IPL 2023: ಕೊಹ್ಲಿ ಮೇಲೆ ಆರ್‌ಸಿಬಿ ಹೆಚ್ಚು ಅವಲಂಬಿತ: ಇತರ ಆಟಗಾರರ ಮೇಲೆ ಗವಾಸ್ಕರ್ ಚಾಟಿ

ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅದ್ಭುತ ಆರಂಭವನ್ನು ಪಡೆದುಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ತಂಡದ ಬೃಹತ್ ಗೆಲುವಿನಲ್ಲಿ ವಿರಾಟ್ ಕೊಹ್ಲಿ ದೊಡ್ಡ ಪಾತ್ರವಹಿಸಿದರು. ಆದರೆ ಅದಾದ ಬಳಿಕ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಉತ್ತಮ ಆರಂಭವನ್ನು ಪಡೆದರು ಕುಡ ಅದನ್ನು ಮುಂದುವರಿಸಲು ವಿಫಲವಾದರು. ಬಳಿಕ ಆರ್‌ಸಿಬಿ ಆಘಾತಕಾರಿಯಾಗಿ ಕುಸಿತ ಕಂಡು ಪಂದ್ಯವನ್ನು ಸೋಲುವಂತಾಗಿತ್ತು.

ಇದೀಗ ಆರ್‌ಸಿಬಿ ಮೂರನೇ ಪಂದ್ಯಕ್ಕಾಗಿ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಸುನಿಲ್ ಗವಾಸ್ಕರ್ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಆರ್‌ಸಿಬಿ ತಂಡದ ಇತರ ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಮೇಲಿನ ಹೊರೆಯನ್ನು ಕಡಿಮೆ ಮಾಡಿ ತಾವು ಕೂಡ ತಂಡದ ಪರವಾಗಿ ಉತ್ತಮ ಪ್ರದರ್ಶನ ನೀಡಬೇಕಿದೆ ಎಂದಿದ್ದಾರೆ ಸುನಿಲ್ ಗವಾಸ್ಕರ್.

IPL 2023: Sunil Gavaskar said RCB team banking on Virat Kohli

ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕ್ರಿಕೆಟ್ ವಿಶ್ಲೇಷಣೆಯ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿಯ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಈ ಸಂದರ್ಬದಲ್ಲಿ ಈ ಭಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ ಹೆಚ್ಚಾಗಿ ವಿರಾಟ್ ಕೊಹ್ಲಿ ಮೇಲೆ ಅವಲಂಬಿತವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. "ಈ ವರ್ಷ ಆರ್‌ಸಿಬಿ ವಿರಾಟ್ ಕೊಹ್ಲಿ ಮೇಲೆ ಹೆಚ್ಚು ಅವಲಂಬಿತವಾಗಿದೆ. ವಿರಾಟ್ ಕೊಹ್ಲಿ ಎಲ್ಲಾ ಪಂದ್ಯಗಳಲ್ಲಿ ಚೆನ್ನಾಗಿ ಆಡಿದರೆ ತಂಡದ ಗೆಲುವಿನ ಅವಕಾಶ ಹೆಚ್ಚುತ್ತದೆ" ಎಂದು ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ.

"ವಿರಾಟ್ ಕೊಹ್ಲಿ ಅತಿ ದೊಡ್ಡ ಸೂಪರ್ ಸ್ಟಾರ್. ಆರ್‌ಸಿಬಿ ಅಭಿಮಾನಿಗಳು ಮಾತ್ರವಲ್ಲ, ಎಲ್ಲಾ ತಂಡಗಳ ಅಭಿಮಾನಿಗಳು ಕೂಡ ಆತನ ಬ್ಯಾಟ್‌ನಿಂದ ರನ್ ಬರುವುದನ್ನು ನಿರೀಕ್ಷಿಸುತ್ತಾರೆ. ಆದರೆ ತಂಡದ ಇತರ ಆಟಗಾರರು ಕೂಡ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಬೇಕಿದ್ದು ಕೊಹ್ಲಿ ಮೇಲಿನ ಹೊರೆಯನ್ನು ತಗ್ಗಿಸಬೇಕು" ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಸುನಿಲ್ ಗವಾಸ್ಕರ್.

Rashid Khan: IPL 2023ರ ಮೊದಲ ಹ್ಯಾಟ್ರಿಕ್ ವಿಕೆಟ್ ಪಡೆದ ರಶೀದ್ ಖಾನ್

ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 800 ಬೌಂಡರಿ ಗಳಿಸಿದ ಸಾಧನೆ ಮಾಡಿದರು. ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೂರನೇ ಆಟಗಾರ ಎನಿಸಿಕೊಂಡಿದ್ದು ಎರಡನೇ ಭಾರತೀಯ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಶಿಖರ್ ಧವನ್ ಈ ಪಟ್ಟಿಯಲ್ಲಿರುವ ಮತ್ತೋರ್ವ ಆಟಗಾರ. ಇನ್ನು ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಮೊದಲ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಆರ್‌ಸಿಬಿ ಪರವಾಗಿ 2008ರಿಂದಲೂ ಆಡುತ್ತಿದ್ದಾರೆ. 8 ಆವೃತ್ತಿಗಳಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಿರುವ ವಿರಾಟ್ ಕೊಹ್ಲಿ 50 ಬಾರಿ 50ಕ್ಕೂ ಅಧಿಕ ರನ್‌ಗಳಿಸಿದ ಸಾಧನೆ ಮಾಡಿದ್ದಾರೆ. ವಿಶ್ವದ ಅತಿ ದೊಡ್ಡ ಟಿ20 ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ.

ಇನ್ನು ಆರ್‌ಸಿಬಿ ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಎರಡನೇ ಪಂದ್ಯದಲ್ಲಿ ಆರ್‌ಸಿಬಿ ಸೋಲು ಅನುಭವಿಸಿದ ಕಾರಣ ಈ ಪಂದ್ಯದಲ್ಲಿ ಗೆದ್ದು ಮತ್ತೆ ಗೆಲುವಿನ ಲಯಕ್ಕೆ ಮರಳುವ ವಿಶ್ವಾಶದಲ್ಲಿದೆ. ಅತ್ತ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದು ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯ ಅಭಿಮಾನಿಗಳಲ್ಲಿ ಕುತೂಹಲಹೆಚ್ಚಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್

ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್, ರೀಸ್ ಟೋಪ್ಲಿ

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಅವೇಶ್ ಖಾನ್, ಆಯುಷ್ ಬಡೋನಿ, ಕ್ವಿಂಟನ್ ಡಿ ಕಾಕ್, ಕೆ ಗೌತಮ್, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೈಲ್ ಮೇಯರ್ಸ್, ಅಮಿತ್ ಮಿಶ್ರಾ, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಡೇನಿಯಲ್ ಸಾಮ್ಸ್, ಕರಣ್ ಶರ್ಮಾ, ರೊಮಾರಿಯೋ ಶೆಫರ್ಡ್, ಮಾರ್ಕಸ್ ಸ್ಟೊಯಿನಿಸ್, ಸ್ವಪ್ನಿಲ್ ಸಿಂಗ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಮಾರ್ಕ್ ವುಡ್, ಮಯಾಂಕ್ ಯಾದವ್, ಯಶ್ ಠಾಕೂರ್, ಯುದ್ವೀರ್ ಸಿಂಗ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+