರ್ ಸಿಂಗ್, ಉಪೇಂದ್ರ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅನ್ಮೋಲ್‌ಪ್ರೀತ್ ಸಿಂಗ್, ಅಕೇಲ್ ಹೊಸೈನ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ.












Click it and Unblock the Notifications