IPL 2023: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮಹತ್ವದ ಪಂದ್ಯಕ್ಕೆ ಸಜ್ಜಾದ RCB: ಪಂದ್ಯ ಮಾಹಿತಿ
ಇಂಡಿಯನ್ ಪ್ರೀಮಿಯರ್ ಲೀಗ್‌ನ ಪಂದ್ಯಗಳು ಕೊನೆಯ ಘಟ್ಟಕ್ಕೆ ಬಂದಿದ್ದು ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣೆಸಾಟ ನಡೆಸಲಿದೆ. ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು ಪ್ಲೇಆಫ್ ಹಂತಕ್ಕೇರುವ ಸ್ಪರ್ಧೆಯಲ್ಲಿ ಮುಂದುವರಿಯಲು ಅವಕಾಶ ನೀಡಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್‌ನಲ್ಲಿ ಈವರೆಗೆ 12 ಪಂದ್ಯಗಳನ್ನು ಆಡಿದ್ದು 6 ಗೆಲುವು ಹಾಗೂ 6 ಸೋಲು ಕಂಡಿದೆ. ಹೀಗಾಗಿ ಆರ್‌ಸಿಬಿ 12 ಅಂಕಗಳನ್ನು ಹೊಂದಿದ್ದು ಪ್ರಸ್ತುತ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗಾಗಿ ಅಗ್ರನಾಲ್ಕರೊಳಗೆ ಸ್ಥಾನ ಖಚಿತಪಡಿಸಿಕೊಳ್ಳಬೇಕಾದರೆ ಆರ್‌ಸಿಬಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು ಗೆಲ್ಲಲೇಬೇಕಿದೆ.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಆವೃತ್ತಿಯಲ್ಲಿ ಈಗಾಗಲೇ ಪ್ಲೇಆಫ್ ಸ್ಪರ್ಧೆಯಿಂದ ಹೊರಬಿದ್ದಿದೆ. ಈ ಹಂತದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋತರೂ ಗೆದ್ದರೂ ಕಳೆದುಕೊಳ್ಳುವಂತದ್ದೇನೂ ಇಲ್ಲ. ಹೀಗಾಗಿ ಯಾವುದೇ ಒತ್ತವಿಲ್ಲದೆ ಐಡೆನ್ ಮಾರ್ಕ್ರಮ್ ತಂಡ ಆಡಲಿದ್ದು ಆರ್‌ಸಿಬಿ ತಂಡಕ್ಕೆ ತನ್ನ ಮೇಲಿರುವ ಒತ್ತಡವೇ ಅಪಾಯ ಉಂಟುಮಾಡುವ ಸಾಧ್ಯತೆಯಿದೆ.
IPL 2023: ಪ್ಲೇಆಫ್‌ಗೆ ನಾವು ಪ್ರವೇಶ ಪಡೆಯುತ್ತೇವೆ: ಲಕ್ನೋ ವಿರುದ್ಧ ಸೋತರೂ MI ನಾಯಕ ರೋಹಿತ್ ವಿಶ್ವಾಸ
ಪಂದ್ಯದ ವಿವರ ಹಾಗೂ ನೇರಪ್ರಸಾರದ ಮಾಹಿತಿ
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣ ಮೇ 18ರಂದು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ಧದ ನಿರ್ಣಾಯಕ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಯ ವೇಳೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಯಾರಿಗೆ ಮೇಲುಗೈ? ಅಂಕಿಅಂಶಗಳು ಹೇಳುವುದೇನು?
ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಆರ್‌ಸಿಬಿ ತಂಡಗಳು ಈವರೆಗೆ ಒಟ್ಟು 22 ಬಾರಿ ಸೆಣೆಸಾಟ ನಡೆಸಿದೆ. ಈ ಪೈಕಿ ಸನ್‌ರೈಸರ್ಸ್ ಹೈದರಾಬಾದ್ ತಂಡ 12 ಬಾರಿ ಗೆದ್ದಿದ್ದು ಈ ಮುಖಾಮುಖಿಯಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿದ್ದರೆ ಆರ್‌ಸಿಬಿ ಗೆದ್ದಿರುವುದು 9 ಪಂದ್ಯಗಳಲ್ಲಿ ಮಾತ್ರ. ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ. ಕಳೆದ ಬಾರಿಯ ಆವೃತ್ತಿಯಲ್ಲಿ ಎರಡು ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳಲ್ಲಿ ವಿಜಯ ಸಾಧಿಸಿತ್ತು.
ಎರಡು ತಂಡಗಳ ಸಂಭಾವ್ಯ ಆಡುವ ಬಳಗ ಹೀಗಿದೆ
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ XI: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್ ಮತ್ತು ಉಮ್ರಾನ್ ಮಲಿಕ್.
ಆರ್‌ಸಿಬಿ ಸಂಭಾವ್ಯ XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ ಮತ್ತು ಮೊಹಮ್ಮದ್ ಸಿರಾಜ್.












Click it and Unblock the Notifications