IPL 2024: ವಿರಾಟ್ ಕೊಹ್ಲಿ ಬಳಿ ಆರೆಂಜ್ ಕ್ಯಾಪ್; ಪಾಯಿಂಟ್ಸ್ ಟೇಬಲ್ ಹೇಗಿದೆ ನೋಡಿ
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮಾತ್ರ ಎರಡು ಪಂದ್ಯಗಳನ್ನು ಆಡಿವೆ. (ಮಾರ್ಚ್ 26, ಸಿಎಸ್‌ಕೆ Vs ಜಿಟಿ ಪಂದ್ಯದ ಬಳಿಕ), ಆರಂಭದಲ್ಲೇ ರೋಚಕ ಪಂದ್ಯಗಳು ಅಭಿಮಾನಿಗಳಿಗೆ ಥ್ರಿಲ್ ನೀಡಿವೆ.
ಮೊದಲ ರೌಂಡ್ ಪಂದ್ಯಗಳ ಮುಕ್ತಾಯದ ಬಳಿಕ, ಅಂಕಪಟ್ಟಿ ಹೇಗಿದೆ. ಅತಿ ಹೆಚ್ಚು ಸ್ಕೋರ್ ಮಾಡಿದವರಿಗೆ ಸಿಗುವ ಆರೆಂಜ್ ಕ್ಯಾಪ್ ಮತ್ತು ಹೆಚ್ಚು ವಿಕೆಟ್ ಪಡೆದ ಆಟಗಾರನಿಗೆ ಸಿಗುವ ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎನ್ನುವ ಮಾಹಿತಿ ಇಲ್ಲಿದೆ.

ಐಪಿಎಲ್ ಅಂಕಪಟ್ಟಿ ಹೇಗಿದೆ?
ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ಅಗ್ರಸ್ಥಾನದಲ್ಲಿದೆ. ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿರುವ ಹಾಲಿ ಚಾಂಪಿಯನ್ ತಂಡ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆರಂಭ ಪಡೆದಿದೆ.
ಉಳಿದಂತೆ ಕ್ರಮವಾಗಿ ರಾಜಸ್ಥಾನ ರಾಯಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ಈ ಎರಡೂ ತಂಡಗಳು ಆಡಿರುವ ಮೊದಲ ಪಂದ್ಯ ಗೆದ್ದು ಅಂಕಗಳನ್ನು ಪಡೆದಿವೆ.
ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಕ್ರಮವಾಗಿ ನಾಲ್ಕು, ಐದು ಮತ್ತು ಆರನೇ ಸ್ಥಾನದಲ್ಲಿವೆ. ಮೂರು ತಂಡಗಳು ಎರಡು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋಲು ಕಂಡಿವೆ.
ಸನ್‌ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕ್ರಮವಾಗಿ 7, 8, 9 ಮತ್ತು 10 ನೇ ಸ್ಥಾನದಲ್ಲಿವೆ. ನಾಲ್ಕು ತಂಡಗಳು ಆಡಿರುವ ಮೊದಲ ಪಂದ್ಯವನ್ನು ಸೋತಿದ್ದು ರನ್ ರೇಟ್ ಆಧಾರದಲ್ಲಿ ಸ್ಥಾನ ಪಡೆದಿವೆ.
ಕೊಹ್ಲಿ ಬಳಿ ಇದೆ ಆರೆಂಜ್ ಕ್ಯಾಪ್
ಇನ್ನು ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಎರಡು ಪಂದ್ಯಗಳಲ್ಲಿ 98 ರನ್ ಗಳಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ 77 ರನ್ ಗಳಿಸಿ ಆರ್ ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಎರಡನೇ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್‌ನ ಸ್ಯಾಮ್ ಕರನ್ ಇದ್ದರೆ ಮೂರನೇ ಸ್ಥಾನದಲ್ಲಿ ಸಿಎಸ್‌ಕೆ ತಂಡದ ಬ್ಯಾಟರ್ ಶಿವಂ ದುಬೆ ಇದ್ದಾರೆ.
ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಸಿಎಸ್‌ಕೆ ತಂಡದ ಮುಸ್ತಾಫಿಜುರ್ ರೆಹಮಾನ್ ಮೊದಲ ಸ್ಥಾನದಲ್ಲಿದ್ದಾರೆ. ಎರಡು ಪಂದ್ಯಗಳಲ್ಲಿ ಅವರು ಆರು ವಿಕೆಟ್ ಪಡೆದುಕೊಂಡಿದ್ದಾರೆ. ಮೊದಲ ಪಂದ್ಯದಲ್ಲೇ ಮೂರು ವಿಕೆಟ್ ಪಡೆದಿರುವ ಜಸ್ಪ್ರೀತ್ ಬುಮ್ರಾ ಎರಡನೇ ಸ್ಥಾನದಲ್ಲಿದ್ದರೆ, ಎರಡು ಪಂದ್ಯಗಳಲ್ಲಿ ಮೂರು ವಿಕೆಟ್ ಪಡೆದ ಪಂಜಾಬ್ ಕಿಂಗ್ಸ್‌ನ ಹಪ್ರೀತ್ ಬಾರ್ ಮೂರನೇ ಸ್ಥಾನದಲ್ಲಿದ್ದಾರೆ.












Click it and Unblock the Notifications