IPL 2023: ಮತ್ತೊಂದು ಬೃಹತ್ ಮೈಲಿಗಲ್ಲು ಸಾಧಿಸಿದ ವಿರಾಟ್ ಕೊಹ್ಲಿ
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಮತ್ತೊಮ್ಮೆ ಅಬ್ಬರಿಸಿದ್ದಾರೆ. ಆರಂಭಿಕನಾಗಿ ಫಾಫ್ ಡು ಪ್ಲೆಸಿಸ್ ಜೊತೆಗೆ ಕಣಕ್ಕಿಳಿದ ಕೊಹ್ಲಿ ಅದ್ಭುತ ಪ್ರದರ್ಶನ ನೀಡಿದ್ದು ಮತ್ತೊಂದು ಅರ್ದ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 4ನೇ ಅರ್ಧ ಶತಕ ಸಿಡಿಸಿದ್ದಾರೆ. ಮೊದಲ ವಿಕೆಟ್‌ಗೆ ಫಾಫ್ ಡು ಪ್ಲೆಸಿಸ್ ಜೊತೆಗೆ 137 ರನ್‌ಗಳ ಭರ್ಜರಿ ಜೊತೆಯಾಟದಲ್ಲಿ ಭಾಗಿಯಾದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 59 ರನ್ ಬಾರಿಸಿದ್ದಾರೆ. ಈ ಇನ್ನಿಂಗ್ಸ್ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ಒಳಗೊಂಡಿತ್ತು.

600 ಬೌಂಡರಿ ಬಾರಿಸಿದ ಕೊಹ್ಲಿ
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 600 ಬೌಂಡರಿಗಳ ಮೈಲಿಗಲ್ಲು ದಾಟಿದ್ದಾರೆ. ಈ ಮೂಲಕ ಐಪಿಎಲ್ ವೃತ್ತಿ ಜೀವನದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದೊಡ್ಡ ಸಾಧನೆಯನ್ನು ಮಾಡಿದಂತಾಗಿದೆ. ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಕೇವಲ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ. ಶಿಖರ್ ಧವನ್ 730 ಬೌಂಡರಿ ಸಿಡಿಸಿ ಐಪಿಎಲ್‌ನಲ್ಲಿ ಅತ್ಯಂತ ಹೆಚ್ಚಿನ ಬೌಂಡರಿ ಬಾರಿಸಿದ ದಾಖಲೆ ಹೊಂದಿದ್ದಾರೆ. ಎರಡೇ ಸ್ಥಾನದಲ್ಲಿ ಡೇವಿಡ್ ವಾರ್ನರ್ ಇದ್ದು 608 ಬೌಂಡರಿ ಗಳಿಸಿದ್ದಾರೆ.
IPL 2023: ಫಾಫ್ ಡುಪ್ಲೆಸಿಸ್ ಬದಲು ಕೊಹ್ಲಿ ಮತ್ತೆ ಆರ್‌ಸಿಬಿ ನಾಯಕನಾಗಿದ್ದೇಕೆ?
ಕೊಹ್ಲಿ- ಫಾಫ್ ಭರ್ಜರಿ ಆರಂಭ
ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಫಾಫ್ ಹಾಗೂ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿಯೂ ಪವರ್‌ಪ್ಲೇನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಮಿಂಚಿದರು. ಆದರೆ ಪವರ್‌ಪ್ಲೇ ಬಳಿಕ ಆರ್‌ಸಿಬಿ ತಂಡದ ರನ್‌ವೇಗ ನಿಧಾನವಾಯಿತು. ಹೀಗಾಗಿ ವಿಕೆಟ್ ಕೈಯಲ್ಲಿದ್ದರೂ ಆರ್‌ಸಿಬಿ ರನ್ ವೇಗ ಹೆಚ್ಚಾಗಲಿಲ್ಲ. 17ನೇ ಓವರ್‌ನ ಮೊದಲ ಓವರ್‌ನಲ್ಲಿ ವಿರಾಟ್ ಕೊಹ್ಲಿ 59 ರನ್‌ಗಳಿಸಿ ಔಟಾಗುವ ಮೂಲಕ ಈ ಜೋಡಿ ಬೇರ್ಪಟ್ಟಿತು. ಈ ಸಂದರ್ಭದಲ್ಲಿ ಆರ್‌ಸಿಬಿ ಮೊತ್ತ 137 ಆಗಿತ್ತು. ಹೀಗಾಗಿ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿದರೂ ಸ್ಟ್ರೈಕ್‌ರೇಟ್ ಮತ್ತೊಮ್ಮೆ ಪ್ರಶ್ನಾರ್ಹವಾಗಿದೆ.
ಫಾಫ್ ಅಬ್ಬರದ ಬ್ಯಾಟಿಂಗ್
ಇನ್ನು ಈ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ಮತ್ತೊಮ್ಮೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಫಾಫ್ 56 ಎಸೆತಗಳನ್ನು ಎದುರಿಸಿ 84 ರನ್ ಸಿಡಿಸಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್‌ಗಳು ಇದ್ದವು. ಇನ್ನು ಫಾಫ್ ಕೂಡ ಈ ಬಾರಿಯ ಐಪಿಎಲ್‌ನಲ್ಲಿ 4ನೇ ಅರ್ಧ ಶತಕ ಸಿಡಿಸಿದ್ದು ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಫಾಫ್ ಈ ಭಾರಿಯ ಟೂರ್ನಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ 343 ರನ್ ಬಾರಿಸಿದ್ದಾರೆ. ಎರಡನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ಈ ಟೂರ್ನಿಯಲ್ಲಿ 279 ರನ್‌ಗಳಿಸಿದ್ದಾರೆ.












Click it and Unblock the Notifications