IPL 2024; ಈ ಎರಡು ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬದಲಿಸಿದ ಬಿಸಿಸಿಐ; ಕಾರಣವೇನು?
ಮಹತ್ವದ ಬೆಳವಣಿಗೆಯಲ್ಲಿ ಬಿಸಿಸಿಐ ಎರಡು ಐಪಿಎಲ್ ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯಗಳ ದಿನಾಂಕ ಬದಲಾವಣೆ ಮಾಡಲಾಗಿದೆ.
ಏಪ್ರಿಲ್ 16 ರಂದು ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್-ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿರುವ ಪಂದ್ಯವನ್ನು ಏಪ್ರಿಲ್ 17ಕ್ಕೆ ಮುಂದೂಡಲಾಗಿದೆ. ಏಪ್ರಿಲ್ 17ರಂದು ಕೋಲ್ಕತ್ತಾ ನೈಟ್ ರೈಡರ್ಸ್ ತವರಿನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ಮಂಗಳವಾರ ಏಪ್ರಿಲ್ 16 ಕ್ಕೆ ಆಡಲು ನಿರ್ಧರಿಸಲಾಗಿದೆ. ಈ ಬದಲಾವಣೆಗೆ ಬಿಸಿಸಿಐ ಯಾವುದೇ ಕಾರಣವನ್ನು ನೀಡಿಲ್ಲ.

2024 ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೆಕೆಆರ್-ಆರ್‌ಆರ್ ಪಂದ್ಯವನ್ನು ರಾಮ ನವಮಿಯ ಕಾರಣ ಮರು ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ಪಿಟಿಐ ಸೋಮವಾರ ವರದಿ ಮಾಡಿತ್ತು. ಆದರೆ ಈ ಎರಡು ದಿನಾಂಕಗಳಲ್ಲಿ ಪಂದ್ಯಗಳನ್ನು ಮರುಹೊಂದಿಸಲು ಸ್ಪಷ್ಟಕಾರಣವನ್ನು ನೀಡಿಲ್ಲ.
ಎರಡು ಪಂದ್ಯಗಳ ವೇಳಾಪಟ್ಟಿ ಮಾತ್ರ ಬದಲು
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಏಪ್ರಿಲ್ 17, 2024 ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯವನ್ನು ಈಗ ಏಪ್ರಿಲ್ 16, 2024 ರಂದು ಒಂದು ದಿನ ಮೊದಲು ಆಡಲಾಗುತ್ತದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಈ ಹಿಂದೆ ಏಪ್ರಿಲ್ 16, 2024 ರಂದು ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿತ್ತು. ಆ ಪಂದ್ಯವನ್ನು ಏಪ್ರಿಲ್ 17, 2024 ರಂದು ಆಡಲಾಗುತ್ತದೆ, ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.












Click it and Unblock the Notifications