IPL 2023: ಆರ್‌ಸಿಬಿ ಹೊಸ ಜೆರ್ಸಿಯಲ್ಲಿ ಮಿಂಚಿದ ವಿರಾಟ್ ಕೊಹ್ಲಿ: ದಿನೇಶ್ ಕಾರ್ತಿಕ್, ಫಾಫ್ ಡುಪ್ಲೆಸಿಸ್ ಹೊಸ ಲುಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗಾಗಿ ಸಿದ್ದವಾಗುತ್ತಿದೆ. ಹಸರಂಗ ಹೊರತು ಪಡಿಸಿ ಎಲ್ಲಾ ಆಟಗಾರರು ತಂಡವನ್ನು ಸೇರಿಕೊಂಡಿದ್ದು, ಅಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 26ರಂದು ಭಾನುವಾರ ಆರ್ ಸಿಬಿ ಐಪಿಎಲ್ 2023ರ ಆವೃತ್ತಿಗಾಗಿ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದೆ.
A teaser for what we're about to drop tomorrow. 🔥
— Royal Challengers Bangalore (@RCBTweets) March 27, 2023
This photoshoot, just like our skipper, was too 🥵 to handle!#PlayBold #ನಮ್ಮRCB #IPL2023 @faf1307 pic.twitter.com/aW4qSsdbt2
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಹೊಸ ಜೆರ್ಸಿಯನ್ನು ಅನಾವರಣ ಮಾಡಲಾಯಿತು. ಇದೇ ಸಂದರ್ಭದಲ್ಲಿ ತಂಡದ ಮಾಜಿ ಆಟಗಾರರಾದ ಎಬಿ ಡಿವಿಲಿಯರ್ಸ್ ಮತ್ತು ಕ್ರಿಸ್ ಗೇಲ್ ಅವರಿಗೆ ಹಾಲ್ ಆಫ್ ಫೇಮ್ ನೀಡಿ ಗೌರವಿಸಲಾಗಿದೆ.

ಸದ್ಯ ಹೊಸ ಜೆರ್ಸಿಯಲ್ಲಿ ತಂಡದ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಮತ್ತು ದಿನೇಶ್ ಕಾರ್ತಿಕ್ ಫೋಸ್, ಗ್ಲೆನ್ ಮ್ಯಾಕ್ಸ್‌ವೆಲ್ ಸೇರಿದಂತೆ ತಂಡದ ಆಟಗಾರರು ಫೋಸ್ ನೀಡಿದ್ದಾರೆ. ಆರ್ ಸಿಬಿ ತನ್ನ ಅಧಿಕೃತ ಸಾಮಾಜಿಕ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ.
ವಿರಾಟ್ ಕೊಹ್ಲಿ ಅವರ ಫೋಟೊ ಸಖತ್ ವೈರಲ್ ಆಗಿದೆ. ಕೊಹ್ಲಿ ಆರ್ ಸಿಬಿ ಬಾವುಟವನ್ನು ಹೆಗಲ ಮೇಲೆ ಹಾಕಿಕೊಂಡಿರುವ ಫೋಟೊವನ್ನು ಹಂಚಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಅತ್ಯುತ್ತಮ ಪ್ರದರ್ಶನ ನೀಡಲು ಕಾಯುತ್ತಿದ್ದಾರೆ ಎಂದು ಶೀರ್ಷಿಕೆ ನೀಡಿದೆ.
ಫಾರ್ಮ್‌ಗೆ ಮರಳಿರುವ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಕಳೆದ ಆವೃತ್ತಿಯಲ್ಲಿ ಕಳಪೆ ಫಾರ್ಮ್‌ನಲ್ಲಿದ್ದರೂ, ಆದರೆ ಈ ಬಾರಿ ಸಂಪೂರ್ಣ ವಿಭಿನ್ನವಾದ ಕೊಹ್ಲಿಯನ್ನು ಐಪಿಎಲ್‌ನಲ್ಲಿ ನೋಡಬಹುದಾಗಿದೆ. ಐಪಿಎಲ್‌ಗೆ ಮುನ್ನವೇ ಕೊಹ್ಲಿ ಕೂಡ ಈ ಬಾರಿ ಉತ್ತಮ ಪ್ರದರ್ಶನ ನೀಡಲು ಕಾಯುತ್ತಿರುವುದಾಗಿ ಹೇಳಿದ್ದಾರೆ. ತಮ್ಮ ಹಳೆಯ ಆಟವನ್ನು ಮರಳಿ ತಂದರೆ ಎದುರಾಳಿಗಳಿಗೆ ಅವರು ಸಿಂಹಸ್ವಪ್ನವಾಗಬಲ್ಲರು.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದ ಕೊಹ್ಲಿ, ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಕೂಡ ಅರ್ಧಶತಕ ಗಳಿಸಿ ಮಿಂಚಿದ್ದರು. ಫಾಫ್ ಡುಪ್ಲೆಸಿಸ್ ಜೊತೆ ಇನ್ನಿಂಗ್ಸ್ ಆರಂಭಿಸುತ್ತಾರೆ ಎಂದು ತಂಡದ ಮ್ಯಾನೇಜ್‌ಮೆಂಟ್ ಹೇಳಿದೆ.
ತವರಿನಲ್ಲಿ ಅಭಿಮಾನಿಗಳ ಮುಂದೆ ಆಡಲು ಕಾತರ
ಆರ್ ಸಿಬಿ ತಂಡದ ನಾಯಕ ಫಾಪ್ ಡುಪ್ಲೆಸಿಸ್ ಈ ಬಾರಿಯ ಐಪಿಎಲ್‌ನಲ್ಲಿ ಕಪ್ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ತುಂಬಿದ ಕ್ರೀಡಾಂಗಣದಲ್ಲಿ ಆಡಲು ಉತ್ಸುಕರಾಗಿದ್ದೇವೆ ಎಂದು ಅವರು ಹೇಳಿದರು. ದಕ್ಷಿಣ ಆಫ್ರಿಕಾ ಎಸ್‌ಎ 20 ಲೀಗ್‌ನಲ್ಲಿ ಕೊನೆಯದಾಗಿ ಆಡಿದ್ದೇನೆ, ಅಲ್ಲಿ ಉತ್ತಮವಾಗಿ ರನ್ ಗಳಿಸಿದ್ದು, ಐಪಿಎಲ್‌ನಲ್ಲಿ ಅದೇ ಪ್ರದರ್ಶನ ಮುಂದುವರೆಸುವ ವಿಶ್ವಾಸದಲ್ಲಿದ್ದೇನೆ ಎಂದು ಹೇಳಿದ್ದಾರೆ.
"ಬೆಂಗಳೂರಿಗೆ ಹಿಂತಿರುಗಿರುವುದು ಸಂತಸ ತಂದಿದೆ. ಕಳೆದ ಆವೃತ್ತಿಯಲ್ಲಿ ನಾನು ತವರಿನ ಪ್ರೇಕ್ಷಕರನ್ನು ಬೆಂಬಲವನ್ನು ಪಡೆಯಲು ಆಗಲಿಲ್ಲ. ಈ ವರ್ಷ ಇಲ್ಲಿ ಆಡಲು ಉತ್ಸುಕನಾಗಿದ್ದೇನೆ ಏಕೆಂದರೆ ನಾನು ತುಂಬಿದ ಕ್ರೀಡಾಂಗಣದಲ್ಲಿ ಆಡುತ್ತೇನೆ. ಅದಕ್ಕಾಗಿ ಎದುರು ನೋಡುತ್ತಿದ್ದೇನೆ" ಎಂದು ಫಾಫ್ ಹೇಳಿದ್ದಾರೆ.
ದಿನೇಶ್ ಕಾರ್ತಿಕ್, ಗ್ಲೇನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್‌ವೆಲ್ ಸೇರಿದಂತೆ ಅತ್ಯುತ್ತಮ ಆಟಗಾರರನ್ನು ಹೊಂದಿರುವ ಆರ್ ಸಿಬಿ ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಏಪ್ರಿಲ್ 2ರಂದು ಆರ್ ಸಿಬಿ ಈ ಬಾರಿ ಮೊದಲನೇ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.












Click it and Unblock the Notifications