IPL 2023: ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿಗೆ ಕೆಲವು ಐಪಿಎಲ್ ಪಂದ್ಯಗಳಿಂದ ವಿಶ್ರಾಂತಿ; ಕಾರಣವೇನು?
2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್‌ಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅದ್ಧೂರಿ ಚಾಲನೆ ಸಿಗಲಿದೆ.
ಭಾರತೀಯ ಹಾಗೂ ವಿಶ್ವ ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷಿತ 2023ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇದೇ ವೇಳೆ ಐಪಿಎಲ್ ಆಡುತ್ತಿರುವ ಪ್ರಮುಖ ಆಟಗಾರರ ಮೇಲೆ ಬಿಸಿಸಿಐ ನಿಗಾ ವಹಿಸಲಿದೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು 2023ರ ಏಕದಿನ ವಿಶ್ವಕಪ್‌ಗೆ ಮೊದಲು ಭಾರತೀಯ ಆಟಗಾರರ ಫಿಟ್‌ನೆಸ್ ಖಚಿತಪಡಿಸಿಕೊಳ್ಳಲು ತನ್ನ ಶಕ್ತಿ ಮೀರಿ ಪ್ರಯತ್ನ ಮಾಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ.
ಈಗಾಗಲೇ ಪ್ರಸಿದ್ಧ್ ಕೃಷ್ಣ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಗಾಯಗಳಿಂದ ಬಳಲುತ್ತಿದ್ದಾರೆ. ಇದು ಭಾರತ ರಾಷ್ಟ್ರೀಯ ತಂಡಕ್ಕೆ ಐಸಿಸಿ ಟ್ರೋಫಿ ಪಂದ್ಯಾವಳಿಯಲ್ಲಿ ಬಹು ದೊಡ್ಡ ಆಘಾತ ನೀಡುತ್ತದೆ.
ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರು ಗಾಯಗೊಂಡಿರುವುದು ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರನ್ನು ಇದು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಪ್ರಮುಖ ಬೌಲರ್‌ಗಳನ್ನಾಗಿಸುತ್ತದೆ.

ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಮಾತ್ರವಲ್ಲದೆ, ಭಾರತ ತಂಡದ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ ಅವರಂತಹ ಸ್ಟಾರ್ ಆಟಗಾರರು 2023ರ ಐಪಿಎಲ್‌ನ ಕೆಲವು ಪಂದ್ಯಗಳಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ಹೀಗಾಗಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಟ್ರೋಫಿ ಗೆಲ್ಲುವ ಅಭಿಯಾನಕ್ಕೆ ಅಡ್ಡಿಯಾಗುವ ಯಾವುದೇ ಗಾಯಾಳುಗಳನ್ನು ತಪ್ಪಿಸಲು ವಿಶ್ವಕಪ್ ತಂಡದಲ್ಲಿರುವ ಪ್ರಮುಖ ಆಟಗಾರರು ಕೆಲವು ಐಪಿಎಲ್ ಪಂದ್ಯಗಳಿಂದ ಪ್ರಶಸ್ತಿ ಪಡೆಯಬೇಕೆಂದು ಬಿಸಿಸಿಐ ಆದೇಶ ಹೊರಡಿಸಿದೆ.
ಭಾರತ ರಾಷ್ಟ್ರೀಯ ತಂಡದಲ್ಲಿ ಖಾಯಂ ಸ್ಥಾನ ಪಡೆದಿರುವ ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಇಬ್ಬರಿಗೂ ಐಪಿಎಲ್‌ನಲ್ಲಿ ಕೆಲವು ಪಂದ್ಯಗಳಿಂದ ವಿಶ್ರಾಂತಿ ಪಡೆಯಲಿದ್ದಾರೆ ಮತ್ತು ಇದು ಐಪಿಎಲ್ ಫ್ರಾಂಚೈಸಿಗಳಿಗೆ ದುಬಾರಿಯಾಗಲಿದೆ.

ಮೊಹಮ್ಮದ್ ಸಿರಾಜ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪ್ರಮುಖ ಬೌಲರ್ ಆಗಿದ್ದಾರೆ. ಏಕೆಂದರೆ, ಈಗಾಗಲೇ ಆರ್‌ಸಿಬಿ ತಂಡದಲ್ಲಿ ಜೋಶ್ ಹ್ಯಾಝಲ್‌ವುಡ್ ಆಡುವುದು ಅನುಮಾನವೆನಿಸಿದೆ.
ಇನ್ನು ಮೊಹಮ್ಮದ್ ಶಮಿ ಅವರು ಹಾಲಿ ಐಪಿಎಲ್ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ಆಧಾರಸ್ತಂಭಗಳಲ್ಲಿ ಒಬ್ಬರಾಗಿದ್ದಾರೆ.
2023ರಲ್ಲಿ ತಮ್ಮ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ಎದುರು ನೋಡುತ್ತಿರುವ ಮೂರು ಬಾರಿಯ ಫೈನಲಿಸ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಎಲ್ಲ ಸಿದ್ಧತೆ ಆರಂಭಿಸಿದೆ. ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.
ರವೀಂದ್ರ ಜಡೇಜಾಗೂ ವಿಶ್ರಾಂತಿ ಸಾಧ್ಯತೆ
ಮುಂಬರುವ 2023ರ ವಿಶ್ವಕಪ್‌ನ ಪಂದ್ಯಾವಳಿಯಲ್ಲಿ ರವೀಂದ್ರ ಜಡೇಜಾ ಭಾರತ ತಂಡದ ಪ್ರಮುಖ ಆಟಗಾರನಾಗಲಿದ್ದಾರೆ. ಇತ್ತೀಚಿಗಷ್ಟೆ ಅವರು ಕಾಲಿನ ಗಾಯದಿಂದ ಚೇತರಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ 2022ರ ಟಿ20 ವಿಶ್ವಕಪ್ ಅನ್ನು ತಪ್ಪಸಿಕೊಂಡಿದ್ದರು. ಇದರಲ್ಲಿ ಭಾರತ ತಂಡವನ್ನು ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವು ಸೋಲಿಸಿತ್ತು.
ಹೀಗಾಗಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಟ್ರೋಫಿ ಗೆಲ್ಲುವ ಅಭಿಯಾನಕ್ಕೆ ಅಡ್ಡಿಯಾಗುವ ಯಾವುದೇ ಗಾಯಾಳುಗಳನ್ನು ತಪ್ಪಿಸಲು ವಿಶ್ವಕಪ್ ತಂಡದಲ್ಲಿರುವ ಪ್ರಮುಖ ಆಟಗಾರರು ಕೆಲವು ಐಪಿಎಲ್ ಪಂದ್ಯಗಳಿಂದ ಪ್ರಶಸ್ತಿ ಪಡೆಯಬೇಕೆಂದು ಬಿಸಿಸಿಐ ಆದೇಶ ಹೊರಡಿಸಿದೆ.
ಐಪಿಎಲ್‌ನಲ್ಲಿ ರವೀಂದ್ರ ಜಡೇಜಾ ಅವರು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಪ್ರಮುಖ ಆಲ್‌ರೌಂಡರ್‌ಗಳಲ್ಲಿ ಒಬ್ಬರು. ಎಂಎಸ್ ಧೋನಿ ಮತ್ತು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ರವೀಂದ್ರ ಜಡೇಜಾ ಆಲ್‌ರೌಂಡ್ ಸಾಮರ್ಥ್ಯದ ಮೇಲೆ ಬಹಳಷ್ಟು ಅವಲಂಬಿತವಾಗಿದೆ.












Click it and Unblock the Notifications