RCB Team: ಹಸರಂಗ, ಹರ್ಷಲ್ ಪಟೇಲ್ ಸೇರಿ 11 ಆಟಗಾರರನ್ನು ಬಿಡುಗಡೆ ಮಾಡಿದ ಆರ್‌ಸಿಬಿ : ಉಳಿಸಿಕೊಂಡ ಆಟಗಾರರ ಪಟ್ಟಿ
2024ರ ಐಪಿಎಲ್ ಹರಾಜಿಗೆ ಮುನ್ನ ಎಲ್ಲಾ 10 ತಂಡಗಳು ಹಲವು ಆಟಗಾರರನ್ನು ಬಿಡುಗಡೆ ಮಾಡಿದ್ದು, ಕೆಲವು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ಮೂಡಿಸಿವೆ. ಮೊದಲ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 11 ಆಟಗಾರರನ್ನು ಬಿಡುಗಡೆ ಮಾಡಿದೆ.
ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ವೇಗಿ ಹರ್ಷಲ್ ಪಟೇಲ್ ಜೊತೆಗೆ ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಫಿನ್ ಅಲೆನ್ ಸೇರಿದಂತೆ ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.

ಇನ್ನು ದಿನೇಶ್ ಕಾರ್ತಿಕ್ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದೇ ಎಣಿಸಲಾಗಿತ್ತಾದರೂ, ಅವರನ್ನು ಕೂಡ ತಂಡದಲ್ಲಿ ಉಳಿಸಿಕೊಂಡಿದೆ. ಕಳೆದ ಐಪಿಎಲ್‌ನಲ್ಲಿ ಗಾಯಗೊಂಡಿದ್ದ ರೀಸ್ ಟೋಪ್ಲೆ ಅವರನ್ನು ಅವರನ್ನು ಕೂಡ ತಂಡದಲ್ಲಿ ಉಳಿಸಿಕೊಂಡಿದ್ದು, ಪ್ರಮುಖ ಆಲ್‌ರೌಂಡರ್ ವಿಲ್ ಜ್ಯಾಕ್ಸ್ ಅವರನ್ನು ಅವರನ್ನು ಕೂಡ ತಂಡದಲ್ಲಿ ಉಳಿಸಿಕೊಂಡಿದೆ.
ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವ ಮೂಲಕ ಆರ್ ಸಿಬಿ ಪರ್ಸ್‌ನಲ್ಲಿ 40.75 ಕೋಟಿ ರೂಪಾಯಿಗಳನ್ನು ಉಳಿಸಿಕೊಂಡಿದ್ದು, ಹರಾಜಿನಲ್ಲಿ ಪ್ರಮುಖ ಆಟಗಾರರನ್ನು ಖರೀದಿ ಮಾಡುವ ಸಾಧ್ಯತೆ ಇದೆ.
ಬಿಡುಗಡೆ ಮಾಡಿದ ಆಟಗಾರರು
ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ, ಆರ್‌ಸಿಬಿ ವನಿಂದು ಹಸರಂಗ, ಫಿನ್ ಅಲೆನ್, ಕೇದಾರ್ ಜಾಧವ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್ ಮತ್ತು ಸಿದ್ದಾರ್ಥ್ ಕೌಲ್ ಅವರನ್ನು ಬಿಡುಗಡೆ ಮಾಡಿದೆ.
ವನಿಂದು ಹಸರಂಗ, ಹರ್ಷಲ್ ಪಟೇಲ್ ಮತ್ತು ಜೋಶ್ ಹೇಜಲ್‌ವುಡ್‌ರನ್ನು ಬಿಡುಗಡೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ನ್ಯೂಜಿಲೆಂಡ್‌ನ ಆಲ್‌ರೌಂಡರ್ ಮೈಕೆಲ್ ಬ್ರೇಸ್‌ವೆಲ್‌ರನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ. 150 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡುತ್ತಾರೆ ಎಂದು ಹೇಳಿದ್ದ ಅವಿನಾಶ್ ಸಿಂಗ್ ಅವರನ್ನು ಕೂಡ ಬಿಡುಗಡೆ ಮಾಡಿದೆ.
ಆರ್‌ಸಿಬಿ ಉಳಿಸಿಕೊಂಡ ಆಟಗಾರರು
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ರೀಸ್ ಟೋಪ್ಲಿ, ವಿಲ್ ಜ್ಯಾಕ್ಸ್, ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಮಹಿಪಾಲ್ ಲೋಮ್ರೋರ್, ಮನೋಜ್ ಭಾಂಡಗೆ, ಕರ್ಣ್ ಶರ್ಮಾ, ಮಯಾಂಕ್ ದಾಗರ್, ವೈಶಾಕ್ ವಿಜಯಕುಮಾರ್, ಆಕಾಶ್ ದೀಪ್, ರಾಜನ್ ಕುಮಾರ್, ಹಿಮಾಂಶು ಶರ್ಮಾ.












Click it and Unblock the Notifications