IPL 2023: ಸೂರ್ಯಕುಮಾರ್ ಯಾದವ್‌ಗೆ ಐಪಿಎಲ್ ಪಂದ್ಯಗಳತ್ತ ಗಮನ ಹರಿಸಿ ಎಂದ ಮಾಜಿ ಕ್ರಿಕೆಟಿಗ
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಫಲವಾದ ಸೂರ್ಯಕುಮಾರ್ ಯಾದವ್‌ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರಮುಖ ಸಲಹೆ ನೀಡಿದ್ದಾರೆ. ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದನ್ನು ಮರೆತು ಐಪಿಎಲ್ ಪಂದ್ಯಾವಳಿಯತ್ತ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಕೂಡ ಸೂರ್ಯಕುಮಾರ್ ಯಾದವ್ ಆಡಿದ ಮೊದಲನೇ ಎಸೆತದಲ್ಲೇ ಔಟಾಗುವ ಮೂಲಕ ಗೋಲ್ಡನ್ ಡಕ್ ಆಗಿದ್ದರು. ಟಿ20 ಮಾದರಿಯಲ್ಲಿ ವಿಶ್ವದ ನಂಬರ್ 1 ಬ್ಯಾಟರ್ ಆಗಿರುವ ಅವರು, ಏಕದಿನ ಮಾದರಿಯಲ್ಲಿ ರನ್ ಗಳಿಸುವಲ್ಲಿ ಪರದಾಡಿದ್ದಾರೆ.

ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ ಸತತವಾಗಿ ಮೂರು ಪಂದ್ಯಗಳಲ್ಲಿ ಡಕ್‌ಔಟ್ ಆಗಿದ್ದು ಟೀಕೆಗೆ ಗುರಿಯಾಗಿದ್ದಾರೆ. ಶ್ರೇಯಸ್ ಅಯ್ಯರ್ ಬದಲಾಗಿ ಆಡುವ ಬಳಗದಲ್ಲಿ ಸ್ಥಾನ ಪಡೆದ ಸೂರ್ಯಕುಮಾರ್ ಶೂನ್ಯಕ್ಕೆ ಔಟಾಗಿದ್ದು, ಭಾರತ 2-1 ಅಂತರದಲ್ಲಿ ಏಕದಿನ ಸರಣಿಯನ್ನು ಸೋಲುವಲ್ಲಿ ಪ್ರಮುಖ ಕಾರಣಗಳಲ್ಲೊಂದಾಗಿದೆ.
ಸೂರ್ಯಕುಮಾರ್ ಯಾದವ್ ಭಾರತ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರು. ಟಿ20 ಮಾದರಿಯಲ್ಲಿ ಅವರಾಗಲೇ ತಮ್ಮ ಸಾಮರ್ಥ್ಯವೇನು ಎನ್ನುವುದನ್ನು ಪ್ರದರ್ಶಿಸಿದ್ದಾರೆ. ಅದೇ ಆಟವನ್ನು ಏಕದಿನ ಕ್ರಿಕೆಟ್‌ನಲ್ಲಿ ತಂದರೆ ಭಾರತದ ಗೆಲುವಿಗೆ ಸಹಕಾರಿಯಾಗಲಿದೆ. ಆದರೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವುದು ತಂಡದ ತಲೆನೋವಿಗೆ ಕಾರಣವಾಗಿದೆ.

ಧೈರ್ಯ ತುಂಬಿದ ಸುನಿಲ್ ಗವಾಸ್ಕರ್
ನಂಬರ್ 1 ಟಿ20 ಬ್ಯಾಟರ್ ಗೆ ಮಾಜಿ ಕ್ರಿಕೆಟಿಗ, ಸುನಿಲ್ ಗವಾಸ್ಕರ್ ಪ್ರಮುಖ ಸಲಹೆ ನೀಡಿದ್ದಾರೆ. ಮೂರು ಪಂದ್ಯಗಳಲ್ಲಿ ಡಕೌಟ್ ಆದ ಬಗ್ಗೆ ಸೂರ್ಯಕುಮಾರ್ ಯಾದವ್ ತಮ್ಮ ಆತ್ಮವಿಶ್ವಾಸವನ್ನು ಕಳೆದುಕೊಳ್ಳುವ ಅಗತ್ಯವಿಲ್ಲ, ಮುಂಬರುವ ಐಪಿಎಲ್ ಪಂದ್ಯಾವಳಿಯತ್ತ ಗಮನ ಹರಿಸುವಂತೆ ಸಲಹೆ ನೀಡಿದ್ದಾರೆ.
ಇತಿಹಾಸದ ಈ ದಿನ: 20 ವರ್ಷಗಳ ಹಿಂದೆ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸೋಲು
"ಅತ್ಯುತ್ತಮ ಆಟಗಾರರಿಗೂ ಕೂಡ ಈ ರೀತಿಯ ಪರಿಸ್ಥಿತಿಯ ಎದುರಾಗುತ್ತದೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಈಗ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಮರೆತು, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಉತ್ತಮ ಪ್ರದರ್ಶನ ನೀಡುವ ಬಗ್ಗೆ ಗಮನ ಹರಿಸಬೇಕು, ಐಪಿಎಲ್‌ನಲ್ಲಿ ರನ್ ಗಳಿಸಿದರೆ, ಅವರು ಮುಂದಿನ ಏಕದಿನ ಪಂದ್ಯಗಳಿಗಾಗಿ ಆತ್ಮವಿಶ್ವಾಸವನ್ನು ಗಳಿಸಿಕೊಳ್ಳಬಹುದು" ಎಂದು ಹೇಳಿದರು.

ಸೂರ್ಯಕುಮಾರ್ ಯಾದವ್ ಏನು ತಪ್ಪು ಮಾಡಿದ್ದಾರೆ ಎಂದು ಹೇಳುವುದು ಕಷ್ಟ, ಮೊದಲ ಎರಡು ಪಂದ್ಯಗಳಲ್ಲಿ ಮಿಚೆಲ್ ಸ್ಟಾರ್ಕ್ ಅವರ ಮೊದಲ ಎಸೆತದಲ್ಲೇ ಔಟಾಗಿದ್ದರು. ಮೂರನೇ ಏಕದಿನ ಪಂದ್ಯದಲ್ಲಿ ಅವರು ಆಡುವಾಗ ಸ್ವಲ್ಪ ಆತಂಕಕ್ಕೆ ಒಳಗಾಗಿದ್ದರು. ಕಟ್‌ಶಾಟ್ ಆಡಲು ಹೋಗಿ ಸೂರ್ಯ ಬೌಲ್ಡ್ ಆದರು ಎಂದು ಗವಾಸ್ಕರ್ ಹೇಳಿದರು.
ಏಕದಿನ ಮಾದರಿಯಲ್ಲಿ ಸೂರ್ಯಕುಮಾರ್ ವಿಫಲ
ಸೂರ್ಯಕುಮಾರ್ ಯಾದವ್ ಇದುವರೆಗೂ ಆಡಿರುವ 23 ಏಕದಿನ ಪಂದ್ಯಗಳಿಂದ 24.06 ಸರಾಸರಿಯಲ್ಲಿ ಕೇವಲ 433 ರನ್ ಗಳಿಸಿದ್ದಾರೆ. ಆದರೆ ಟಿ20 ಮಾದರಿಯಲ್ಲಿ ಅವರ ಸರಾಸರಿ 46.53 ಇದೆ. ಏಕದಿನ ಮಾದರಿಯಲ್ಲಿ ಅವರು ಇದುವರಗೂ ಕೇವಲ 2 ಅರ್ಧಶತಕಗಳನ್ನು ಮಾತ್ರ ಗಳಿಸಿದ್ದರೆ, ಶತಕ ಗಳಿಸಲು ವಿಫಲವಾಗಿದ್ದಾರೆ. ಐಪಿಎಲ್‌ನಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಆಧಾರಸ್ಥಂಭವಾಗಿದ್ದಾರೆ. 123 ಐಪಿಎಲ್ ಪಂದ್ಯಗಳಲ್ಲಿ 30.39 ಸರಾಸರಿಯಲ್ಲಿ 2644 ರನ್ ಗಳಿಸಿದ್ದಾರೆ. ಇದರಲ್ಲಿ 16 ಅರ್ಧಶತಕಗಳು ಸೇರಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications