IPL 2024: ಕೊಹ್ಲಿಗಿಂತ ಇವರ ಸ್ಟ್ರೈಕ್ ರೇಟ್ ಬೆಸ್ಟ್: ಆದರೂ ಆರ್‌ಸಿಬಿಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸಿಗುತ್ತಿಲ್ಲ ಸ್ಥಾನ?
ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಈಗಾಗಲೇ ತಮ್ಮ ಬ್ಯಾಟಿಂಗ್ ನಿಂದ ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದಾರೆ. ಸದ್ಯ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಭಾರಿ ಮುಂದಿದ್ದಾರೆ. ಆದರೆ ಈ ಒಂದು ಲೆಕ್ಕಾಚಾರದಲ್ಲಿ ವಿರಾಟ್ ಆರ್‌ಸಿಬಿಯ ಯುವ ಆಟಗಾರನಿಗಿಂತಲೂ ತುಂಬ ಹಿಂದೆ ಇದ್ದಾರೆ.
ಐಪಿಎಲ್ 2024 ರೋಚಕತೆ ಪಡೆದಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರನ್ ಕಲೆ ಹಾಕಿ ಅಬ್ಬರಿಸುತ್ತಿದ್ದಾರೆ. ಆಡಿದ ಐದು ಪಂದ್ಯಗಳಲ್ಲಿ ವಿರಾಟ್ 2 ಅರ್ಧಶತಕ ಹಾಗೂ ಒಂದು ಶತಕದ ಸಹಾಯದಿಂದ 316 ರನ್ ಸಿಡಿಸಿದ್ದಾರೆ. ಆದರೆ ಸ್ಟ್ರೈಕ್ ರೇಟ್ ವಿಚಾರದಲ್ಲಿ ತುಂಬ ಹಿಂದೆ ಇದ್ದಾರೆ.

ಸ್ಟ್ರೈಕ್ ರೇಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ನಿಲ್ಲುವ ಆಟಗಾರ, ಆರ್‌ಸಿಬಿಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಲು ಹರಸಾಹಸ ಪಡೆಯುತ್ತಿದ್ದಾರೆ. ಆದರೆ ಅವರ ಸ್ಟ್ರೈಕ್ ರೇಟ್ ಎದುರಾಳಿಗೆ ನಡುಕ ಹುಟ್ಟಿಸಿದೆ. ಇವರ ಸ್ಟ್ರೈಕ್ ರೇಟ್ ಸದ್ಯ ಐಪಿಎಲ್‌ನಲ್ಲಿ ಗರಿಷ್ಠ ಸ್ಟ್ರೈಕ್ ರೇಟ್ ಆಗಿದೆ. ಸಿಕ್ಕ ಅವಕಾಶದಲ್ಲಿ ತಮ್ಮ ಪ್ರಭಾವವನ್ನು ಬೀರಿ ಎದುರಾಳಿ ಬೌಲರ್‌ಗಳ ರಣ ತಂತ್ರವನ್ನು ಬುಡಮೇಲು ಮಾಡಿ ಅಬ್ಬರಿಸಿದ್ದಾರೆ.
ವಿರಾಟ್ ಸ್ಟ್ರೈಕ್ ರೇಟ್ ಎಷ್ಟು?
ಈ ಐದು ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಸ್ಟ್ರೈಕ್ ರೇಟ್ ಎಲ್ಲರ ಚಿಂತೆಯನ್ನು ಹೆಚ್ಚಿಸಿದೆ. ಪ್ರಸ್ತುತ ಅವರು 146.29 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರ ಆಟದ ಧಾಟಿಗೆ ಇದು ಸರಿಯಾದ ಸ್ಟ್ರೈಕ್ ರೇಟ್ ಅಲ್ಲ. ಈ ವರ್ಷ ವಿದೇಶಿ ಆಟಗಾರರನ್ನು ಬಿಟ್ಟು ಭಾರತೀಯ ಬ್ಯಾಟ್ಸ್‌ಮನ್ ಸ್ಟ್ರೈಕ್ ರೇಟ್ ಉತ್ತಮವಾಗಿ ಹೊಂದಿದ್ದಾರೆ. ಆರ್‌ಸಿಬಿ ತಂಡದ ಮಹಿಪಾಲ್ ಲೊಮ್ರೋರ್ ಆರ್‌ಸಿಬಿ ಪರ 2 ಪಂದ್ಯಗಳನ್ನು ಆಡಿ 238 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿದ್ದಾರೆ. ಇವರನ್ನು ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿ ಕೊಂಡಿಲ್ಲ. ಇವರನ್ನು ಬರೀ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಲಾಗುತ್ತಿದೆ.
ಆರ್‌ಸಿಬಿ ಪರ ಇವರದ್ದೇ ಅಬ್ಬರ
ಭರವಸೆಯ ಆಟಗಾರ ಮಹಿಪಾಲ್ ಲೊಮ್ರೋರ್ ಅತ್ಯಂತ ಆಕ್ರಮಣಕಾರಿ ಬ್ಯಾಟ್ಸ್‌ಮನ್ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಸಿಕ್ಕ ಅವಕಾಶದಲ್ಲಿ ಸಿಡಿಲ್ಲಬ್ಬರದ ಬ್ಯಾಟಿಂಗ್ ಮಾಡಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇವರು ಆಡಿರುವ ಎರಡು ಪಂದ್ಯಗಳಲ್ಲಿ ಕೇವಲ 21 ಎಸೆತಗಳನ್ನು ಎದುರಿಸಿ 50 ರನ್ ಬಾರಿಸಿ ಆರ್ಭಟಿಸಿದ್ದಾರೆ.

ಇವರನ್ನು ಬಿಟ್ಟರೆ ಭಾರತೀಯ ಆಟಗಾರರ ಪೈಕಿ SRH ನ ಅಭಿಷೇಕ್ ಶರ್ಮಾ ಸ್ಟ್ರೈಕ್ ರೇಟ್ ಅತ್ಯುತ್ತಮವಾಗಿದೆ. ಅವರು 4 ಪಂದ್ಯಗಳಲ್ಲಿ 161 ರನ್ ಗಳಿಸಿದ್ದಾರೆ ಮತ್ತು ಅವರ ಸ್ಟ್ರೈಕ್ ರೇಟ್ 217.56 ಆಗಿದೆ. ಇವರು ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ, ಆದರೆ ಒಟ್ಟಾರೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 161 ರನ್ ಗಳಿಸಲು ಅಭಿಷೇಕ್ ಕೇವಲ 74 ಎಸೆತಗಳನ್ನು ತೆಗೆದುಕೊಂಡಿದ್ದಾರೆ. ಅವರು ಎಸ್‌ಆರ್‌ಎಚ್ ತಂಡದ ಪರ ಓಪನಿಂಗ್ ಮಾಡುತ್ತಾರೆ. ಮತ್ತು ಬಂದ ತಕ್ಷಣ ಸ್ಫೋಟಕ ಬ್ಯಾಟಿಂಗ್ ಮಾಡುತ್ತಾರೆ.
ಅಭಿಷೇಕ್ ಪೋರಲ್, ಸಂಜು ಸ್ಯಾಮ್ಸನ್ ಮತ್ತು ಶ್ರೇಯಸ್ ಅಯ್ಯರ್, ಚೇಸಿಂಗ್ ಸ್ಟಾರ್ ವಿರಾಟ್ ಅವರಿಗಿಂತ ಉತ್ತಮ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಕೊನೆಯ ಐಪಿಎಲ್ ಪಂದ್ಯದಲ್ಲಿ 113 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿರಬಹುದು, ಆದರೆ ಇದು ಐಪಿಎಲ್‌ನಲ್ಲಿ ದಾಖಲಾದ ನಿಧಾನಗತಿಯ ಶತಕವಾಗಿದೆ. ಕೊಹ್ಲಿ ಐಪಿಎಲ್‌ನಲ್ಲಿ ಇದುವರೆಗೆ 8 ಶತಕಗಳನ್ನು ಬಾರಿಸಿದ್ದಾರೆ, ಆದರೆ ಅವರು ಇದಕ್ಕಿಂತ ನಿಧಾನವಾದ ಶತಕವನ್ನು ಎಂದಿಗೂ ಗಳಿಸಿಲ್ಲ. ಸ್ಟ್ರೈಕ್ ರೇಟ್ ವಿಚಾರದಲ್ಲಿ ಭಾರತ ಮತ್ತು ವಿದೇಶಿ ಆಟಗಾರರನ್ನು ಒಟ್ಟುಗೂಡಿಸಿದರೆ,ಕೊಹ್ಲಿ 40 ನೇ ಸ್ಥಾನದಲ್ಲಿದ್ದಾರೆ.
-
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಐಪಿಎಲ್ ಇತಿಹಾಸದಲ್ಲೇ ಆರ್‌ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್‌ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL 2026: ಆರ್‌ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್‌ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ











Click it and Unblock the Notifications