IPL 2023: ಡೆಲ್ಲಿ vs ಹೈದರಾಬಾದ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದ ತಂಡ ಯಾವುದು?

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 34ನೇ ಪಂದ್ಯ ಇಂದು ( ಏಪ್ರಿಲ್ 24 ) ನಡೆಯಲಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ರಾತ್ರಿ‌‌ 7.30ಕ್ಕೆ ಶುರುವಾಗಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.

IPL 2023: Sunrisers Hyderabad vs Delhi Capitals head to head record details

ಎರಡೂ ತಂಡಗಳಿಗೂ ಸಹ ಈ ಪಂದ್ಯ ಟೂರ್ನಿಯಲ್ಲಿ ತಾವು ಆಡಲಿರುವ ಏಳನೇ ಪಂದ್ಯವಾಗಿದ್ದು, ಸದ್ಯಕ್ಕೆ ಟೂರ್ನಿಯಲ್ಲಿ ಅತಿ ಕಳಪೆ ತಂಡಗಳು ಎನಿಸಿಕೊಂಡಿರುವ ತಂಡಗಳ ನಡುವಿನ ಸೆಣಸಾಟ ಎನ್ನಬಹುದಾಗಿದೆ.

ಹೌದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆ ತಂಡಗಳು ಎನಿಸಿಕೊಂಡಿವೆ.

ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ 2 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿದ್ದು, 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.

ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಹ ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳನ್ನಾಡಿದ್ದು, ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು ಕೇವಲ 2 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಹೀಗೆ ಈ ಬಾರಿಯ ಟೂರ್ನಿಯಲ್ಲಿ ಗೆಲುವಿಗಿಂತ ಸೋಲನ್ನೇ ಹೆಚ್ಚು ಕಂಡಿರುವ ಈ ತಂಡಗಳು ಮುಖಾಮುಖಿಯಾಗುತ್ತಿದ್ದು, ಕಳಪೆ ತಂಡಗಳ ಕಾಳಗದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಏರ್ಪಟ್ಟಿವೆ. ಇನ್ನು ಎರಡೂ ತಂಡಗಳ ನಡುವೆ ನಡೆಯಲಿರುವ 22ನೇ ಐಪಿಎಲ್ ಮುಖಾಮುಖಿ ಪಂದ್ಯ ಇದಾಗಲಿದ್ದು ಇಲ್ಲಿಯವರೆಗೂ ನಡೆದಿರುವ 21 ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಯಾವ ತಂಡ ಎಷ್ಟು ಪಂದ್ಯಗಳನ್ನು ಸೋತಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ನಡೆದಿರು 21 ಪಂದ್ಯಗಳ ಪೈಕಿ ಸನ್ ರೈಸರ್ಸ್ ಹೈದರಾಬಾದ್ 11 ಪಂದ್ಯಗಳಲ್ಲಿ ಗೆದ್ದಿದ್ದು, ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಗೆದ್ದಿದೆ‌. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ತುಸು ಮುನ್ನಡೆ ಕಾಯ್ದುಕೊಂಡಿದೆ‌.

ಇನ್ನು 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 24 ರನ್ ಅಂತರದಿಂದ ಜಯ ಸಾಧಿಸಿತ್ತು‌.

ಅಲ್ಲದೇ 2021 ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು 2 ಪಂದ್ಯಗಳು ಜರುಗಿದ್ದವು. ಈ ಪೈಕಿ ಮೊದಲ ಪಂದ್ಯದಲ್ಲಿ ಸೂಪರ್ ಓವರ್ ನಡೆದಿತ್ತು. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜಯ ಕಂಡಿತ್ತು. ಎರಡನೇ ಪಂದ್ಯದಲ್ಲಿ ಸಹ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿತ್ತು.

ಎರಡೂ ತಂಡಗಳು ಮುಖಾಮುಖಿಯಾದಾಗ ಸನ್ ರೈಸರ್ಸ್ ಹೈದರಾಬಾದ್ ಗಳಿಸಿರುವ ಗರಿಷ್ಠ ರನ್ 219 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಗಳಿಸಿರುವ ಗರಿಷ್ಠ ರನ್ 207. ಸನ್ ರೈಸರ್ಸ್ ಹೈದರಾಬಾದ್ ಗಳಿಸಿರುವ ಕನಿಷ್ಠ ರನ್ 116 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಗಳಿಸಿರುವ ಕನಿಷ್ಠ ರನ್ 80.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+