Yash Dhull: ಐಪಿಎಲ್‌ಗೆ ಪದಾರ್ಪಣೆ ಮಾಡಿದ ಅಂಡರ್-19 ವಿಶ್ವಕಪ್ ಗೆದ್ದ ನಾಯಕ ಯಶ್ ಧುಲ್

ಡೆಲ್ಲಿ ಕ್ಯಾಪಿಟಲ್ಸ ಹಾಗೂ ಮುಂಬೈ ಇಂಡಿಯನ್ಸ ತಂಡಗಳು ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಯುವ ಆಟಗಾರ ಯಶ್ ಧುಲ್ ಆಡುವ ಅವಕಾಶವನ್ನು ಗಳಿಸಿಕೊಂಡಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಯಶ್ ಧುಲ್ ಕಣಕ್ಕಿಳಿಯುತ್ತಿದ್ದಾರೆ.

20ರ ಹರೆಯದ ಯಶ್ ಧುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಖಲೀಲ್ ಅಹ್ಮದ್ ಬದಲಿಗೆ ಆಡುವ ಬಳಗದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಖಲೀಲ್ ಅಹ್ಮದ್ ಕಳೆದ ಪಂದ್ಯದಲ್ಲಿ ಗಾಯಗೊಂಡಿರುವ ಕಾರಣ ಈ ಪಂದ್ಯದಿಂದ ಹೊರಗುಳಿದರು. ಇನ್ನು ಈ ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮತ್ತೊಂದು ಬದಲಾವಣೆ ಮಾಡಿಕೊಳ್ಳಲಾಗಿದ್ದು ಮುಸ್ತಫಿಜುರ್ ರಹ್ಮಾನ್ ರಿಲೀ ರೊಸ್ಸೋ ಬದಲಿಗೆ ಸ್ಥಾನ ಪಡೆದುಕೊಂಡಿದ್ದಾರೆ.

ipl 2023: Yash Dhull makes IPL debut for Delhi Capitals against Mumbai Indians

ಯಶ್ ಧುಲ್ 2022ರ ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ತಂಡ ವಿಶ್ವಕಪ್ ಗೆಲ್ಲಲು ಪ್ರಮುಖ ಕಾರಣವಾಗಿದ್ದರು. ಅದೇ ವರ್ಷ ಯಶ್ ಧುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ 20 ಲಕ್ಷಕ್ಕೆ ಸೇರ್ಪಡೆಗೊಳಿಸಿತು. ಆದರೆ ಆವೃತ್ತಿಯಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯುವಲ್ಲಿ ವಿಫಲವಾಗಿದ್ದರು.

ಅಂಡರ್ 19 ವಿಶ್ವಕಪ್‌ಲ್ಲಿ ಮಾತ್ರವಲ್ಲದೆ ದೇಶೀಯ ಕ್ರಿಕೆಟ್‌ನಲ್ಲಿಯೂ ದೆಹಲಿ ತಂಡದ ಪರವಾಗಿ ಆಡಿ ಯಶ್ ಧುಲ್ ಗಮನ ಸೆಳೆಯುವ ಪ್ರದರ್ಶನ ನೀಡಿದ್ದಾರೆ. 15 ಪ್ರಥಮದರ್ಜೆ ಪಂದ್ಯಗಳಲ್ಲಿ ಯಶ್ ಧುಲ್ 1145 ರನ್‌ಗಳನ್ನು ಗಳಿಸಿದ್ದು 49.78r ಸರಾಸರಿಯಲ್ಲಿ 70.15ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿ ಮಿಂಚಿದ್ದಾರೆ. ನಾಲ್ಕು ಶತಕ ಹಾಗೂ ನಾಲ್ಕು ಅರ್ಧ ಶತಕಗಳನ್ನು ಕೂಡ ಸಿಡಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದರು. ಇದೀಗ ಐಪಿಎಲ್‌ನಂತಾ ವೇದಿಕೆಯಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ವಿಫಲವಾದ ಧುಲ್: ಇನ್ನು ಯಶ್ ಧುಲ್ ಮುಂಬೈ ಇಂಡಿಯನ್ಸ್ ವಿರುದ್ಧದ ಪದಾರ್ಪಣಾ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದರು. ಆದರೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಅವರು ವಿಫಲವಾಗಿದ್ದಾರೆ. ನಾಲ್ಕು ಎಸೆತಗಳನ್ನು ಎದುರಿಸಿದ ಯಶ್ ಧುಲ್ ಕೇವಲ 2 ರನ್‌ಗಳನ್ನು ಮಾತ್ರವೇ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ಯಶ್ ಧುಲ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆ), ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್
ಬೆಂಚ್: ಮುಖೇಶ್ ಕುಮಾರ್, ಅಮನ್ ಹಕೀಮ್ ಖಾನ್, ಸರ್ಫರಾಜ್ ಖಾನ್, ಪ್ರವೀಣ್ ದುಬೆ, ಇಶಾಂತ್ ಶರ್ಮಾ, ರಿಲೀ ರೊಸೊವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಲುಂಗಿ ಎನ್‌ಗಿಡಿ, ಫಿಲಿಪ್ ಸಾಲ್ಟ್, ಕಮಲೇಶ್ ನಾಗರಕೋಟಿ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ವಿಕ್ಕಿ ಓಸ್ತ್ವಾಲ್

ರೋಹಿತ್ ಶರ್ಮಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ರಿಲೆ ಮೆರೆಡಿತ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
ಬೆಂಚ್: ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ರಮಣದೀಪ್ ಸಿಂಗ್ , ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ಆಕಾಶ್ ಮಾಧ್ವಾಲ್, ದುವಾನ್ ಜಾನ್ಸೆನ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್
ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+