IPL 2024: ಶಸ್ತ್ರಚಿಕಿತ್ಸೆಗೆ ಒಳಗಾದ ವೇಗಿ ಮೊಹಮ್ಮದ್ ಶಮಿ, ಐಪಿಎಲ್‌ನಿಂದ ಔಟ್!
ನವದೆಹಲಿ, ಫೆಬ್ರವರಿ.27: ಭಾರತದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಹಿಮ್ಮಡಿ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಸೋಮವಾರ ಲಂಡನ್‌ನಲ್ಲಿ ತಮ್ಮ ಪಾದದ ಸ್ನಾಯುರಜ್ಜುಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಸುದ್ದಿ ಹಂಚಿಕೊಂಡಿದ್ದಾರೆ.
ಬಲಗೈ ವೇಗಿ ಮೊಹಮ್ಮದ್ ಶಮಿ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು, "ನಾನು ಯಶಸ್ವಿಯಾಗಿ ಅಕಿಲ್ಸ್ ಸ್ನಾಯುರಜ್ಜು ಶಸ್ತ್ರಚಿಕಿತ್ಎ ಮಾಡಿಸಿದ್ದೇನೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಬೇಗ ಗುಣಮುಖನಾಗಲು ಎದುರು ನೋಡುತ್ತಿದ್ದೇನೆ" ಎಂದು ಫೊಟೋಗಳ ಜೊತೆಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಐಪಿಲ್‌ನಲ್ಲಿ ಇರಲ್ಲ ಮೊಹಮ್ಮದ್ ಶಮಿ!
ಭಾರತದ ODI ವಿಶ್ವಕಪ್ ಅಭಿಯಾನದ ನಂತರ ಮೊಹಮ್ಮದ್ ಶಮಿ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ಆಡಿಲ್ಲ. ಈ ಫೈನಲ್‌ಗೆ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಏಳು ಪಂದ್ಯಗಳಲ್ಲಿ 10.70 ಸರಾಸರಿ ಮತ್ತು 12.20 ಸ್ಟ್ರೈಕ್ ರೇಟ್‌ನಲ್ಲಿ 24 ವಿಕೆಟ್‌ಗಳೊಂದಿಗೆ ಸ್ಪರ್ಧೆಯಲ್ಲಿ ಪ್ರಮುಖ ವಿಕೆಟ್ ಟೇಕರ್ ಆಗಿ ಸಾಧನೆ ಬರೆದಿದ್ದರು. ಆದರೆ, ಪಂದ್ಯಾವಳಿಯ ಸಮಯದಲ್ಲಿ ನೋವಿನಿಂದ ಆಡಿದ್ದ ಅವರು, ತಮ್ಮ ಪಾದದ ಚಿಕಿತ್ಸೆಗಾಗಿ ಚುಚ್ಚುಮದ್ದನ್ನು ತೆಗೆದುಕೊಂಡರು ಮತ್ತು ಕ್ರಿಕೆಟ್‌ನಿಂದ ದೂರವಿದ್ದರು.
ICC ಈವೆಂಟ್‌ನ ನಂತರ ಆಸ್ಟ್ರೇಲಿಯಾ ವಿರುದ್ಧದ T20I ಸರಣಿಯನ್ನು ಮೊಹಮ್ಮದ್ ಶಮಿ ಕಳೆದುಕೊಂಡರು. ಇದಲ್ಲದೆ ಅವರು ಸಂಪೂರ್ಣ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದರು. ಅವರು ಅಫ್ಘಾನಿಸ್ತಾನ ಸರಣಿಯನ್ನೂ ಕಳೆದುಕೊಂಡಿದ್ದಾರೆ ಮತ್ತು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿಲ್ಲ.
Just had a successful heel operation on my achilles tendon! 👟 Recovery is going to take some time, but looking forward to getting back on my feet. #AchillesRecovery #HeelSurgery #RoadToRecovery pic.twitter.com/LYpzCNyKjS
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) February 26, 2024
ಈಗ ಹಿಮ್ಮಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಅವರು, ಮಾರ್ಚ್ 22 ರಿಂದ ಮೇ 26 ರವರೆಗೆ ನಡೆಯಲಿರುವ IPL 2024 ರಿಂದ ಹೊರಗುಳಿಯಬೇಕಾಗುತ್ತದೆ. ಈ ಗಾಯವು ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್‌ಗೆ ಭಾರಿ ಹೊಡೆತವನ್ನು ನೀಡುತ್ತದೆ. ಐಪಿಎಲ್ 2023 ರಲ್ಲಿ ಮೊಹಮ್ಮದ್ ಶಮಿ ಅವರು ತಂಡದ ಅತಿ ಹೆಚ್ಚು ವಿಕೆಟ್ ಟೇಕರ್ ಆಗಿದ್ದರು. ಬರೋಬ್ಬರಿ 28 ವಿಕೆಟ್ ಕಿತ್ತಿದ್ದರು. ಈ ಬಾರಿ ಅವರು ಪಂದ್ಯಗಳಿಂದ ಹೊರಗುಳಿಯುತ್ತಿರುವುದು ಗುಜರಾತ್ ಟೈಟಾನ್ಸ್ ತಂಡಕ್ಕೆ ದೊಡ್ಡ ಹೊಡೆತ.
ಇನ್ನು, ಐಪಿಎಲ್ 2024 ಮುಗಿದ ಐದು ದಿನಗಳ ನಂತರ ಕೆರಿಬಿಯನ್ ಮತ್ತು ಅಮೆರಿಕಾದಲ್ಲಿ ಪ್ರಾರಂಭವಾಗುವ ಮುಂಬರುವ ಟಿ20 ವಿಶ್ವಕಪ್‌ನಿಂದ ಕೂಡ ವೇಗಿ ಮೊಹಮ್ಮದ್ ಶಮಿ ಹೊರಗುಳಿಯುವ ಸಾಧ್ಯತೆಯಿದೆ.
ಐಪಿಎಲ್ 2024
ಕ್ರಿಕೆಟ್ ಪ್ರೇಮಿಗಳ ಪಾಲಿನ ದೊಡ್ಡ ಹಬ್ಬ ಐಪಿಎಲ್ 2024 ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 22 ರಿಂದ ಮೇ 26 ರವರೆಗೆ ಪಂದ್ಯಗಳು ನಡೆಯಲಿವೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ಚೆನ್ನೈನ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯಲಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications