LSG vs RR: ಎಲ್‌ಎಸ್‌ಜಿ ಮಣಿಸಿದ ರಾಜಸ್ಥಾನ ಪ್ಲೇ ಆಫ್‌ಗೆ ಹತ್ತಿರ
ಸಂಘಟಿತ ಆಟದ ಪ್ರದರ್ಶನ ನೀಡಿದ ರಾಜಸ್ಥಾನ ರಾಯಲ್ಸ್ ಐಪಿಎಲ್ 2024ರ ಪ್ಲೇ ಆಫ್‌ಗೆ ಒಂದು ಕಾಲು ಇಟ್ಟಿದೆ. ಲಖ್ನೋ ಸೂಪರ್ ಜೇಂಟ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಜಸ್ಥಾನ ಏಳು ವಿಕೆಟ್‌ಗಳಿಂದ ರಾಯಲ್ಸ್ ತಂಡವನ್ನು ಮಣಿಸಿ ಅಬ್ಬರಿಸಿತು.
ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 44 ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಖ್ನೋ ಸೂಪರ್ ಜೇಂಟ್ಸ್ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 196 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಜಸ್ಥಾನ ಇನ್ನು ಆರು ಎಸೆತ ಬಾಕಿ ಇರುವಂತೆ ಏಳು ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದು ಪ್ಲೇ ಆಫ್‌ಗೆ ಒಂದು ಹೆಜ್ಜೆಯನ್ನು ಇಟ್ಟಿದೆ.

ರಾಹುಲ್ ಸೊಗಸಾದ ಆಟ
ಇದಕ್ಕೂ ಮೊದಲು ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟ್ ಮಾಡಿದ ಲಖ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕ ಕ್ವಿಂಟನ್ ಡಿಕಾಕ್ (8), ಮಾರ್ಕಸ್ ಸ್ಟೋಯಿನಿಸ್ (0), ಉಭಯ ಆಟಗಾರರು ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ 48 ಎಸೆತಗಳಲ್ಲಿ 76 ರನ್ ಗಳಿಸಿ ಔಟ್ ಆದರು. ಇವರ ಅಮೋಘ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ, 2 ಸಿಕ್ಸರ್ ಸೇರಿವೆ.
ಇನ್ನು ಮಿಡ್ಲ್ ಆರ್ಡರ್ ಬ್ಯಾಟರ್ ದೀಪಕ್ ಹೂಡಾ ಸಹ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 31 ಎಸೆತಗಳಲ್ಲಿ ಏಳು ಬೌಂಡರಿ ನೆರವಿನಿಂದ 50 ರನ್ ಬಾರಿಸಿ ತಂಡಕ್ಕೆ ನೆರವಾದರು. ಉಳಿದಂತೆ ಆಯುಷ್ ಬಡೋನಿ (ಅಜೇಯ 18), ಕೃನಾಲ್ ಪಾಂಡ್ಯ (ಅಜೇಯ 15) ತಂಡದ ಮೊತ್ತವನ್ನು ಹಿಗ್ಗಿಸುವಲ್ಲಿ ನೆರವಾದರು.
ಕಳಪೆ ಆರಂಭ
ಲಕ್ನೋ ಸೂಪರ್ ಜೈಂಟ್ಸ್ ನೀಡಿದ 196 ರನ್ ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಗೆ ಬಂದ ರಾಜಸ್ಥಾನ್ ರಾಯಲ್ಸ್ ಉತ್ತಮ ಆರಂಭ ಕಂಡಿತು. ಆರಂಭಿಕರಾದ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ 5.5 ಓವರ್‌ಗಳಲ್ಲಿ 60 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಜೋಸ್ ಬಟ್ಲರ್ 18 ಎಸೆತಗಳಲ್ಲಿ 34 ರನ್ ಗಳಿಸಿ ಯಶ್ ಠಾಕೂರ್ ಗೆ ವಿಕೆಟ್ ಒಪ್ಪಿಸಿದರು. ಯಶಸ್ವಿ ಜೈಸ್ವಾಲ್ 18 ಎಸೆತಗಳಲ್ಲಿ 24 ರನ್ ಕೊಡುಗೆ ನೀಡಿದರು. ಯಶಸ್ವಿ ಜೈಸ್ವಾಲ್ ಅವರನ್ನು ಮಾರ್ಕಸ್ ಸ್ಟೊಯಿನಿಸ್ ಔಟ್ ಮಾಡಿದರು.
ನಾಲ್ಕನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದ ರಿಯಾನ್ ಪರಾಗ ಶನಿವಾರ ರನ್ ಕಲೆ ಹಾಕುವಲ್ಲಿ ವಿಫಲರಾದರು. ಇವರು 14 ರನ್ ಗಳಿಸಿದ್ದಾಗ ಅಮಿತ್ ಮಿಶ್ರಾ ತೋಡಿದ ಖೆಡ್ಡಾಗೆ ಬಲಿಯಾದರು.

ನಾಲ್ಕನೇ ವಿಕೆಟ್‌ಗೆ ಶತಕದ ಜೊತೆಯಾಟ
ನಾಲ್ಕನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್ ಹಾಗೂ ಧೃವ್ ಜುರೇಲ್ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿ 62 ಎಸೆತಗಳಲ್ಲಿ ಅಜೇಯ 121ರನ್‌ಗಳ ಜೊತೆಯಾಟವನ್ನು ನೀಡಿ ತಂಡಕ್ಕೆ ನೆರವಾದರು. ನಾಯಕ ಸಂಜು ಸ್ಯಾಮ್ಸನ್ 33 ಎಸೆತಗಳಲ್ಲಿ 7 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 71 ರನ್ ಸಿಡಿಸಿ ಜಯದಲ್ಲಿ ಮಿಂಚಿದರು.
ಇತ್ತೀಚಿಗೆ ಅಂತಾರಾಷ್ಟ್ರೀಯ ಟೆಸ್ಟ್‌ಗೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಧೃವ್ ಜುರೇಲ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 34 ಎಸೆತಗಳಲ್ಲಿ ಅಜೇಯ 52 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಮಿಂಚಿದರು.

ರಾಜಸ್ಥಾನ ಆಡಿರುವ 9 ಪಂದ್ಯಗಳಲ್ಲಿ 8 ಜಯ ಸಾಧಿಸಿ ಪ್ಲೇ ಆಫ್‌ಗೆ ಒಂದು ಕಾಲು ಇಟ್ಟು ಆಗಿದೆ. ಸಂಜು ಸ್ಯಾಮ್ಸನ್ ಮುಂದಾಳತ್ವದ ತಂಡ ಒಟ್ಟು 16 ಅಂಕವನ್ನು ಕಲೆ ಹಾಕಿದ್ದು, ಪ್ಲೇ ಆಫ್ ಸನಿಹಕ್ಕೆ ಬಂದು ನಿಂತಿದೆ.












Click it and Unblock the Notifications