IPL 2023: ಈ ಬಾರಿಯ ಆರ್‌ಸಿಬಿ ಯಶಸ್ಸಿಗೆ ಈತನೇ ಪ್ರಮುಖ ಆಟಗಾರ; ಸುನಿಲ್ ಗವಾಸ್ಕರ್
ಶನಿವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಐಪಿಎಲ್‌ನ 20ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡಗಳು ಗೆಲುವಿಗಾಗಿ ಸೆಣಸಾಡಲಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಹಿಂದಿನ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ನಂತರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪುಟಿದೇಳುವ ಗುರಿಯನ್ನು ಹೊಂದಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ರೋಮಾಂಚನಕಾರಿ ಸೋಲು ಆರ್‌ಸಿಬಿ ಹೆಚ್ಚು ನೋವುಂಟು ಮಾಡಿದೆ. ಏಕೆಂದರೆ, ಸ್ಕೋರ್ ಬೋರ್ಡ್‌ನಲ್ಲಿ 200ಕ್ಕೂ ಹೆಚ್ಚು ರನ್ ಗಳಿಸಿದರೂ ಸೋಲಬೇಕಾಯಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅತ್ಯಂತ ವಿಶ್ವಾಸಾರ್ಹ ಆಟgಗಾರ ವಿರಾಟ್ ಕೊಹ್ಲಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯ ವಿಜೇತ ಆಟಗಾರನಾಗಿ ನೋಡುತ್ತದೆ. ಆರ್‌ಸಿಬಿ ತಂಡ ಗೆಲ್ಲಬೇಕಾದರೆ ವಿರಾಟ್ ಕೊಹ್ಲಿ ಸಿಡಿದೇಳಬೇಕು ಎಂದು ಭಾರತದ ಮಾಜಿ ಶ್ರೇಷ್ಠ ಆಟಗಾರ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಐಪಿಎಲ್ 2023ರ ಋತುವಿನಲ್ಲಿ ವಿರಾಟ್ ಕೊಹ್ಲಿ ಆಡಿದ 3 ಪಂದ್ಯಗಳಲ್ಲಿ 164 ರನ್ ಬಾರಿಸಿದ್ದಾರೆ ಮತ್ತು ಶನಿವಾರ ಮಧ್ಯಾಹ್ನ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಮಾಡಬೇಕಾಗಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ.

ಆರ್‌ಸಿಬಿ ಯಶಸ್ಸು ವಿರಾಟ್ ಕೊಹ್ಲಿ ಮೇಲೆ ನಿಂತಿದೆ
ಸ್ಟಾರ್ ಸ್ಪೋರ್ಟ್ಸ್ ಕ್ರಿಕೆಟ್ ಲೈವ್ ಶೋನಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, "ಈ ವರ್ಷ ಆರ್‌ಸಿಬಿ ಯಶಸ್ಸು ವಿರಾಟ್ ಕೊಹ್ಲಿ ಅವರ ಮೇಲೆ ನಿಂತಿದೆ. ಕೊಹ್ಲಿ ಪ್ರತಿ ಪಂದ್ಯದಲ್ಲೂ ಉತ್ತಮವಾಗಿ ಆಡಿದರೆ, ನಂತರ ಆರ್‌ಸಿಬಿ ಗೆಲ್ಲುವ ಸಾಧ್ಯತೆ ಹೆಚ್ಚಾಗುತ್ತದೆ. ವಿರಾಟ್ ಕೊಹ್ಲಿ ದೊಡ್ಡ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರು. ಆರ್‌ಸಿಬಿ ಅಭಿಮಾನಿಗಳು ಮಾತ್ರವಲ್ಲದೆ, ಪ್ರತಿ ತಂಡದ ಅಭಿಮಾನಿಗಳು ಕೊಹ್ಲಿ ಬ್ಯಾಟ್‌ನಿಂದ ರನ್ ಹೊರಬರುವುದನ್ನು ನೋಡಲು ಬಯಸುತ್ತಾರೆ," ಎಂದರು.

ಆರ್‌ಸಿಬಿ ಪ್ರಸ್ತುತ ಐಪಿಎಲ್ 2023ರ ಪಾಯಿಂಟ್‌ಗಳ ಪಟ್ಟಿಯಲ್ಲಿ 2 ಅಂಕ ಗಳಿಸಿ 7ನೇ ಸ್ಥಾನದಲ್ಲಿದೆ. ಶನಿವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಪಂದ್ಯದಲ್ಲಿ ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲು ಎದುರು ನೋಡುತ್ತಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ತಮ್ಮ ತಂಡದ ಉಳಿದ ಆಟಗಾರರ ಕಳಪೆ ಪ್ರದರ್ಶನದಿಂದ ಸತತ ನಾಲ್ಕು ಪಂದ್ಯಗಳನ್ನು ಸೋತರೂ, ಡೇವಿಡ್ ವಾರ್ನರ್ ಅವರ ಬ್ಯಾಟ್‌ನಿಂದ ರನ್‌ಗಳು ಹರಿದುಬಂದಿವೆ. ಆಡಿದ ನಾಲ್ಕು ಪಂದ್ಯಗಳಲ್ಲಿ 3 ಅರ್ಧಶತಕಗಳೊಂದಿಗೆ 209 ರನ್ ಬಾರಿಸಿದ್ದಾರೆ.
ಇನ್ನು ಭಾರತದ ಮಾಜಿ ವೇಗಿ ಎಸ್ ಶ್ರೀಶಾಂತ್ ಅವರು ಆಸ್ಟ್ರೇಲಿಯಾದ ಅನುಭವಿ ಕ್ರಿಕೆಟಿಗನಿಗೆ ಬೆಂಬಲ ನೀಡಿದ್ದು, ಬ್ಯಾಟ್‌ನೊಂದಿಗೆ ಉತ್ತಮ ಪ್ರದರ್ಶನ ನೀಡಿ ಟೀಕಾಕಾರರನ್ನು ಬಾಯಿ ಮುಚ್ಚಿಸಲು ಸಲಹೆ ನೀಡಿದ್ದಾರೆ.
ವಾರ್ನರ್ ಪಿಚ್‌ನಲ್ಲಿ ಪ್ರಾಬಲ್ಯ ಸಾಧಿಸಲು ನೋಡುತ್ತಾರೆ
"ಡೇವಿಡ್ ವಾರ್ನರ್ ಅವರ ರನ್‌ಗಳ ಹಸಿವು ಎಂದಿಗೂ ಸಾಯುವುದಿಲ್ಲ. ಅವರು ವಿಶಿಷ್ಟವಾದ ಆಸೀಸ್ ಕ್ರಿಕೆಟಿಗ, ಅವರು ಯಾವಾಗಲೂ ಕ್ರಿಕೆಟ್ ಪಿಚ್‌ನಲ್ಲಿ ಪ್ರಾಬಲ್ಯ ಸಾಧಿಸಲು ನೋಡುತ್ತಾರೆ. ಬೌಲಿಂಗ್ ಮಾಡಲು ಕಠಿಣ ಬ್ಯಾಟರ್‌ಗಳಲ್ಲಿ ಒಬ್ಬರಾಗಿರುವ ಕಾರಣ ನಾನು ಅವರಿಗೆ ಬೌಲಿಂಗ್ ಮಾಡುವುದನ್ನು ಆನಂದಿಸಿದೆ," ಎಂದು ಎಸ್ ಶ್ರೀಶಾಂತ್ ಅಭಿಪ್ರಾಯಪಟ್ಟರು.












Click it and Unblock the Notifications