IPL 2023, ಕ್ವಾಲಿಫಯರ್ 1: ಓಪನರ್ಸ್ ಆಸರೆ; ಗುಜರಾತ್‌ಗೆ ಪೈಪೋಟಿಯುತ ಗುರಿ

ಕಳೆದ ಮಾರ್ಚ್ ತಿಂಗಳಾಂತ್ಯದಲ್ಲಿ ಶುರುವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಯದ ಸನಿಹಕ್ಕೆ ಬಂದಿದೆ. ಲೀಗ್ ಹಂತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟಿವೆ.
ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದುಕೊಂಡಿದ್ದ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ 1 ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯ ಇಂದು ( ಮೇ 23 ) ಚೆನ್ನೈನ ಎಂಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿದ್ದು ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 173 ರನ್‌ಗಳ ಗುರಿಯನ್ನು ನೀಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರಂಭಿಕರಾಗಿ ಕಣಕ್ಕಿಳಿದ ರುತುರಾಜ್ ಗಾಯಕ್ವಾಡ್ ಹಾಗೂ ಹಾಗೂ ಡಿವಾನ್ ಕಾನ್ವೆ ಆಸರೆಯಾಗಿದ್ದಾರೆ. ಗಾಯಕ್ವಾಡ್ 44 ಎಸೆತಗಳಲ್ಲಿ 60 ರನ್ ಬಾರಿಸಿದರೆ, ಡಿವಾನ್ ಕಾನ್ವೆ 34 ಎಸೆತಗಳಲ್ಲಿ 40 ರನ್ ಬಾರಿಸಿದರು. ಇನ್ನುಳಿದಂತೆ ಶಿವಮ್ ದುಬೆ 1, ಅಜಿಂಕ್ಯ ರಹಾನೆ 17, ಅಂಬಾಟಿ ರಾಯುಡು 17, ರವೀಂದ್ರ ಜಡೇಜಾ 22 ರನ್, ಎಂ ಎಸ್ ಧೋನಿ 1 ಹಾಗೂ ಮೊಯಿನ್ ಅಲಿ ಅಜೇಯ 9 ರನ್ ಗಳಿಸಿದರು.
ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಶಮಿ ಹಾಗೂ ಮೋಹಿತ್ ಶರ್ಮಾ ತಲಾ ಎರಡು ವಿಕೆಟ್ ಪಡೆದರೆ, ದರ್ಶನ್ ನಾಲ್ಕಂಡೆ, ರಶೀದ್ ಖಾನ್ ಹಾಗೂ ನೂರ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು.
ಇನ್ನು ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ತಲುಪಲಿದ್ದು, ಸೋಲಲಿರುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಎಲಿಮಿನೇಟರ್ ಗೆದ್ದು ಬರುವ ತಂಡದ ಜತೆ ಕಣಕ್ಕಿಳಿಯಲಿದೆ.
ಪಂದ್ಯದಲ್ಲಿ ಕಣಕ್ಕಿಳಿಯುವ ಆಡುವ ಬಳಗಗಳು:
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ(ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ದರ್ಶನ್ ನಲ್ಕಂಡೆ, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ, ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ












Click it and Unblock the Notifications