IPL 2023: ರಿಷಬ್ ಪಂತ್‌ಗೆ ವಿಶೇಷವಾಗಿ ಗೌರವ ಸಲ್ಲಿಸಿದ ಡೇವಿಡ್ ವಾರ್ನರ್

ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ನಾಯಕ ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಈ ಐಪಿಎಲ್‌ನ ಮೊದಲನೇ ಪಂದ್ಯವನ್ನು ಆಡಿದೆ. ಕಾರು ಅಪಘಾತದಲ್ಲಿ ಗಾಯಗೊಂಡಿರುವ ಪಂತ್ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿದಿದ್ದಾರೆ. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸುತ್ತಿದ್ದಾರೆ. ಆದರೂ, ಫ್ರಾಂಚೈಸಿ ಪಂತ್‌ ಜೊತೆ ಸಾಕಷ್ಟು ಭಾವನಾತ್ಮಕ ನಂಟು ಹೊಂದಿದ್ದು, ಪಂದ್ಯದ ಸಮಯದಲ್ಲಿ ನೆನಪು ಮಾಡಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಗುಜರಾತ್ ಜೈಂಟ್ಸ್ ವಿರುದ್ಧದ ಎರಡನೇ ಪಂದ್ಯಕ್ಕೆ ಮುನ್ನ ರಿಷಬ್ ಪಂತ್‌ರನ್ನು ನೆನಪು ಮಾಡಿಕೊಂಡಿದ್ದಾರೆ. ಡಗೌಟ್‌ ಮೇಲೆ ರಿಷಬ್ ಪಂತ್‌ ಅವರ ಜೆರ್ಸಿಯನ್ನು ಡಗೌಟ್‌ ಮೇಲೆ ಹಾಕಿರುವ ಫೋಟೊವನ್ನು ಹಂಚಿಕೊಂಡಿದ್ದು, 'ಯಾವಾಗಲೂ ನಮ್ಮೊಂದಿಗೆ ಇರುತ್ತೀರಾ ರಿಷಬ್ ಪಂತ್' ಎಂದು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

IPL 2023: Warners Heartfelt Gesture to Rishabh Pant Before Delhi Capitals Match Against GT

ಡೇವಿಡ್ ವಾರ್ನರ್ ಅವರ ಈ ಸಂದೇಶ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಪಂತ್ ಅವರನ್ನು ಎಷ್ಟು ಮಿಸ್ ಮಾಡಿಕೊಂಡಿದೆ ಎನ್ನುವುದನ್ನು ಸೂಚಿಸುತ್ತದೆ. ಹಲವು ವರ್ಷಗಳಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಯಶಸ್ಸಿನಲ್ಲಿ ಪಂತ್ ಪ್ರಮುಖ ಪಾತ್ರ ವಹಿಸಿದ್ದರು. 2020ರ ಆವೃತ್ತಿಯವಲ್ಲಿ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಪ್ರವೇಶಿಸಿತ್ತು. ಅವರು ಐಪಿಎಲ್‌ನಿಂದ ಹೊರ ಬಿದ್ದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯನ್ನು ಉಂಟು ಮಾಡಿದೆ.

ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲು

ಡೆಲ್ಲಿ ಕ್ಯಾಪಿಟಲ್ಸ್ ತಂಡ 2023ರ ಐಪಿಎಲ್ ಅಭಿಯಾನವನ್ನು ಸೋಲಿನೊಂದಿಗೆ ಆರಂಭಿಸಿದೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 50 ರನ್‌ಗಳಿಂದ ಸೋಲನುಭವಿಸಿತು. ಪ್ರಮುಖ ಬ್ಯಾಟರ್ ಪಂತ್ ಕೊರತೆ ಈ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಹೆಚ್ಚಾಗಿ ಕಾಡಿದೆ. 193 ರನ್‌ಗಳ ಗುರಿಯನ್ನು ಬೆನ್ನತ್ತಿದ ವಾರ್ನರ್ ಪಡೆ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 143 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿದೆ.

ಪಂತ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರೂ ಉಳಿದ ಬ್ಯಾಟರ್ ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದರು. ಉಳಿದ ಆಟಗಾರರು ಲಯವನ್ನು ಕಂಡುಕೊಳ್ಳಲು ಹೆಣಗಾಡಿದರು. ಪಂತ್ ಅವರ ಅನುಪಸ್ಥಿತಿಯನ್ನು ಅಭಿಮಾನಿಗಳು ಸ್ಪಷ್ಟವಾಗಿ ಗುರುತಿಸಿದರು. ಮಾರ್ಕ್‌ವುಡ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು, 5 ವಿಕೆಟ್ ಪಡೆದ ಅವರು ಲಕ್ನೋ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

IPL 2023: Warners Heartfelt Gesture to Rishabh Pant Before Delhi Capitals Match Against GT

ಮೊದಲ ಗೆಲುವಿನ ಹುಡುಕಾಟ

ಮೊದಲನೇ ಪಂದ್ಯವನ್ನು ಸೋತ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ವಿರುದ್ಧ ಸೆಣೆಸಲಿದೆ. ಎರಡನೇ ಪಂದ್ಯವನ್ನು ತವರಿನಲ್ಲಿ ಆಡುವುದು ತಂಡಕ್ಕೆ ಪ್ರಮುಖ ಲಾಭವಾಗಿದೆ. ಏಪ್ರಿಲ್ 4 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಮೊದಲನೇ ಪಂದ್ಯವನ್ನು ಸೋತಿರುವ ಎರಡನೇ ಪಂದ್ಯದಲ್ಲಿ ಗೆಲುವು ಪಡೆಯುವ ಲೆಕ್ಕಾಚಾರದಲ್ಲಿದೆ. ಮೊದಲನೇ ಪಂದ್ಯದಲ್ಲೇ ಸಿಎಸ್‌ಕೆ ತಂಡವನ್ನು ಮಣಿಸಿರುವ ಗುಜರಾತ್ ಜೈಂಟ್ಸ್ ಕೂಡ ಗೆಲುವಿನ ಓಟ ಮುಂದುವರೆಸುವ ವಿಶ್ವಾಸದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಲೀ ರೊಸೊವ್, ಸರ್ಫರಾಜ್ ಖಾನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ಫಿಲಿಪ್ ಸಾಲ್ಟ್, ಅಮನ್ ಹಕೀಮ್ ಖಾನ್, ಇಶಾಂತ್ ಶರ್ಮಾ, ಮನೀಶ್ ಪಾಂಡೆ, ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ, ಲಲಿತ್ ಯಾದವ್, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಅಭಿಷೇಕ್ ಪೊರೆಲ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+