IPL 2024: ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ಆಘಾತ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೆಣೆಸಲು ಸಜ್ಜಾಗುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಆಘಾತ ಎದುರಾಗಿದೆ. ಪ್ರಮುಖ ಬೌಲರ್ ಆರಂಭದ ಕೆಲವು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಕಳೆದ ಐಪಿಎಲ್ ಆವೃತ್ತಿಯಲ್ಲಿ ಸಿಎಸ್‌ಕೆ ತಂಡದ ಪ್ರಮುಖ ಅಸ್ತ್ರವಾಗಿದ್ದ ಶ್ರೀಲಂಕಾದ ಯುವ ವೇಗದ ಬೌಲರ್ ಮತೀಶ್ ಪತಿರಣ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಉದ್ಘಾಟನಾ ಪಂದ್ಯಕ್ಕೆ ಮಾತ್ರವಲ್ಲದೆ ಸಿಎಸ್‌ಕೆ ತಂಡದ ಆರಂಭದ ಕೆಲವು ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ.

IPL 2024 CSK Bowler Matheesha Pathirana Out Against RCB Set to Miss Early Matches

ಸಿಲ್ಹೆಟ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ 2 ನೇ ಟಿ 20 ಐ ಸಮಯದಲ್ಲಿ ಮತೀಶ ಪತಿರಣ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ಸದ್ಯ ಅವರು ಗಾಯದಿಂದ ಚೇತರಿಸಿಕೊಂಡಿದ್ದರೂ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲವಾದ ಕಾರಣ ಇನ್ನೂ ಶ್ರೀಲಂಕಾದಲ್ಲೇ ಇದ್ದಾರೆ.

ಸಿಎಸ್‌ಕೆ ತಂಡಕ್ಕೆ ಹಿನ್ನಡೆ

ಇಸ್‌ಎಸ್‌ಪಿಎನ್‌ ಕ್ರಿಕ್‌ಇನ್ಫೋ ಪ್ರಕಾರ, ವೇಗಿ ಶ್ರೀಲಂಕಾ ಕ್ರಿಕೆಟ್‌ನಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು (ಎನ್‌ಒಸಿ) ಪಡೆದ ನಂತರವೇ ಸಿಎಸ್‌ಕೆ ತಂಡವನ್ನು ಸೇರಲಿದ್ದಾರೆ. ಅವರ ಅಲಭ್ಯತೆ ತಂಡದ ಬೌಲಿಂಗ್ ವಿಭಾಗದ ಮೇಲೆ ಭಾರಿ ಪರಿಣಾಮ ಬೀರಿದೆ.

ನಿರ್ಣಾಯಕ ಡೆತ್ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಪಡೆಯುತ್ತಿದ್ದ ಅವರು ಸಿಎಸ್‌ಕೆ ತಂಡದ ಪ್ರಮುಖ ಅಸ್ತ್ರವಾಗಿದ್ದರು. ಕಳೆದ ಬಾರಿ ಸಿಎಸ್‌ಕೆ ತಂಡದ ಗೆಲುವಿನಲ್ಲಿ ಮತಿರಣ ಅವರ ಪಾತ್ರ ಪ್ರಮುಖವಾಗಿತ್ತು.

ಮುಸ್ತಾಫಿಜುರ್ ರೆಹಮಾನ್‌ಗೆ ಅವಕಾಶ

ಪತಿರಣ ಅವರ ಅನುಪಸ್ಥಿತಿಯು ಕಳವಳಕಾರಿಯಾದರೂ, ಸಿಎಸ್‌ಕೆ ಕೆಲವು ಬ್ಯಾಕಪ್ ಆಯ್ಕೆಗಳನ್ನು ಹೊಂದಿದೆ. ಬಾಂಗ್ಲಾದೇಶದ ಹಿರಿಯ ವೇಗಿ ಮುಸ್ತಾಫಿಜುರ್ ರೆಹಮಾನ್ ಆರಂಭಿಕ ಪಂದ್ಯಗಳಲ್ಲಿ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.

ಮುಸ್ತಾಫಿಜುರ್ ಕೂಡ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎನ್ನುವ ವರದಿ ಇದೆ. ಅವರು ಫಿಟ್ ಆದರೆ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಇಲ್ಲವಾದಲ್ಲಿ ನಾಯಕ ಎಂಎಸ್ ಧೋನಿ ಬದಲೀ ಆಯ್ಕೆಯನ್ನು ನೋಡಬಹುದು.

ಶುಕ್ರವಾರದಿಂದ ಐಪಿಎಲ್ ಹಬ್ಬ

ಮಾರ್ಚ್ 22 ಈ ಬಾರಿ ಐಪಿಎಲ್ ಹಬ್ಬ ಶುರುವಾಗಲಿದೆ. ಚೆನ್ನೈ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸಿಎಸ್‌ಕೆ ತಂಡದ ವಿರುದ್ಧ ಆರ್ ಸಿಬಿ ತಂಡ ಸೆಣೆಸಲಿದೆ. ಮಾರ್ಚ್ 22ರ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+